ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾರಿಗೆ ಇಲಾಖೆ ಆದಾಯದಲ್ಲಿ 131 ಕೋಟಿ ಹೆಚ್ಚಳ: ಎಚ್ಡಿಕೆ ಬಹಿರಂಗ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ಸಾರಿಗೆ ಇಲಾಖೆ ಆದಾಯದಲ್ಲಿ ಈ ಬಾರಿ 131 ಕೋಟಿ ರೂ. ಹೆಚ್ಚಳವಾಗಿದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬಹಿರಂಗಪಡಿಸಿದ್ದಾರೆ.

ಈ ಬಾರಿ ನಾಲ್ಕು ನಿಗಮಗಳಿಂದ ಹೆಚ್ಚುವರಿ ಹಣ ಸಂಗ್ರಹವಾಗಿದ್ದರೂ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವವನ್ನು ಯಾಕೆ ಸಲ್ಲಿಸುತ್ತಿದ್ದೀರಿ ಎಂದು ಸಾರಿಗೆ ಇಲಾಖೆಗೆ ಪ್ರಶ್ನಿಸಿದರು.

ಬಸ್‌ ಪ್ರಯಾಣ ದರ ಹೆಚ್ಚಳ ಪ್ರಸ್ತಾವಕ್ಕೆ ಕುಮಾರಸ್ವಾಮಿ ನಕಾರ ಬಸ್‌ ಪ್ರಯಾಣ ದರ ಹೆಚ್ಚಳ ಪ್ರಸ್ತಾವಕ್ಕೆ ಕುಮಾರಸ್ವಾಮಿ ನಕಾರ

ಪ್ರಯಾಣಕರಿಗೆ ಬಸ್ ಸೌಲಭ್ಯ ಮಾತ್ರವಲ್ಲದೆ ಅವರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ವಿಸ್ತರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಪ್ರಯಾಣಿಕರಿಗೆ ಹೊರೆಯಾಗದಂತೆ ಇಲಾಖೆಯ ನಷ್ಟವನ್ನು ಸರಿದೂಗಿಸಲು ಯೋಜನೆ ರೂಪಿಸುವಂತೆ ಸೂಚಿಸಿದರು.

Rs131 Crore income increased in transport dept

ಬಸ್‌ ಪ್ರಯಾಣ ದರ ಶೇ.18ರಷ್ಟು ಹೆಚ್ಚಳಕ್ಕೆ ಸರ್ಕಾರ ಚಿಂತನೆ ಬಸ್‌ ಪ್ರಯಾಣ ದರ ಶೇ.18ರಷ್ಟು ಹೆಚ್ಚಳಕ್ಕೆ ಸರ್ಕಾರ ಚಿಂತನೆ

ಮೆಟ್ರೋ ರೈಲಿನೊಂದಿಗೆ ಸಮನ್ವಯ ಸಾಧಿಸುವತ್ತ ಗಮನ ಹರಿಸಬೇಕು. ಬಸ್ ದರ ಹೆಚ್ಚಿಸುವ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಯವರು ತಿಳಿಸಿದರು. ಬಸ್ ದರ ಹೆಚ್ಚಿಸದೇ ನಷ್ಟವನ್ನು ಸರಿದೂಗಿಸಲು ಪರ್ಯಾಯ ಮಾರ್ಗವನ್ನು ಕಂಡುಕೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಬಸ್ ಪ್ರಯಾಣ ದರ ಏರಿಕೆ ಆದೇಶಕ್ಕೆ ಬ್ರೇಕ್ ಹಾಕಿದ ಕುಮಾರಸ್ವಾಮಿ ಬಸ್ ಪ್ರಯಾಣ ದರ ಏರಿಕೆ ಆದೇಶಕ್ಕೆ ಬ್ರೇಕ್ ಹಾಕಿದ ಕುಮಾರಸ್ವಾಮಿ

ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ.ಬಸವರಾಜು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

English summary
Chief minister H.D. Kumaraswamy has revealed that the transport department income was increased about RS.131 crores than last financial year and the officials should take initiative to provide facilities more and more to passengers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X