ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರುದ್ರೇಶ್ ಕೊಲೆ ಪ್ರಕರಣ: ಭುಗಿಲೆದ್ದ ಬಿಜೆಪಿ ಆಕ್ರೋಶ

|
Google Oneindia Kannada News

ಬೆಂಗಳೂರು, ಅಕ್ಟೋಬರ್, 17: ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ವಿರೋಧಿಸಿ ಬಿಜೆಪಿಯಿಂದ ಶಿವಾಜಿನಗರದ ದುಂಡು ಮಾರಮ್ಮ ವೃತ್ತದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗುತ್ತಿದೆ.

ಕೇರಳ ಮತ್ತು ಕರ್ನಾಟದಲ್ಲಿ ಆರ್ ಎಸ್ ಎಸ್ ಮತ್ತು ಬಿಜೆಪಿ ಏಳಿಗೆ ಸಹಿಸದ ಕಾಂಗ್ರೆಸ್ ಕೊಲೆಗಳನ್ನು ಮಾಡಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. [ಶಿವಾಜಿನಗರದಲ್ಲಿ ಆರೆಸ್ಸೆಸ್ ಕಾರ್ಯಕರ್ತನ ಕಗ್ಗೊಲೆ]

ರುದ್ರೇಶ್ ಕೊಲೆ ಪ್ರಕರಣ: ಭುಗಿಲೆದ್ದ ಬಿಜೆಪಿ ಆಕ್ರೋಶ

ಪ್ರಕರಣವನ್ನು ಖಂಡಿಸಿ ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.

ಶಾಸಕ ಆರ್.ಅಶೋಕ್ ಮಾತನಾಡಿ "ತನಿಖೆ ನಡೆಸುವ ಕುರಿತು ರಾಜ್ಯ ಸರ್ಕಾರವಾಗಲೀ, ಪೊಲೀಸ್ ಇಲಾಖೆಯಾಗಲಿ ಯಾವುದೇ ಮಾಹಿತಿ ನೀಡುತ್ತಿಲ್ಲ. ಸರ್ಕಾರ ಮತ್ತು ಇಲಾಖೆಯ ಈ ವರ್ತನೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಶಿವಾಜಿನಗರ, ಸರ್ವಜ್ಞನಗರ, ಪುಲಿಕೇಶಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ಶಿವಾಜಿನಗರದಲ್ಲಿ 144 ಸೆಕ್ಷನ್ ವಿಧಿಸಲಾಗಿದೆ.

ಸಂಸದರಾದ, ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ಶಾಸಕ ಆರ್.ಅಶೋಕ್, ಶಾಸಕ ಸುರೇಶ್ ಕುಮಾರ್, ಕಟ್ಟಾ ಸುಬ್ರಹ್ಮಣ್ಯ ನಾಯುಡು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

English summary
Karnataka BJP leaders led by Suresh Kumar, R Ashoka, Shobha Karandlaje, PC Mohan condemn the brutal killing of RSS worker Rudresh. Rudresh (35) was hacked to death on Sunday afternoon in Shivajinagar area, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X