ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

RTE ಅರ್ಜಿ ಸಲ್ಲಿಕೆ ಪ್ರಕ್ರಿಯೆ ಫೆ.20 ರಿಂದ ಆರಂಭ!

|
Google Oneindia Kannada News

ಬೆಂಗಳೂರು, ಫೆಬ್ರವರಿ 06 : ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳನ್ನು ಶಾಲೆಗೆ ಸೇರಿಸಲು ಮುಂದಾಗಿರುವ ಪೋಷಕರಿಗೊಂದು ಸಿಹಿ ಸುದ್ದಿ ಇದೆ. ಫೆ.20 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಈ ಬಾರಿ ಆರ್ ಟಿಇ ಅಡಿ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ 1.44 ಲಕ್ಷ ಸೀಟುಗಳನ್ನು ಕಾಯ್ದಿರಿಸಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಶೇ.25 ರಷ್ಟು ಸೀಟುಗಳಿಗೆ ಉಚಿತವಾಗಿ ಪ್ರವೇಶ ನೀಡುವ ಬಗ್ಗೆ ಆರ್ ಟಿಇ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದೇ ಫೆಬ್ರವರಿ 20 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್ 21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್ 2 ರಂದು ಲಾಟರಿ ಪ್ರಕ್ರಿಯೆ ಅರ್ಹತಾ ಸುತ್ತಿನ ಪಟ್ಟಿ ಪ್ರಕಟವಾಗಲಿದೆ.

ಏಪ್ರಿಲ್ 6 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತದೆ. ಏಪ್ರಿಲ್ 7 ರಿಂದ 17 ರವರೆಗೆ ಮೊದಲ ಸುತ್ತಿನ ದಾಖಲಾತಿ ನಡೆಯಲಿದೆ. ಏಪ್ರಿಲ್ 26 ರಂದು 2 ನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಏಪ್ರಿಲ್ 27 ರಿಂದ ಮೇ 5 ರವರೆಗೆ 2 ನೇ ಸುತ್ತಿನ ದಾಖಲಾತಿ ನಡೆಯಲಿದೆ.

RTE reserved seats admission procedure will starts from Feb 20

ಮೇ 14 ರಂದು3 ನೇ ಸುತ್ತಿನ ಸೀಟು ಹಂಚಿಕೆ ಮಾಡಲಿದ್ದು, ಮೇ 16 ರಿಂದ 22 ರವರೆಗೆ ೩ನೇ ಸುತ್ತಿನ ದಾಖಲಾತಿ ನಡೆಯಲಿದೆ. ಪೋಷಕರು ಫೆಬ್ರವರಿ 20 ರಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಮಗು, ಪೋಷಕರ ಆಧಾರ್ ಕಾರ್ಡ್ ಇರಬೇಕು. ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಉಚಿತವಾಗಿ ಸರ್ಜಿ ಸಲ್ಲಿಸಬಹುದಾಗಿದೆ.

English summary
Fore next academic year admission procedure of RTE 25 percent seats are started. Patents can apply for there children from February 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X