ರುದ್ರೇಶ್ ಹತ್ಯೆ : ಶೋಭಾ ವಿರುದ್ಧ ಮಾನನಷ್ಟ ಮೊಕದ್ದಮೆ

Written By: Ramesh
Subscribe to Oneindia Kannada

ಬೆಂಗಳೂರು, ನವೆಂಬರ್. 06 : ಆರ್ ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯಲ್ಲಿ ಸಚಿವ ರೋಷನ್ ಬೇಗ್ ಕೈವಾಡವಿದೆ ಎಂದು ಹೇಳಿಕೆ ನೀಡಿದ್ದ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸಚಿವ ರೋಷನ್ ಬೇಗ್ ಅವರು ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದಾರೆ.

ರೋಷನ್ ಬೇಗ್ ಪರ ವಕೀಲ ಶಂಕರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಶೋಭಾ ಕರಂದ್ಲಾಜೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಗಿದೆ. ಮಾನನಷ್ಟ ಮೊಕದ್ದಮೆ ಹೂಡಿದ ಬಗ್ಗೆ ನೋಟಿಸ್ ಕಳುಹಿಸಲಾಗಿದ್ದು, ಉತ್ತರಿಸುವಂತೆ ಸೂಚಿಸಲಾಗಿದೆ' ಎಂದು ಹೇಳಿದ್ದಾರೆ. [ರುದ್ರೇಶ್ ಕೊಲೆ ಹಿಂದೆ ಬೇಗ್ ಕೈವಾಡ: ಕರಂದ್ಲಾಜೆ]

Rudresh murder: Minister Baig contemplates to file defamation case against Shobha Karandlaje

ರುದ್ರೇಶ್ ಹತ್ಯೆಗೆ ರೋಷನ್ ಬೇಗ್ ಸುಫಾರಿ ಕೊಟ್ಟಿದ್ದಾರೆ ಎಂದು ಇತ್ತೀಚೆಗೆ ಶೋಭಾ ಕರಂದ್ಲಾಜೆ ಅವರು ರೇಷನ್ ಬೇಗ್ ಮೇಲೆ ನೇರವಾಗಿ ಆರೋಪ ಮಾಡಿದ್ದರು.

ಬಿಜೆಪಿಯಿಂದ ಪ್ರತಿಭಟನೆ : ರುದ್ರೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಬೇಕು ಮತ್ತು ಕೆಎಫ್ ಡಿ ಮತ್ತು ಪಾಪ್ಯುಲರ್ ಫ್ರಂಟ್ ಇಂಡಿಯಾ ಸಂಘಟನೆಗಳನ್ನು ನಿಷೇಧ ಮಾಡುವಂತೆ ಒತ್ತಾಯಿಸಿ ಬಿಜೆಪಿ ನವೆಂಬರ್ 8ರಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.

ನವೆಬಂರ್ 8ರ ಪ್ರತಿಭಟನೆಯ ಯಶಸ್ಸಿಗೆ ಶ್ರಮಿಸಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 1000 ಜನರು ಪಾಲ್ಗೊಳ್ಳುವಂತೆ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Minister for Infrastructure and Haj R Roshan Baig on Friday threatened to file a defamation case against BJP MP Shobha Karandlaje for linking him with the murder of RSS activist Rudresh.
Please Wait while comments are loading...