ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಏಕತೆಗಾಗಿ ಓಟ ಯಶಸ್ವಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 31: ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮ ಜಯಂತಿ ಅಂಗವಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವತಿಯಿಂದ ಮಾನ್ಯತಾ ಟೆಕ್‌ಪಾರ್ಕ್‌ನಿಂದ ಬೃಹತ್ ಏಕತೆಗಾಗಿ ಓಟವನ್ನು ಏರ್ಪಡಿಸಲಾಗಿತ್ತು.

ಕೇಂದ್ರ ಸಚಿವ ಡಿವಿ ಸದಾನಂದಗೌಡ ಹಾಗೂ ಮಲ್ಲೇಶ್ವರ ಶಾಸಕ ಡಾ. ಸಿಎನ್ ಅಶ್ವತ್ಥನಾರಾಯಣ ಸೇರಿದಂತೆ ಹಲವಾರು ಜನರು ಮ್ಯಾರಥಾನ್‌ನಲ್ಲಿ ಪಾಲ್ಗೊಂಡು ಸಾರ್ವಜನಿಕರ ಗಮನ ಸೆಳೆದರು. ಸುಮಾರು ಮೂರು ಕಿ.ಮೀ ಉದ್ದದ ಮ್ಯಾರಥಾನ್‌ನಲ್ಲಿ ಸಹಸ್ರಾರು ಜನರು ಪಾಲ್ಗೊಂಡಿದ್ದರು.

LIVE: ಪ್ರತಿಮೆ ಅನಾವರಣದ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ: ಮೋದಿLIVE: ಪ್ರತಿಮೆ ಅನಾವರಣದ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ: ಮೋದಿ

ಅಷ್ಟೇ ಅಲ್ಲದೆ ಬೆಂಗಳೂರು ಮಹಾನಗರ ಬಿಜೆಪಿ ಅಧ್ಯಕ್ಷರಾದ ಪಿಎನ್ ಸದಾಶಿವ, ಶಾಸಕ ರವಿಸುಬ್ರಹ್ಮಣ್ಯ ನೇತೃತ್ವದಲ್ಲಿ ಜಯನಗರದ ಚಂದ್ರಗುಪ್ತ ಮೌರ್ಯ ಕ್ರೀಡಾಂಗಣದಿಂದ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಏಕತಾ ಓಟ ನಡೆಯಿತು.

Run for unity marathon in Bengaluru north parliament constituency

ಜಗತ್ತಿನ ಅತಿ ಎತ್ತರದ ಸರ್ದಾರ್ ಪಟೇಲ್ ಪ್ರತಿಮೆಯಲ್ಲಿ ಏನೇನಿದೆ? ಮಾಹಿತಿ ಇಲ್ಲಿದೆ...ಜಗತ್ತಿನ ಅತಿ ಎತ್ತರದ ಸರ್ದಾರ್ ಪಟೇಲ್ ಪ್ರತಿಮೆಯಲ್ಲಿ ಏನೇನಿದೆ? ಮಾಹಿತಿ ಇಲ್ಲಿದೆ...

ಜಯನಗರದ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಧ್ವಜ ಹಿಡಿದು ರಾಷ್ಟ್ರೀಯತೆ ಮತ್ತು ರಾಷ್ಟ್ರೀಯ ಏಕತೆಯ ಸಂದೇಶ ಸಾರಿದರು.

English summary
'Run for Unity' marathon in memory of Sardar Vallabh Bhai Patel, was organized at Bangalore North Parliamentary constituency at Manyatha tech park on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X