ಬೆಂಗಳೂರು : ಪಾರ್ಕಿಂಗ್ ಸಮಸ್ಯೆ ಪರಿಹಾರಕ್ಕೆ ಮೊಬೈಲ್ ಅಪ್ಲಿಕೇಶನ್

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 07 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಪಾರ್ಕಿಂಗ್‌ನದ್ದು ದೊಡ್ಡ ಸಮಸ್ಯೆ, ಅದರಲ್ಲೂ ವಾಣಿಜ್ಯ ಪ್ರದೇಶಗಳಲ್ಲಿ ಪಾರ್ಕಿಂಗ್‌ಗೆ ಸ್ಥಳ ಹುಡುಕುವುದು ಬಹಳ ಕಷ್ಟ. ಆದರೆ, ಜನರಿಗೆ ಪಾರ್ಕಿಂಗ್‌ಗೆ ಸ್ಥಳವಕಾಶ ಹುಡುಕಲು ಅನುಕೂಲವಾಗುವಂತೆ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ.

ಕೇಂದ್ರ ವಾಣಿಜ್ಯ ಪ್ರದೇಶಗಳಲ್ಲಿ ಎಲ್ಲೆಲ್ಲಿ ವಾಹನ ನಿಲುಗಡೆ ಮಾಡಬಹುದು? ಎಂಬ ಮಾಹಿತಿ ಒದಗಿಸಲು 'ಪ್ಲಾಂಕ್' ಹೆಸರಿನ ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ. ನಗರದ ಇಬ್ಬರು ಉದ್ಯಮಿಗಳು ಈ ಅಪ್ಲಿಕೇಶನ್ ಸಿದ್ಧಪಡಿಸಿದ್ದು, ನಿಲುಗಡೆ ಸ್ಥಳ, ಶುಲ್ಕ ಮುಂತಾದ ಮಾಹಿತಿಗಳು ಅಪ್ಲಿಕೇಶನ್‌ನಲ್ಲಿ ಲಭ್ಯವಿದೆ. [ಸಮ-ಬೆಸ ಸೂತ್ರದ ವಾಹನ ಸಂಚಾರ ಬೆಂಗಳೂರಿಗೆ ಬರಲಿ]

vehicle

ಪ್ಲಾಂಕ್ ಬಗ್ಗೆ ಮಾಹಿತಿ ನೀಡಿರುವ ಪ್ಲಾಂಕ್ ಕಂಪನಿಯ ಕಾರ್ಯನಿರ್ವಾಹಣಾಧಿಕಾರಿ ಅರ್ಜುನ್ ಜೈರಾಜ್ ಅವರು, 'ಬೆಂಗಳೂರು ನಗರದಲ್ಲಿ ಈಗಾಗಲೇ 1 ಸಾವಿರ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಮುಂದಿನ ಆರು ತಿಂಗಳಿನಲ್ಲಿ 10 ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗುತ್ತದೆ' ಎಂದು ಹೇಳಿದ್ದಾರೆ. [ಸಂಚಾರ ನಿಯಮ ಮುರಿದು ಪೊಲೀಸರಿಗೆ ಧಮ್ಕಿ ಹಾಕಿದ್ರೆ ಜೈಲೂಟ!]

ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡಲು 33 ವಾಣಿಜ್ಯ ಕಟ್ಟಡಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಅಪ್ಲಿಕೇಶನ್‌ನಲ್ಲಿ ಪಾರ್ಕಿಂಗ್ ಕಟ್ಟಡ ಇರುವ ಸ್ಥಳ, ಎಷ್ಟು ವಾಹನಗಳ ನಿಲುಗಡೆಗೆ ಅವಕಾಶವಿದೆ ಎಂಬ ಮಾಹಿತಿ, ಪಾರ್ಕಿಂಗ್ ಶುಲ್ಕದ ವಿವರಗಳು ದೊರೆಯಲಿವೆ.

ವಾಣಿಜ್ಯ ಕಟ್ಟಡಗಳ ಮಾಲೀಕರು ತಮ್ಮ ಕಟ್ಟಡದಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲು ಬಯಸಿದರೆ ನೋಂದಣಿ ಮಾಡಿಕೊಳ್ಳಲು ಅಪ್ಲಿಕೇಶನ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಈ ಮೊಬೈಲ್ ಅಪ್ಲಿಕೇಶನ್ ಲಭ್ಯವಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Finding a parking spot at Bengaluru challenge for motorists. Plonk mobile application will help people to search parking lots at city.
Please Wait while comments are loading...