ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜದ್ರೋಹದ ಆರೋಪದಲ್ಲಿ ವಿಡಿಯೋ ಪ್ರಮುಖ ಸಾಕ್ಷಿ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಆಗಸ್ಟ್ 16 : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ದಾಖಲಾಗಿರುವ ರಾಜದ್ರೋಹದ ಪ್ರಕರಣದಲ್ಲಿ ಆರೋಪದಲ್ಲಿ ವಿಡಿಯೋಗಳು ಪ್ರಮುಖ ದಾಖಲೆಗಳಾಗಿವೆ. ಜೆ.ಸಿ.ನಗರ ಪೊಲೀಸರು ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.

ಬೆಂಗಳೂರಿನ ವಸಂತನಗರದ ಮಿಲ್ಲರ್ಸ್‌ ರಸ್ತೆಯಲ್ಲಿರುವ ಯುನೈಟೆಡ್‌ ಥಿಯಾಲಾಜಿಕಲ್‌ ಕಾಲೇಜಿನಲ್ಲಿ ಆಮ್ನೆಸ್ಟಿ ಇಂಟರ್‌ನ್ಯಾಷನಲ್‌ ಇಂಡಿಯಾ ಸಂಸ್ಥೆ ಆಗಸ್ಟ್ 13ರಂದು 'ಬ್ರೋಕನ್‌ ಫ್ಯಾಮಿಲೀಸ್‌' ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು.[ರಾಜದ್ರೋಹದ ಆರೋಪ, ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ಪಷ್ಟನೆಗಳು]

Sedition charge against Amnesty International : Video evidence holds the key

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಲವು ಯುವಕರು ದೇಶ ವಿರೋಧಿ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ. ಎಬಿವಿಪಿ ಬೆಂಗಳೂರು ಉತ್ತರ ವಿಭಾಗದ ಸಂಘಟನಾ ಕಾರ್ಯದರ್ಶಿ ಟಿ.ಜಯಪ್ರಕಾಶ್ ಅವರು ಈ ಕುರಿತು ಸಲ್ಲಿಸಿದ್ದ ದೂರಿನ ಅನ್ವಯ ಜೆ.ಸಿ.ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.[ದೇಶ ವಿರೋಧಿ ಘೋಷಣೆ, ಬೆಂಗಳೂರು ಪೊಲೀಸರಿಂದ FIR]

ಪೊಲೀಸರ ಬಳಿ ಸಿಡಿ ಇದೆ : ಆಗಸ್ಟ್ 13ರಂದು ನಡೆದ 'ಬ್ರೋಕನ್‌ ಫ್ಯಾಮಿಲೀಸ್‌' ಕಾರ್ಯಕ್ರಮದ ವಿಡಿಯೋ ಈ ಪ್ರಕರಣದ ತನಿಖೆಗೆ ಪ್ರಮುಖವಾದ ದಾಖಲೆಗಯಾಗಿದೆ. ಪೊಲೀಸರ ಬಳಿ ಕಾರ್ಯಕ್ರಮದ ಸಿಡಿ ಇದ್ದು, ಅದನ್ನು ವಿಧಿವಿಜ್ಞಾನ ಪ್ರಾಯೋಗಾಲಯಕ್ಕೆ ಕಳುಹಿಸಲಾಗಿದೆ.

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ಐಪಿಸಿ ಸೆಕ್ಷನ್ 142 (ಕಾನೂನು ಬಾಹಿರ ಸಭೆ ಆಯೋಜನೆ), 147 (ಗಲಭೆಗೆ ಪ್ರಚೋದನೆ), 124 (ಎ) ರಾಜದ್ರೋಹ, 153 (ಎ) ಎರಡು ಗುಂಪುಗಳ ನಡುವೆ ಜಾತಿ, ಜನಾಂಗದ ಹೆಸರಿನಲ್ಲಿ ದ್ವೇಷ ಬಿತ್ತುವುದು ಮುಂತಾದ ಆರೋಪಗಳಡಿ ಪ್ರಕರಣ ದಾಖಲಾಗಿದೆ.

ಕಾರ್ಯಕ್ರಮಕ್ಕೆ ಪೊಲೀಸರನ್ನು ಆಹ್ವಾನಿಸಲಾಗಿತ್ತು. ಕಾರ್ಯಕ್ರಮ ನಡೆಯುವಾಗ ಪೊಲೀಸರು ಅಲ್ಲಿದ್ದರು. ಆದರೆ, ಈಗ ನಮ್ಮ ವಿರುದ್ಧ ರಾಜದ್ರೋಹದ ಆರೋಪದಡಿ ಎಫ್‌ಐಆರ್ ದಾಖಲು ಮಾಡುವುದು ಕಾನೂನು ಪ್ರಕಾರ ಸರಿಯೇ? ಎಂದು ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಪ್ರಶ್ನಿಸಿದೆ. ಕಾರ್ಯಕ್ರಮದ ಬಗ್ಗೆ ತನ್ನ ವೆಬ್‌ಸೈಟ್‌ನಲ್ಲಿ ಸ್ಪಷ್ಟನೆ ಕೊಟ್ಟಿದೆ.

English summary
Investigations into the charges of sedition filed against Amnesty International would rely heavily on the videos taken at the event. Bengaluru police filed a case of sedition against Amnesty International which organised an event on August 13, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X