ಬೆಂಗಳೂರು : ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 19 : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಕಚೇರಿಗೆ ನುಗ್ಗಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಲಾಗಿದೆ. ಲಾಠಿ ಚಾರ್ಜ್ ವೇಳೆ ಒಬ್ಬ ಕಾರ್ಯಕರ್ತ ಗಾಯಗೊಂಡಿದ್ದು, ಒಬ್ಬ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಾಳೆ.

ಶುಕ್ರವಾರ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನ ಇಂದಿರಾ ನಗರಲ್ಲಿರುವ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಎಬಿವಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನಯ್ ಬಿದಿರೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.[ಬೆಂಗಳೂರಲ್ಲಿ ಎಬಿವಿಪಿ ಅಸಹಕಾರ ಚಳವಳಿ]

ಈ ಸಂದರ್ಭದಲ್ಲಿ ಕಚೇರಿ ಮುಂದೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ದಾಟಿ ಕಚೇರಿಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದರು. ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.[ರಾಜದ್ರೋಹದ ಆರೋಪದಲ್ಲಿ ವಿಡಿಯೋ ಪ್ರಮುಖ ಸಾಕ್ಷಿ]

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ವಿನಯ್ ಬಿದಿರೆ ಅವರು, 'ಕರ್ನಾಟಕ ಸರ್ಕಾರ ದೇಶದ್ರೋಹಿಗಳನ್ನು ರಕ್ಷಣೆ ಮಾಡಲು ಹೊರಟಿದೆ. ನ್ಯಾಯ ಸಿಗುವ ತನಕ ನಮ್ಮ ಹೋರಾಟ ಮುಂದುವರೆಯಲಿದೆ' ಎಂದು ಹೇಳಿದರು.[ರಾಜದ್ರೋಹದ ಆರೋಪ, ಆಮ್ನೆಸ್ಟಿ ಇಂಟರ್ ನ್ಯಾಷನಲ್ ಸ್ಪಷ್ಟನೆಗಳು]

ಪೊಲೀಸರ ಲಾಠಿ ಪ್ರಹಾರದಿಂದಾಗಿ ಓರ್ವ ಕಾರ್ಯಕರ್ತನಿಗೆ ಗಾಯವಾಗಿದೆ. ವೀಣಾ ಎಂಬ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲಿ ಪೊಲೀಸರ ಜೊತೆ ವಿದ್ಯಾರ್ಥಿಗಳು ಮಾತಿನ ಚಕಮಕಿ ನಡೆಸುತ್ತಿದ್ದಾರೆ....

ಆ.16ರಂದು ಲಾಠಿ ಚಾರ್ಜ್ ನಡೆದಿತ್ತು

ಆ.16ರಂದು ಲಾಠಿ ಚಾರ್ಜ್ ನಡೆದಿತ್ತು

ಆಗಸ್ಟ್ 16ರಂದು ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿತ್ತು. ಆರ್.ಸಿ.ಕಾಲೇಜಿನಿಂದ ಎಬಿವಿಪಿಯ ರಾಷ್ಟ್ರೀಯ ಕಾರ್ಯದರ್ಶಿ ವಿನಯ ಬಿದಿರೆ ನೇತೃತ್ವದಲ್ಲಿ ಹೊರಟ ಬೃಹತ್ ಪ್ರತಿಭಟನಾಜಾಥಾ ರಾಜಭವನ ಬಳಿ ಬರುತ್ತಿದ್ದಂತೆ ಪೊಲೀಸರು ತಡೆದಿದ್ದರು. ರಾಜಭವನಕ್ಕೆ ಮುತ್ತಿಗೆ ಹಾಕಲು ಮುಂದಾದಾಗ ಲಾಠಿ ಪ್ರಹಾರ ನಡೆಸಿದ್ದರು.

ಆಮ್ನೆಸ್ಟಿ ಕಚೇರಿಗಳಿಗೆ ಬೀಗ

ಆಮ್ನೆಸ್ಟಿ ಕಚೇರಿಗಳಿಗೆ ಬೀಗ

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ರಾಜದ್ರೋಹ ಪ್ರಕರಣ ದಾಖಲಾಗುತ್ತಿದ್ದಂತೆ ಬೆಂಗಳೂರು, ಮುಂಬೈ, ದೆಹಲಿಯ ಕಚೇರಿಗಳನ್ನು ಮುಚ್ಚಲಾಗಿದೆ. ಬೆಂಗಳೂರು ಪೊಲೀಸರು ನೀಡಿರುವ ಸಲಹೆಯಂತೆ ಬೆಂಗಳೂರು ಕಚೇರಿಗೆ ಬೀಗ ಹಾಕಲಾಗಿದೆ.

ಎಬಿವಿಪಿಯಿಂದ ಸರಣಿ ಪ್ರತಿಭಟನೆ

ಎಬಿವಿಪಿಯಿಂದ ಸರಣಿ ಪ್ರತಿಭಟನೆ

ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ಬೆಂಗಳೂರಿನ ಯುನೈಟೆಡ್‌ ಥಿಯಾಲಾಜಿಕಲ್‌ ಕಾಲೇಜಿನಲ್ಲಿ ಆಗಸ್ಟ್ 13ರಂದು 'ಬ್ರೋಕನ್‌ ಫ್ಯಾಮಿಲೀಸ್‌' ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಲಾಗಿದೆ ಎಂಬುದು ಆರೋಪವಾಗಿದೆ. ಇದರ ವಿರುದ್ಧ ಎಬಿವಿಪಿ ಸರಣಿ ಪ್ರತಿಭಟನೆ ನಡೆಸುತ್ತಿದೆ.

ರಾಜದ್ರೋಹದ ಪ್ರಕರಣ ದಾಖಲು

ರಾಜದ್ರೋಹದ ಪ್ರಕರಣ ದಾಖಲು

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರು ಉತ್ತರ ವಿಭಾಗದ ಸಂಘಟನಾ ಕಾರ್ಯದರ್ಶಿ ಟಿ.ಜಯಪ್ರಕಾಶ್ ಅವರು ಸಲ್ಲಿಸಿದ್ದ ದೂರಿನ ಅನ್ವಯ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಸಂಸ್ಥೆ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಜೆ.ಸಿ.ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
ABVP members staged a protest at Amnesty International India office, Bengaluru on August 19, 2016.JC Nagar police filed sedition case against Amnesty India.
Please Wait while comments are loading...