ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜದ್ರೋಹದ ಆರೋಪ : ಸಿದ್ದರಾಮಯ್ಯಗೆ ವರದಿ ಸಲ್ಲಿಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 19 : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧದ ರಾಜದ್ರೋಹದ ಆರೋಪದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ನೀಡಲಾಗಿದೆ. ಇದುವರೆಗೆ ಸಾಂದರ್ಭಿಕ ಸಾಕ್ಷಿಗಳು ಸಿಕ್ಕಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಬೆಂಗಳೂರು ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಈ ಸಂದರ್ಭದಲ್ಲಿ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧದ ಆರೋಪದ ಬಗ್ಗೆ ವರದಿ ಸಲ್ಲಿಸಿದರು.[Amnesty International ಬಗ್ಗೆ ತಿಳಿಯಿರಿ]

siddaramaiah

ಇದುವರೆಗಿನ ತನಿಖೆಯಲ್ಲಿ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧದ ಆರೋಪಕ್ಕೆ ಸಾಂಧರ್ಬಿಕ ಸಾಕ್ಷಿಗಳು ಲಭ್ಯವಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ವಿಚಾರದಲ್ಲಿ ಎಬಿವಿಪಿ ಸರಣಿ ಪ್ರತಿಭಟನೆ ನಡೆಸುತ್ತಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಣೆ ನೀಡಲಾಗಿದೆ.[ರಾಜದ್ರೋಹದ ಆರೋಪದಲ್ಲಿ ವಿಡಿಯೋ ಪ್ರಮುಖ ಸಾಕ್ಷಿ]

ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ಬಳಿಕ ಸಿದ್ದರಾಮಯ್ಯ ಅವರು, ಸೂಕ್ತವಾದ ಸಾಕ್ಷಿಗಳು ಲಭ್ಯವಾಗದೆ ಆಯೋಜಕರ ವಿರುದ್ಧ ಆತುರದ ಕ್ರಮ ಕೈಗೊಳ್ಳುವುದು ಬೇಡ ಎಂದು ಸಲಹೆ ನೀಡಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆ ನಿಯಂತ್ರಿಸಲು ಮುನ್ನೆಚ್ಚರಿಕೆ ವಹಿಸುವಂತೆಯೂ ಸೂಚನೆ ಕೊಟ್ಟಿದ್ದಾರೆ.[ದೇಶದ್ರೋಹಿಗಳ ವಿರುದ್ಧ ಕಾನೂನು ಕ್ರಮ : ಸಿದ್ದರಾಮಯ್ಯ]

ಏನಿದು ವಿವಾದ? : ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಇಂಡಿಯಾ ಸಂಸ್ಥೆ ವಿರುದ್ಧ ಬೆಂಗಳೂರಿನ ಜೆ.ಸಿ.ನಗರ ಪೊಲೀಸರು ರಾಜದ್ರೋಹದ ಪ್ರಕರಣ ದಾಖಲು ಮಾಡಿದ್ದಾರೆ. ಯುನೈಟೆಡ್‌ ಥಿಯಾಲಾಜಿಕಲ್‌ ಕಾಲೇಜಿನಲ್ಲಿ ಸಂಸ್ಥೆ ಆಗಸ್ಟ್ 13ರಂದು 'ಬ್ರೋಕನ್‌ ಫ್ಯಾಮಿಲೀಸ್‌' ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಲಾಗಿದೆ ಎಂಬುದು ಆರೋಪವಾಗಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಗಳೂರು ಉತ್ತರ ವಿಭಾಗದ ಸಂಘಟನಾ ಕಾರ್ಯದರ್ಶಿ ಟಿ.ಜಯಪ್ರಕಾಶ್ ಅವರು ಸಲ್ಲಿಸಿದ್ದ ದೂರಿನ ಅನ್ವಯ ಆಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಸಂಸ್ಥೆ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ತನಿಖೆ ಮುಂದುವರೆದಿದೆ.

ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಚರಣ್‌ ರೆಡ್ಡಿ, ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‌ ಮೋಹನ್‌ ಮುಂತಾದವರು ಪಾಲ್ಗೊಂಡಿದ್ದರು.

English summary
Bengaluru police commissioner N.S.Megharikh met Chief Minister Siddaramaiah and submitted status report on Sedition row on Amnesty International India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X