ಬೆಂಗಳೂರಿನಲ್ಲಿ ಎಲ್ ಕೆಜಿ ಮಗು ಮೇಲೆ ಲೈಂಗಿಕ ದೌರ್ಜನ್ಯ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 20: ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಐದು ವರ್ಷದ ಮಗುವಿನ ಪೋಷಕರು, ಸೋಮವಾರ ಮಧ್ಯಾಹ್ನ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪ ಮಾಡಿದ್ದಾರೆ.

ಶಾಲೆ ಆವರಣದಲ್ಲೇ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆರೋಪವನ್ನು ದೃಢಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. ಆದರೆ ತನಿಖೆ ಆರಂಭಿಸಿದ್ದಾರೆ. ಶಾಲೆಯಲ್ಲಿನ್ಸ್ ಸಿಸಿ ಟಿವಿ ಫೂಟೇಜ್ ಅನ್ನು ವಶಕ್ಕೆ ಪಡೆಯಲಾಗಿದೆ. ಗಾಯಗೊಂಡು ಮನೆಗೆ ಹಿಂತಿರುಗಿದ ಮಗು, ನೋವಾಗುತ್ತಿದೆ ಎಂದು ಹೇಳಿದೆ.[ಶಾಲೆಯಲ್ಲೇ ಮಗಳಿಗೆ ಜನ್ಮವಿತ್ತ 5ನೇ ತರಗತಿ ಬಾಲಕಿ!]

Sexual harassment

ಆ ನಂತರ ಆಸ್ಪತ್ರೆಗೆ ಕರೆದೊಯ್ದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ಖಾತ್ರಿ ಆಗಿದೆ. ಆ ನಂತರ ಮಗುವನ್ನು ಮತ್ತಷ್ಟು ವಿಚಾರಿಸಿದ ನಂತರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. ಇದರೊಂದಿಗೆ 2014ರಲ್ಲಿ ಖಾಸಗಿ ಶಾಲೆಯೊಂದರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣವೊಂದು ಮತ್ತೆ ನೆನಪಾದಂತಾಗಿದೆ.

ಶಾಲೆಯಿಂದ ಮನೆಗೆ ಬಂದ ನಂತರ ಬಾಲಕಿ ಮೇಲೆ ದೌರ್ಜನ್ಯ ನಡೆದಿರುವುದು ಗೊತ್ತಾಗಿದೆ. ಆ ಕೂಡಲೇ ಪೋಷಕರು ಪೊಲೀಸರ ಬಳಿ ದೂರನ್ನು ದಾಖಲಿಸಿದ್ದಾರೆ. ಈ ಕೃತ್ಯ ಎಸಗಿದವರ ಬಗ್ಗೆ ಸಂಪೂರ್ಣ ಮಾಹಿತಿ ದೊರೆತಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ದೌರ್ಜನ್ಯ ನಡೆದಿರುವುದು ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Sexual harassment to Bengaluru school girl, complaint registered in K.G.Halli police station by her parents.
Please Wait while comments are loading...