ಬೆಳ್ಳಂದೂರು ಕೆರೆ ಸುತ್ತಲಿನ ಕೈಗಾರಿಕೆ ಮುಚ್ಚಿ: ಎನ್ ಜಿಟಿ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 19: ಬೆಳ್ಳಂದೂರು ಕೆರೆಯಲ್ಲಿ ನೊರೆ ಮತ್ತು ಬೆಂಕಿ ಕಾಣಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ (ಏಪ್ರಿಲ್ 18) ತಾನೇ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ರಾಷ್ಟ್ರೀಯ ಹಸಿರು ಪ್ರಾಧಿಕಾರ (ಎನ್ ಜಿಟಿ) ಬೆಳ್ಳಂದೂರು ಕೆರೆ ಸುತ್ತಮುತ್ತಲಿನ ಕೈಗಾರಿಕೆಗಳನ್ನು ತಕ್ಷಣವೇ ಮುಚ್ಚಬೇಕೆಂದು ಮಧ್ಯಂತರ ಆದೇಶ ನೀಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA), ಕೆರೆ ಅಭಿವೃದ್ಧಿ ಪ್ರಾಧಿಕಾರ (LDA), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯ ಕೆಲ ಅಧಿಕಾರಿಗಳನ್ನೊಳಗೊಂಡ ಸಮಿತಿಯೊಂದನ್ನು ರಚಿಸಿರುವ ಎನ್ ಜಿಟಿ, ಕೆರೆ ಅಭಿವೃದ್ಧಿಗೆ 2 ವಾರಗಳಲ್ಲಿ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ಆದೇಶಿಸಿದೆ.[ಬೆಳ್ಳಂದೂರು ಕೆರೆಯಲ್ಲಿ ನೊರೆ: ಕರ್ನಾಟಕಕ್ಕೆ ಎನ್ ಜಿಟಿ ತರಾಟೆ]

Shut all indistries, which are near to Bellandur lake: NGT orders

ಯಾವುದೇ ಟೆಂಡರ್ ಕರೆಯದೆ ಬೆಳ್ಳಂದೂರು ಕೆರೆಯನ್ನು ಸ್ವಚ್ಛಗೊಳಿಸುವಂತೆ ಎನ್ ಜಿಟಿ ಹೇಳಿದ್ದು, ಕೆರೆಗೆ ತ್ಯಾಜ್ಯ ಎಸೆದವರಿಗೆ 5 ಲಕ್ಷ ರೂ. ದಂಡ ವಿಧಿಸುವಂತೆ ಕಟ್ಟುನಿಟ್ಟಾಗಿ ಹೇಳಿದೆ. ಬೆಳ್ಳಂದೂರು ಕೆರೆ ಸುತ್ತಲಿನ ಕೈಗಾರಿಕೆಗಳನ್ನು ತಕ್ಷಣವೇ ಮುಚ್ಚಬೇಕು, ಕೆರೆ ಮತ್ತೆ ಮಾಲಿನ್ಯವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕೆಂದೂ ಎನ್ ಜಿಟಿ ಈ ಸಂದರ್ಭದಲ್ಲಿ ಹೇಳಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Shut all indistries, which are near to Bellandur lake, National Green Tribunal orders today. And it has organised a committee to solve bellandur lake issue, which includes some officials of BDA, BBMP and LDA.
Please Wait while comments are loading...