ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಪರೇಷನ್ ಕಮಲ ಆಗ ಆಗಿತ್ತು, ಈಗ ಬಿಜೆಪಿಗೆ ಹಗಲು ಕನಸು: ಸಿದ್ದರಾಮಯ್ಯ

|
Google Oneindia Kannada News

Recommended Video

ಬಿಜೆಪಿ ಆಪರೇಷನ್ ಕಮಲದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದು ಹೀಗೆ | Oneindia Kannada

ಬೆಂಗಳೂರು, ಡಿಸೆಂಬರ್ 6: ಬೆಳಗಾವಿ ಅಧಿವೇಶನ ಮತ್ತು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಸಮೀಪಿಸುತ್ತಿರುವಂತೆಯೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಚರ್ಚೆ ಮತ್ತೆ ಕಾವು ಪಡೆದುಕೊಂಡಿದೆ.

ಬೆಳಗಾವಿ ಅಧಿವೇಶನ ಮುಗಿಯುವುದರ ಒಳಗೆ ಸರ್ಕಾರ ಉರುಳಿ ಬೀಳಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅತ್ತ ಕಾಂಗ್ರೆಸ್- ಜೆಡಿಎಸ್ ಪಾಳಯದಲ್ಲಿ ಆಪರೇಷನಲ್ ಕಮಲದ ಭೀತಿ ಮೂಡಿದೆ.

ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ: ಸಮನ್ವಯ ಸಮಿತಿ ನಿರ್ಣಯಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ: ಸಮನ್ವಯ ಸಮಿತಿ ನಿರ್ಣಯ

ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಅತೃಪ್ತ ಶಾಸಕರನ್ನು ಬಿಜೆಪಿ ನಾಯಕರು ಭೇಟಿ ಮಾಡುತ್ತಿರುವುದು ಆಪರೇಷನಲ್ ಕಮಲದ ಸಾಧ್ಯತೆಗಳ ಬಗ್ಗೆ ಅನುಮಾನ ಮೂಡಿಸಿದೆ.

ಈ ಮಧ್ಯೆಯೇ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಸಮಿತಿ ಸಭೆಯಲ್ಲಿ ಡಿ. 22ಕ್ಕೆ ಸಂಪುಟ ವಿಸ್ತರಣೆಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಅವರು ಸರ್ಕಾರ ಪತನವಾಗುವ ಮತ್ತು ಆಪರೇಷನ್ ಕಮಲದ ಸುದ್ದಿಗಳ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಭೂಕಂಪ ಆಗುವುದು ಯಾವ ದೇಶದಲ್ಲಿ?

ಯಾರದ್ದೋ ಕಿವಿಮಾತು ಕೇಳಿಕೊಂಡು ರಾಜ್ಯದಲ್ಲಿ ಸರ್ಕಾರ ಪತನವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಹೇಳಿದ್ದಾರೆ. ಈ ಬಗ್ಗೆ ಅವರಿಗೆ ಗೊತ್ತಿದ್ದರೆ ಅದೆಲ್ಲ ಯಡಿಯೂರಪ್ಪನವರಿಗೆ ಚೆನ್ನಾಗಿಯೇ ಗೊತ್ತು ಎಂದು ಯಾಕೆ ಹೇಳಿದ್ದಾರೆ? ಭೂಕಂಪ ಆಗಲಿದೆ‌ ಎಂದು ಅವರು ಹೇಳಿದ್ದಾರೆ, ಯಾವ ದೇಶದಲ್ಲಿಯಂತೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಯಾರೂ ಬಿಜೆಪಿಗೆ ಹೋಗುವುದಿಲ್ಲ

ಮಾಜಿ‌ ಸಚಿವ ಸತೀಶ್ ಜಾರಕಿಹೋಳಿಯವರು ಸೇರಿದಂತೆ ಯಾವೊಬ್ಬ ಕಾಂಗ್ರೆಸ್ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ. ನಾನು ಅವರೊಂದಿಗೆ ಸಂಪರ್ಕದಲ್ಲಿದ್ದೇನೆ, ಅವರಿಗೆ ನಮ್ಮಲ್ಲಿ ಪಕ್ಷ ತೊರೆಯುವಂತಹ ಯಾವ ಸಮಸ್ಯೆಗಳು ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮುಂಡೇಶ್ವರಿ ಸೋಲು ನೆನಪಿಸಿಕೊಂಡು ಬೇಸರಗೊಂಡ ಸಿದ್ದರಾಮಯ್ಯ ಚಾಮುಂಡೇಶ್ವರಿ ಸೋಲು ನೆನಪಿಸಿಕೊಂಡು ಬೇಸರಗೊಂಡ ಸಿದ್ದರಾಮಯ್ಯ

ಬಿಜೆಪಿ ಹಗಲು ಕನಸು

ಮೈತ್ರಿಕೂಟದ ಎಲ್ಲಾ ಶಾಸಕರು ನಮ್ಮೊಂದಿಗಿದ್ದಾರೆ, ಯಾವೊಬ್ಬ ಕಾಂಗ್ರೆಸ್ ಇಲ್ಲವೆ ಜೆಡಿಎಸ್ ಶಾಸಕರು ಪಕ್ಷ ತೊರೆಯುವುದಿಲ್ಲ. ಇವೆಲ್ಲ ಬಿಜೆಪಿ ನಾಯಕರ ಹಗಲು ಕನಸು. ಹಿಂದೆ ಅವರು ಆಪರೇಷನ್ ಕಮಲ ಮಾಡಿ ಯಶಸ್ವಿಯಾಗಿದ್ದರು, ಈಗಲೂ ಅದೇ ಭ್ರಮೆಯಲ್ಲಿದ್ದಾರೆ. ಆದರೆ ಈ ಬಾರಿ ಹಾಗಾಗಲು ನಾವು ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಡಿ. 22ರಂದು ಸಂಪುಟ ವಿಸ್ತರಣೆ

ಇಂದು ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಈ ತಿಂಗಳ 22ರಂದು ಸಂಪುಟ ವಿಸ್ತರಣೆ ಮಾಡುವ ತೀರ್ಮಾನ ಕೈಗೊಳ್ಳಲಾಯಿತು. ಅದಕ್ಕಿಂತ ಮೊದಲು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ಖಾತೆ ಹಂಚಿಕೆ ನಿರ್ಧರಿಸಲಾಗುವುದು. ಅದೇ ದಿನ ನಿಗಮ ಮಂಡಳಿಗಳಿಗೂ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಿಜೆಪಿಗೆ ಕಷ್ಟ ಬಂದಾಗ ರಾಮ ನೆನಪಾಗುತ್ತಾನೆ: ಸಿದ್ದರಾಮಯ್ಯ ಬಿಜೆಪಿಗೆ ಕಷ್ಟ ಬಂದಾಗ ರಾಮ ನೆನಪಾಗುತ್ತಾನೆ: ಸಿದ್ದರಾಮಯ್ಯ

English summary
Operation Kamala is not possible now for BJP. No Congress MLA will leave the party and joins hands with them, Siddaramaiah says in twitter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X