9 ಸಾವಿರ ಮೆ, ವ್ಯಾ ಅನಿಲ ಆಧಾರಿತ ವಿದ್ಯುತ್ ಉತ್ಪಾದನೆ: ಸಿಎಂ

Posted By:
Subscribe to Oneindia Kannada

ಬೆಂಗಳೂರು, ಜೂ. 22: ಮುಂದಿನ 5 ವರ್ಷದಲ್ಲಿ ರಾಜ್ಯದಲ್ಲಿ 9 ಸಾವಿರ ಮೆಗಾವ್ಯಾಟ್ಸ್ ವಿದ್ಯುತ್ ಉತ್ಪಾದಿಸಲಾಗುವುದು, ಪರಿಸರ ಹಾನಿ ತಡೆಯುವ ದೃಷ್ಟಿಯಂದ ಅನಿಲ ಆಧಾರಿತ ವಿದ್ಯುತ್ ಉತ್ಪಾದನೆಗೆ ಆದ್ಯತೆನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಯಲಹಂಕ ಸಮೀಪ ರಾಜ್ಯದಲ್ಲಿಯೇ ಪ್ರಪ್ರಥಮ ಅನಿಲ ಆಧಾರಿತ 370 ಮೆಗಾ ವಾಟ್ಸ್ ಸಾಮರ್ಥ್ಯದ 'ಯಲಹಂಕ ಸಂಯುಕ್ತ ಆವರ್ತಕ ವಿದ್ಯುತ್ ಸ್ಥಾವರ ಸ್ಥಾಪನೆ'ಯ ಆರಂಭಿಕ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಆಧುನಿಕ ಬದಲಾವಣೆ ಹಾಗೂ ಅಭಿವೃದ್ದಿಗೆ ನೀರು, ವಿದ್ಯುತ್, ಅತ್ಯಾವಶ್ಯಕ ಇದರಿಂದಾಗಿ ಜಲವಿದ್ಯುತ್ ಉತ್ಪಾದನೆಗೆ ನೀರು ಹೆಚ್ಚು ಬೇಕಾಗುತ್ತಿದ್ದು, ನೀರನ್ನು ಉಳಿಸುವ ದೃಷ್ಟಿಯಿಂದ ಅನಿಲ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದರು.

Siddaramaiah inaugurates Gas-Based Yelahanka Combined Cycle Power Plant

ಜಾಗತಿಕ ತಾಪಮಾನ ಕಾಪಾಡಿಕೊಳ್ಳುವ ಜವಾಬ್ದಾರಿಯ ಬದ್ದತೆಯೊಂದಿಗೆ ಸರ್ಕಾರ ಪರಿಸರ ಸ್ನೇಹಿ ವಿದ್ಯುತ್ ಉತ್ಪಾದನೆಯಲ್ಲಿ ಮಹತ್ತರ ಹೆಜ್ಜೆ ಇಟ್ಟಿದ್ದು, ಈಗಾಗಲೇ ಸೋಲಾರ್ ವಿದ್ಯುತ್ ಉತ್ಪಾದನೆಯಲ್ಲಿ ದೇಶದ ಗಮನ ಸೆಳೆದಿರುವ ಕರ್ನಾಟಕ ಸರ್ಕಾರ ಮಹತ್ವಕಾಂಕ್ಷಿಯ ಅನಿಲ ವಿದ್ಯುತ್ ಸ್ಥಾವರದ ಸ್ಥಾಪನೆಗೆ ಮುಂದಾಗಿದೆ ಎಂದರು.

ಮುಂಬರುವ ದಿನಗಳಲ್ಲಿ ಕೈಗಾರಿಕೆ, ಕೃಷಿ ಹಾಗೂ ಗ್ರಾಹಕರಿಗೆ ವಿದ್ಯುತ್ ಸಮಸ್ಯೆಯಾಗದಂತೆ ಉತ್ಪಾದನೆ ಮತ್ತು ವಿತರಣೆ ಎರಡಕ್ಕೂ ಆದ್ಯತೆ ನೀಡಲಾಗುವುದಲ್ಲದೆ ಹಲವಾರು ಸುಧಾರಣೆಗಳ ಮೂಲಕ ಗುಣಮಟ್ಟದ ವಿದ್ಯುತ್ ಪೂರೈಸಲಾಗುವುದು ಎಂದು ತಿಳಿಸಿದರು.

ಕರ್ನಾಟಕ ವಿದ್ಯುತ್ ನಿಗಮವು ಆರಂಭದಲ್ಲಿ 750 ಮೆಗಾವ್ಯಾಟ್ಸ್ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು. ಪ್ರಸ್ತುತವಾಗಿ 6250 ಮೆಗಾವ್ಯಾಟ್ಸ್ ಉತ್ಪಾದಿಸಲಾಗುತ್ತಿದೆ.

ಇಂಧನ ಸಚಿವ ಡಿ.ಕೆ. ಶಿವಕುಮಾರ್: ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿದೆ. ಜನಸಂಖ್ಯೆಯು ತೀವ್ರಗೊಳ್ಳುತ್ತಿದೆ. ಕೈಗಾರಿಕೆ, ವ್ಯಾಪಾರ, ವ್ಯವಹಾರಗಳು ಹೆಚ್ಚುತ್ತಿವೆ.

ಬೆಂಗಳೂರಿನ ಜನರಿಗೆ ನಿರಂತರವಾಗಿ ವಿದ್ಯುತ್ ಕಲ್ಪಿಸಲು ರಾಜ್ಯದಲ್ಲಿಯೆ ಪ್ರಥಮ ಬಾರಿಗೆ 1500 ಕೋಟಿ ವೆಚ್ಚದಲ್ಲಿ ಅನಿಲ ಆಧಾರಿತ 370 ಮೆಗಾವ್ಯಾಟ್ಸ್ ವಿದ್ಯುತ್ ಉತ್ಪಾದಿಸಲಾಗುವದು ಎಂದರು.

ಅನಿಲ ಆಧಾರಿತ ವಿದ್ಯುತ್ ಉತ್ಪಾದನೆ ಘಟಕ ಕಾಮಗಾರಿ

ಅನಿಲ ಆಧಾರಿತ ವಿದ್ಯುತ್ ಉತ್ಪಾದನೆ ಘಟಕ ಕಾಮಗಾರಿ

-
-
-
-

ಕರ್ನಾಟಕ ಸರ್ಕಾರದ ವಿದ್ಯುತ್ ಸಚಿವಾಲಯದ ಸಾಧನೆಗಾಗಿ ಈಗಾಗಲೇ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದು, ಪ್ರಧಾನ ಮಂತ್ರಿಗಳು ಸಹ ಪಕ್ಷಭೇದ ಮರೆತು ನಮ್ಮ ಸಾಧನೆಯನ್ನು ಹೊಗಳಿದ್ದಾರೆ. ಉಳಿದ ರಾಜ್ಯಗಳಿಗೆ ನಮ್ಮ ಮಾದರಿಯನ್ನು ಅಳವಡಿಸಿಕೊಳ್ಳಲು ಸಲಹೆ ನೀಡಿದ್ದಾರೆ.

ಲೋಕಸಭೆ ಸದಸ್ಯ ಎಂ. ವೀರಪ್ಪ ಮೊಯ್ಲಿ: ಕೇಂದ್ರ ಸರ್ಕಾರದಲ್ಲಿ ವಿದ್ಯುತ್ ಸಚಿವರಾಗಿದ್ದಾಗ ಮಹರಾಷ್ಟದ ದಾಬೋಲ್‍ನಿಂದ ಬೆಂಗಳೂರಿನಿಂದ ಬಿಡದಿವರೆಗೆ 1000 ಕಿ.ಮೀ. ಪೈಪ್ ಲೈನ್ ಮೂಲಕ ಅನಿಲ ಸಾಗಾಣಿಕೆಗೆ ಒತ್ತು ನೀಡಿದ್ದರ ಫಲವಾಗಿ ಅನಿಲ ಆಧಾರಿತ ವಿದ್ಯತ್ ಉತ್ಪಾದನೆ ಸಾಧ್ಯವಾಗುತ್ತಿದೆ. ಒನ್ ಗ್ರಿಡ್ ಒನ್ ನೇಷನ್ ಪರಿಕಲ್ಪನೆಯ ಅಡಿಯಲ್ಲಿ ವಿದ್ಯುತ್ ಸಾಗಣಿಕೆಯ ಬಗ್ಗೆಯು ಸಹ ಗಮನ ಹರಿಸಲಾಗಿದೆ. ಈಗಾಗಲೆ ರಾಜ್ಯ ಕೈಗಾರಿಕೆ ಅಭಿವೃದ್ದಿಯಲ್ಲಿ 3ನೇ ಸ್ಥಾನದಲ್ಲಿದ್ದು, ಮುಂದಿನ ಎರಡು ವರ್ಷದಲ್ಲಿ ಮೊದಲ ಸ್ಥಾನ ಪಡೆಯಬೇಕೆಂದು ಸಲಹೆ ನೀಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
CM Siddaramaiah on Tuesday(Jun 21) inaugurated commencement of the works of first of it kind 1×370 Megawatt Gas-Based Yelahanka Combined Cycle Power Plant in Bengaluru
Please Wait while comments are loading...