• search

ಯುರೋಪ್ ಪ್ರವಾಸಕ್ಕೆ ಹೊರಟ ಸಿದ್ದರಾಮಯ್ಯಗೆ ಬೆಂಬಲಿಗರ ಉಘೇ!

By Nayana
Subscribe to Oneindia Kannada
For Quick Alerts
ALLOW NOTIFICATIONS
For Daily Alerts
    10 ದಿನಗಳ ಯುರೋಪ್ ಪ್ರವಾಸಕ್ಕೆ ಹೋರಾಟ ಸಿದ್ದರಾಮಯ್ಯ | Oneindia Kannada

    ಬೆಂಗಳೂರು, ಸೆಪ್ಟೆಂಬರ್ 3: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹತ್ತು ದಿನಗಳ ಯುರೋಪ್ ಪ್ರವಾಸಕ್ಕೆ ತೆರಳಿದರು. ಸಿದ್ದರಾಮಯ್ಯ ಜತೆ ಪುತ್ರ ಯತೀಂದ್ರ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಸೇರಿದಂತೆ ಕುಟುಂಬದ ಸದಸ್ಯರು ಯುರೋಪ್ ರಾಷ್ಟ್ರಗಳ ಪ್ರವಾಸಕ್ಕೆ ತೆರಳುತ್ತಿದ್ದಾರೆ.

    ಸಿದ್ದರಾಮಯ್ಯ ವಿದೇಶ ಪ್ರವಾಸದ ಹಿನ್ನೆಲೆಯಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ತೀವ್ರ ಗೊಂದಲ ಉಂಟಾಗಿತ್ತು, ಸಿದ್ದರಾಮಯ್ಯ ವಿದೇಶಕ್ಕೆ ತೆರಳಿದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿತ್ತು.

    ಸಿದ್ದರಾಮಯ್ಯ ವಿರುದ್ಧ ದೇವೇಗೌಡರ ಈ ಕಾರ್ಯತಂತ್ರ ಕೈಗೂಡುವುದೆ?

    ಈ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ ಸಿದ್ದರಾಮಯ್ಯ ವಿದೇಶಕ್ಕೆ ತೆರಳುವ ವೇಳೆ ಹಾಲಿ ಹಾಗೂ ಮಾಜಿ ಸಚಿವರು, ಶಾಸಕರು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅವರ ನಿವಾಸದ ಎದುರು ನೆರೆದಿದ್ದರು.

    Siddaramaiah leaves for ten days Europe tour

    ಸಚಿವ ಜಮೀರ್ ಅಹಮದ್ ಸೇರಿದಂತೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸಂಪುಟದ ಹಲವು ಸಂಪುಟದ ಸದಸ್ಯರು ಸಿದ್ದರಾಮಯ್ಯ ತೆರಳುವ ವೇಳೆ ನಿವಾಸದ ಬಳಿ ಕಾಣಿಸಿಕೊಂಡರು. ಅಲ್ಲದೇ ಮೈಸೂರು ಜಿಲ್ಲೆಯ ಅಪಾರ ಅಭಿಮಾನಿಗಳು ಕೂಡ ಈ ವೇಳೆ ಹಾಜರಿದ್ದರು.

    ಇಂದಿನಿಂದ ಹತ್ತು ದಿನಗಳ ಕಾಲ ಯುರೋಪ್ ರಾಷ್ಟ್ರ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಅವರ ಪ್ರವಾಸದ ಹಿಂದೆ ಕೆಲವು ರಾಜಕೀಯ ಊಹಾಪೋಹಗಳು ಕೇಳಿಬಂದಿವೆ.

    ಇದನ್ನು ಸ್ವತಃ ಸಿದ್ದರಾಮಯ್ಯ ಅಲ್ಲಗಳೆದಿದ್ದರೂ ಕೂಡ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ವಿದೇಶ ಪ್ರವಾಸ ಸಹಜ ಅಲ್ಲ ಎನ್ನಲಾಗುತ್ತಿದೆ. ಈ ಎಲ್ಲಾ ಊಹಾಪೋಹಗಳಿಗೆ ಮುಂದಿನ ಹತ್ತು ದಿನಗಳಲ್ಲಿ ಉತ್ತರ ದೊರಕಲಿದೆ ಎಂದು ನಿರೀಕ್ಷಿಸಲಾಗಿದೆ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    Former chief minister Siddaramaiah has leaved for ten days Europe tour along with his MLA son Dr.Yatheendra and his close associate MLC K.Govindaraj.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more