ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಮುನಿಸಿಗೆ ಎಚ್ಡಿಕೆ ಕೊಟ್ಟ ಸಮಜಾಯಿಷಿಯೇನು?

|
Google Oneindia Kannada News

Recommended Video

ಸಿದ್ದರಾಮಯ್ಯ ಮುನಿಸಿಗೆ ಎಚ್ಡಿಕೆ ಕೊಟ್ಟ ಸಮಜಾಯಿಷಿಯೇನು? | Oneindia Kannada

ಬೆಂಗಳೂರು, ಜೂನ್ 30: ಸಿದ್ದರಾಮಯ್ಯ ಮತ್ತ ಎಚ್ ಡಿ ಕುಮಾರಸ್ವಾಮಿ ಅವರ ನಡುವಿನ ಮುಸುಕಿನ ಗುದ್ದಾಟದ ಕುರಿತು ಮಾಧ್ಯಮಗಳಲ್ಲಿ ದಿನೇ ದಿನೇ ಚರ್ಚೆ ನಡೆಯುತ್ತಿದೆ.

ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿದ ಎಚ್ ಡಿ ಕುಮಾರಸ್ವಾಮಿ, 'ಭಿನ್ನಾಭಿಪ್ರಾಯ ಸುಳ್ಳು. ಸಿದ್ದರಾಮಯ್ಯ ಅವರು ಈ ಸರ್ಕಾರ ರಚಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ' ಎಂದು ಟ್ವೀಟ್ ಮಾಡಿದ್ದಾರೆ.

Siddaramaiah will support us to run government: HD Kumaraswamy

"ಸಿದ್ದರಾಮಯ್ಯ ಅವರು ಶಾಂತಿ ವನದಲ್ಲಿ ಸ್ನೇಹಿತರೊಂದಿಗೆ ಮಾಡಿರುವುದು ರಾಜಕೀಯ ವಿಶ್ಲೇಷಣೆ. ಸಮ್ಮಿಶ್ರ ಸರ್ಕಾರದ ಬಗ್ಗೆ ಅವರಿಗೆ ಯಾವ ಭಿನ್ನಾಭಿಪ್ರಾಯವಿಲ್ಲ. ಸಮ್ಮಿಶ್ರ ಸರ್ಕಾರ ರಚಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ಈ ಸರ್ಕಾರ ಮುನ್ನಡೆಯುವಲ್ಲಿ ಅವರು ಸದಾ ನಮ್ಮ ಬೆಂಬಲಕ್ಕಿರುತ್ತಾರೆ" ಎಂದು ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ, ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಅವರ ನಡೆಗೆ ಸಮಜಾಯಿಷಿ ನೀಡಿದ್ದಾರೆ.

ಶಾಂತಿವನದಿಂದ ಹೊಸ ಉತ್ಸಾಹದಲ್ಲಿ ರಾಜಕೀಯ ಅಖಾಡಕ್ಕಿಳಿದ ಸಿದ್ದರಾಮಯ್ಯ ಶಾಂತಿವನದಿಂದ ಹೊಸ ಉತ್ಸಾಹದಲ್ಲಿ ರಾಜಕೀಯ ಅಖಾಡಕ್ಕಿಳಿದ ಸಿದ್ದರಾಮಯ್ಯ

ಕಳೆದ ಕೆಲವು ದಿನಗಳಿಂದ ಮಂಗಳೂರಿನ ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಕೆಲವು ಕಾಂಗ್ರೆಸ್ ನಾಯಕರು ಭೇಟಿಯಾಗಿ ಮಾತನಾಡಿದ್ದರು. ಈ ಮೂಲಕ ಕಾಂಗ್ರೆಸ್ ನಲ್ಲಿ ತಮ್ಮ ಶಕ್ತಿಯೇನು ಎಂಬುದನ್ನು ತೋರಿಸಿಕೊಟ್ಟಿದ್ದರು.

ಅದೂ ಅಲ್ಲದೆ, 'ಎಚ್ ಡಿ ಕುಮಾರಸ್ವಾಮಿ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದು ಕಷ್ಟ' ಎಂದು ಸಿದ್ದರಾಮಯ್ಯ ಹೇಳಿರುವ ವಿಡಿಯೋ ಸಹ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡಿ, ಉಭಯ ನಾಯಕರ ನಡುವಿನ ಮುಸುಕಿನ ಗುದ್ದಾಟವನ್ನು ಬಯಲಾಗಿಸಿತ್ತು.

English summary
Former chief minister of Karnataka Siddarmaiah has an important role in building coalition government in Karnataka. He is supporting us to run government, chief minister HD Kumaraswamy tweeted.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X