ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರಿದ ಸಿಪಿ ಯೋಗೇಶ್ವರ್

Posted By:
Subscribe to Oneindia Kannada
   ಅಮಿತ್ ಶಾ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಸಿ ಪಿ ಯೋಗೇಶ್ವರ್ | Oneindia Kannada

   ಬೆಂಗಳೂರು, ನವೆಂಬರ್ 02: ಚನ್ನಪಟ್ಟಣದ ಹಾಲಿ ಶಾಸಕ(ಕಾಂಗ್ರೆಸ್) ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

   ನವಕರ್ನಾಟಕ ಪರಿವರ್ತನಾ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಮ್ಮುಖದಲ್ಲಿ ಯೋಗೇಶ್ವರ್ ಹಾಗೂ ಕುಡಚಿಯ ಬಿಎಸ್ಆರ್ ಕಾಂಗ್ರೆಸ್ಸಿನ ಶಾಸಕ ರಾಜೀವ್ ಅವರು ಬಿಜೆಪಿ ಸೇರಿದರು.

   Sitting Cong MLA CP Yogeshwar joins BJP in presence of Amit Shah

   ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯಿಂದ ಬೇಸತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿರುವ ಸಿಪಿ ಯೋಗೇಶ್ವರ್ ಅವರು ಯಾವ ಕ್ಷೇತ್ರದಿಂದ ಸ್ಪರ್ಧೆಗಿಳಿಯಬಹುದು ಎಂಬ ಚರ್ಚೆ ಈಗಲೇ ಆರಂಭವಾಗಿದೆ.

   ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಸಿ.ಪಿ. ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಮದ್ದೂರಲ್ಲಿ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎನ್ನಲಾಗಿದೆ.

   2013ರಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಸಮಾಜವಾದಿ ಪಕ್ಷ ಸೇರಿ ಶಾಸಕರಾದರು. 2014ರಲ್ಲಿ ಸಮಾಜವಾದಿ ಪಕ್ಷ ತೊರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು. ಈಗ ಕಾಂಗ್ರೆಸ್ ತೊರೆದು ಬಿಜೆಪಿಗೆ ಮತ್ತೆ ಮರಳಿದ್ದಾರೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Sitting MLA of Channapatna CP Yogeshwar today (November 02) officially joined BJP in presence of Amit Shah at the Nava Karnataka Parivarthana Rally held at Bengaluru.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ