ಎಸ್ಸೆಂ ಕೃಷ್ಣ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ: ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಡಿಸಿಎಂ ಆರ್ ಅಶೋಕ ಅವರು ಸೋಮವಾರ ಸಂಜೆ ವೇಳೆಗೆ ಸದಾಶಿವ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್ಸೆಂಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದಾರೆ.
ಬೆಂಗಳೂರು, ಮಾರ್ಚ್ 06: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಡಿಸಿಎಂ ಆರ್ ಅಶೋಕ ಅವರು ಸೋಮವಾರ ಸಂಜೆ ವೇಳೆಗೆ ಸದಾಶಿವ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್ಸೆಂಕೃಷ್ಣ ಅವರ ಮನೆಗೆ ಭೇಟಿ ನೀಡಿದ್ದಾರೆ.
ಈ ಭೇಟಿ ಸಂದರ್ಭದಲ್ಲಿ ಎಸ್ಸೆಂ ಕೃಷ್ಣ ಅವರಿಗೆ ಬಿಜೆಪಿಗೆ ಸೇರುವಂತೆ ಅಧಿಕೃತ ಆಹ್ವಾನ ನೀಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮಾರ್ಚ್ 11ರಂದು ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರ ಬೀಳಲಿದ್ದು, ಇದಾದ ಬಳಿಕ ಎಸ್ಸೆಂ ಕೃಷ್ಣ ಅವರು ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಮಾರ್ಚ್ 15ರ ನಂತರ ಭಾರತೀಯ ಜನತಾ ಪಕ್ಷಕ್ಕೆ ಎಸ್ಸೆಂ ಕೃಷ್ಣ ಅವರು ಅಧಿಕೃತವಾಗಿ ಸೇರ್ಪಡೆಯಾಗುವ ಲಕ್ಷಣಗಳು ಕಂಡು ಬಂದಿದೆ.[ರಾಜಕೀಯ ನಿವೃತ್ತಿ ಡಿಕ್ಷನರಿಯಲ್ಲೇ ಇಲ್ಲ: ಎಸ್ಸೆಂ ಕೃಷ್ಣ]
ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಜನವರಿ 28ರ ಐದು ದಿನ ಮೊದಲು ಜನವರಿ 23ರಂದು, 84 ವರ್ಷದ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು, ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಬಿಜೆಪಿಯ ಮೂಲಗಳು ಈ ಸುದ್ದಿಯನ್ನು ಖಚಿತಪಡಿಸಿತ್ತು.[ರಾಜೀನಾಮೆಗೆ ಮುನ್ನ ಕೃಷ್ಣ, ಶಾರನ್ನು ಭೇಟಿ ಮಾಡಿದ್ದೇಕೆ?]
'ನಾನು ಕಾಂಗ್ರೆಸ್ ಗೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಸಕ್ರಿಯ ರಾಜಕೀಯಕ್ಕೆ ಅಲ್ಲ. ನಿವೃತ್ತಿ ಎಂಬುದು ನನ್ನ ಡಿಕ್ಷನರಿಯಲ್ಲಿಲ್ಲ. A politician never retires, he only fades away' ಎಂದು ಹೇಳಿದ್ದರು,[ಒಬ್ಬರ ಹಿಂದೊಬ್ಬರಂತೆ ಕಾಂಗ್ರೆಸ್ ತೊರೆಯುತ್ತಿರುವವರು][ಎಸ್ಸೆಂ ಕೃಷ್ಣ ಬಿಜೆಪಿ ಸೇರಲಿ: ಒನ್ಇಂಡಿಯಾ ಓದುಗರ ಬಹುಮತ]

ಪಕ್ಷ ಬಿಟ್ಟ ಮೇಲೆ ಕೃಷ್ಣ ಹೇಳಿದ್ದೇನು?
ವಯಸ್ಸಿನ ಕಾರಣಕ್ಕೆ ಮಾತ್ರ ಪಕ್ಷದ ನಿಷ್ಠಾವಂತರನ್ನು ಕಡೆಗಣಿಸುವುದು ಸರಿಯಲ್ಲ ಎಂದು ನೊಂದು ನುಡಿದರು. ಇಂದು ಕಾಂಗ್ರೆಸ್ ಪಕ್ಷ ದ್ವಂದ್ವ ಪರಿಸ್ಥಿತಿಯಲ್ಲಿದೆ. ರಾಜಕೀಯ ಮುಖಂಡರಿಗಿಂತ ಮ್ಯಾನೇಜರ್ ಗಳಿದ್ದರೆ ಪಕ್ಷ ನಡೆಸಬಹುದು ಎಂಬ ಮನಸ್ಥಿತಿ ಬಂದಿದೆ. ಹಿರಿತನಕ್ಕೆ ಬೆಲೆ ಇಲ್ಲದ್ದಂತಾಗಿರುವುದು ಬಹಳ ನೋವಿನ ಸಂಗತಿ ಎಂದು ಕೃಷ್ಣ ಹೇಳಿದ್ದರು.

ಎಸ್.ಎಂ.ಕೆ ಭೇಟಿ ಬಳಿಕ ಬಿ.ಎಸ್.ವೈ
ಹಿರಿಯ ನಾಯಕ ಎಸ್.ಎಂ ಕೃಷ್ಣ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ತಕ್ಷಣವೇ ಕರೆ ಮಾಡಿ ಬಿಜೆಪಿಗೆ ಬರುವಂತೆ ಮನವಿ ಮಾಡಿದ್ದೆವು. ಇಂದು ಕೃಷ್ಣ ಅವರಿಗೆ ಬಿಜೆಪಿಗೆ ಬರುವಂತೆ ಅಧಿಕೃತ ಆಹ್ವಾನ ನೀಡಲಾಗಿದೆ. ಆದಷ್ಟು ಬೇಗ ಅವರು ಬಿಜೆಪಿ ಸೇರುವ ವಿಶ್ವಾಸವಿದೆ ಎಂದು ಬಿಎಸ್ ಯಡಿಯೂರಪ್ಪ ಅವರು ಭೇಟಿ ನಂತರ ಹೇಳಿದರು.

ಬಿಜೆಪಿಗೆ ಅಹ್ವಾನ
ಎಸ್ ಎಂ ಕೃಷ್ಣ ಅವರು ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಿದವರು. ಐದಾರು ದಶಕಗಳ ಅನುಭವ ಹೊಂದಿರುವ ಅವರನ್ನು ಬಿಜೆಪಿಗೆ ಅಹ್ವಾನ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅವರಿಗೆ ಅಸಮಾಧಾನ ಇದೆ.
ಮೋದಿ ಸರ್ಕಾರದ ಹಲವು ಕ್ರಮವನ್ನು ಕೃಷ್ಣ ಅವರು ಸ್ವಾಗತ ಮಾಡಿದ್ದಾರೆ. ಇವತ್ತು ಅವರನ್ನು ಅಧಿಕೃತವಾಗಿ ಆಹ್ವಾನ ಮಾಡಿದ್ದೇವೆ. ಒಳ್ಳೆಯದಾಗಲಿದೆ ಅನ್ನೋ ವಿಶ್ವಾಸ ಇದೆ ಎಂದು ಮಾಜಿ ಡಿಸಿಎಂ ಆರ್ ಅಶೋಕ ಅವರು ಹೇಳಿದರು.

ಕೃಷ್ಣ ಅವರಿಗೆ ಸ್ವಾಗತ
ಎಸ್ಸೆಂ ಕೃಷ್ಣ ಅವರು ಬಿಜೆಪಿಗೆ ಬಂದರೆ ಯಾವ ಸ್ಥಾನ ಸಿಗಲಿದೆ? ಕೇಂದ್ರ ಸರ್ಕಾರದಿಂದ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಸಿಗುತ್ತದೆಯೆ? ರಾಷ್ಟ್ರಪತಿ ಚುನಾವಣೆಗೆ ಕೃಷ್ಣ ಅವರು ಅಭ್ಯರ್ಥಿಯೇ? ಕರ್ನಾಟಕದ ಮುಂದಿನ ಚುನಾವಣೆಗೆ ಕೃಷ್ಣ ಅವರ ಜನಪ್ರಿಯತೆ, ಅನುಭವ ಬಳಕೆ ಮಾಡಿಕೊಳ್ಳುವುದು ಬಿಜೆಪಿಯ ಚಿಂತನೆಯೇ? ಮುಂಬರುವ ದಿನಗಳಲ್ಲಿ ತಿಳಿದು ಬರಲಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications