ಕಾವೇರಿ ನೀರಿನ ಸಂಪರ್ಕ ಪಡೆಯಲು ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 21 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಮಾಡಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರಿಗರೇ ಫೇಸ್ಬುಕ್, ಟ್ವಿಟ್ಟರಿನಲ್ಲಿ ಸರಕಾರಕ್ಕೆ ದೂರು ಮುಟ್ಟಿಸಿ

ಜಲಮಂಡಳಿಯ ಪ್ರಧಾನ ಮುಖ್ಯ ಇಂಜಿನಿಯರ್ ಕೆಂಪರಾಮಯ್ಯ ಈ ಕುರಿತು ಮಾಹಿತಿ ನೀಡಿದ್ದಾರೆ. ಆನ್‌ಲೈನ್ ಮೂಲಕ ಅರ್ಜಿ ಸ್ವೀಕಾರ ಮಾಡಲು ಜಲಮಂಡಳಿ ಸಿದ್ಧತೆ ನಡೆಸಿದ್ದು, ಕೆಲವೇ ದಿನಗಳಲ್ಲಿ ಈ ಕುರಿತು ಪ್ರಕಟಣೆ ಹೊರಡಿಸಲಾಗುತ್ತದೆ.

Soon you can apply online for BWSSB water connection

ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರಿದ 110 ಹಳ್ಳಿಗಳ ನಿವಾಸಿಗಳು ಆನ್‌ಲೈನ್ ಮೂಲಕವೇ ನೀರಿನ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕವೇ ಫಲಾನುಭವಿ ವಂತಿಗೆ (ಬಿಸಿಸಿ) ಪಾವತಿ ಮಾಡಬಹುದಾಗಿದೆ.

ಅಪಾರ್ಟ್ ಮೆಂಟ್ ಗಳ ಮೇಲೆ ಜಲಮಂಡಳಿಯ ಮಲತಾಯಿ ಧೋರಣೆ

ಹೊಸ ವಿಭಾಗ ಮತ್ತು ಉಪ ವಿಭಾಗಗಳನ್ನು ವೆಬ್ ಸೈಟ್‌ನಲ್ಲಿ ಸೇರಿಸಿ, ಅರ್ಜಿಗಳನ್ನು ಸ್ವೀಕಾರ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಯಾದ ತಕ್ಷಣ ನೀರಿನ ಸಂಪರ್ಕ ನೀಡುವ ಪ್ರಕ್ರಿಯೆ ಆರಂಭವಾಗಲಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ 110 ಹಳ್ಳಿಗಳು, ಏಳು ನಗರ ಸಭೆ, ಒಂದು ಪುರಸಭೆ 2007ರಲ್ಲಿ ಸೇರ್ಪಡೆಗೊಂಡಿವೆ. ಈ ಹಳ್ಳಿಗಳಿಗೆ ಕಾವೇರಿ 4ನೇ ಹಂತದ ಎರಡನೇ ಘಟ್ಟದ ಯೋಜನೆಯಡಿ 10 ಟಿಎಂಸಿ ನೀರು ಪೂರೈಕೆ ಮಾಡಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Residents of 110 villages that were added to the Bruhat Bangalore Mahanagara Palike (BBMP) limits soon apply for water connection on online through Bangalore Water Supply and Sewerage Board (BWSSB) website.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ