ಓಲಾ-ಊಬರ್ ಟ್ಯಾಕ್ಸಿಗಳಿಗೆ ಸರ್ಕಾರದಿಂದಲೇ ರೇಟ್ ಫಿಕ್ಸ್!

Posted By: Nayana
Subscribe to Oneindia Kannada

   ಶೀಘ್ರದಲ್ಲೇ ಓಲಾ ಹಾಗು ಊಬರ್ ದರಗಳನ್ನ ಸರ್ಕಾರ ಫಿಕ್ಸ್ ಮಾಡುತ್ತೆ | Oneindia Kannada

   ಬೆಂಗಳೂರು, ಜನವರಿ 08 : ಬೆಂಗಳೂರಿನಲ್ಲಿ ಸಂಚರಿಸುವ ಮೊಬೈಲ್ ಅಪ್ಲಿಕೇಷನ್ ಆಧಾರಿತ ಓಲಾ, ಊಬರ್ ಸೇರಿದಂತೆ ಹಲವು ಕಂಪನಿಗಳ ಟ್ಯಾಕ್ಸಿ ಗಳಿಗೆ ಸಾರಿಗೆ ಇಲಾಖೆಯು ಕನಿಷ್ಠ ಮತ್ತು ಗರಿಷ್ಠ ಪ್ರಯಾಣ ದರ ನಿಗದಿ ಮಾಡಿದೆ. ಶೀಘ್ರದಲ್ಲೇ ಸರ್ಕಾರ ದರವನ್ನು ಪ್ರಕಟಿಸುವ ಸಾದ್ಯತೆ ಇದೆ.

   ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಟ್ಯಾಕ್ಸಿ ಬಳಕೆದಾರರ ಸಂಖ್ಯೆ ಹೆಚ್ಚಳವಾಗಿರುವುದರಿಂದ ಟ್ಯಾಕ್ಸಿ ಸೇವಾ ಕಂಪನಿಗಳು ಹೆಚ್ಚಿನ ದರ ವಸೂಲಿ ಮಾಡುತ್ತಿವೆ ಎಂದು ಪ್ರಯಾಣಿಕರು ಸಾರಿಗೆ ಇಲಾಖೆಗೆ ದೂರು ನೀಡಿದ್ದರು. ಅಂತೆಯೇ ಕಂಪನಿಗಳು ಕಡಿಮೆ ಕಮಿಷನ್ ನೀಡುತ್ತಿವೆ ಎಂದು ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರು ಆರೋಪಿಸಿದ್ದರು.

   ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಸಾರಿಗೆ ಇಲಾಖೆ ಸಚಿವರು ಟ್ಯಾಕ್ಸಿಗಳಿಗೆ ಕನಿಷ್ಠ ಮತ್ತು ಗರಿಷ್ಠ ದರ ನಿಗದಿಗೆ ಸಾರಿಗೆ ಆಯುಕ್ತರಿಗೆ ಸೂಚಿಸಿದ್ದರು. ಇದೀಗ ಸಾರಿಗೆ ಇಲಾಖೆಯು ದರ ನಿಗದಿ ಮಾಡಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಇದಕ್ಕೂ ಮೊದಲು ದರ ನಿಗದಿ ಸಂಬಂಧ ಸಾರಿಗೆ ಇಲಾಖೆಯು ಎಸಿ ಟ್ಯಾಕ್ಸಿಗೆ ಪ್ರತಿ ಕಿ.ಮೀ ಕನಿಷ್ಠ 12 ರೂ. ಹಾಗೂ ನಾನ್ ಎಸಿ ಗೆ ಪ್ರತಿ ಕಿ.ಮೀ ಗೆ ಕನಿಷ್ಠ 10 ರೂ ನಿಗದಿಗೊಳಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

   State Government fixes fare for private taxi service

   ಇದಕ್ಕೆ ಟ್ಯಾಕ್ಸಿ ಚಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಟ್ಯಾಕ್ಸಿ ಚಾಲಕರು ಮತ್ತು ಕಂಪನಿಗಳ ಜತೆ ಮತ್ತೊಂದು ಸುತ್ತಿನ ಸಭೆ ನಡೆಸುವಂತೆ ಸರ್ಕಾರ ಸೂಚಿಸಿತ್ತು. ಅದರಂತೆ ಈಗ ಸಾರಿಗೆ ಇಲಾಖೆ ಹೊಸ ಪ್ರಸ್ತಾವನೆ ಸಿದ್ಧಪಡಿಸಿದ್ದು, ಸಾರಿಗೆ ಸಚಿವರು ಅನುಮೋದಿಸಿದ್ದಾರೆ. ಹಾಗಾಗಿ ಶೀಘ್ರದಲ್ಲಿ ನೂತನ ದರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಸಾರಿಗೆ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

   ಎಸಿ, ನಾನ್ ಎಸಿಗೆ ಪ್ರತ್ಯೇಕ ದರ: ಪ್ರಸ್ತುತ ಟ್ಯಾಕ್ಸಿಗಳನ್ನು ಎಸಿ ಹಾಗೂ ನಾನ್ ಎಸಿ ಎಂದು ಎರಡು ವಿಭಾಗ ಮಾಡಿ ದರ ನಿಗದಿಮಾಡಲಾಗಿದೆ. ಎಸಿ ಟ್ಯಾಕ್ಸಿಗಳಿಗೆ ಪ್ರತಿ ಕಿ.ಮೀಗೆ 19.20 ಹಾಗೂ ನಾನ್ ಎಸಿ ಟ್ಯಾಕ್ಸಿಗಳಿಗೆ ಪ್ರತಿ ಕಿ.ಮೀ ಗೆ14.50 ರೂ. ದರ ನಿಗದಿ ಮಾಡಲಾಗಿದೆ.

   ನೂತನ ದರ ಅನುಷ್ಠಾನಕ್ಕೆ ಬಂದರೆ ಆ ದರಕ್ಕಿಂತ ಕಡಿಮೆ ದರದಲ್ಲಿ ಟ್ಯಾಕ್ಸಿ ಕಂಪನಿಗಳು ಸೇವೆ ನೀಡಲು ಸಾಧ್ಯವಿಲ್ಲ. ಇದು ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರಿಗೆ ಅನ್ವಯವಾಗುತ್ತದೆ ಆದರೆ, ಪ್ರಯಾಣಿಕರಿಗೆ ಹೆಚ್ಚಿನ ಲಾಭವಾಗುವುದಿಲ್ಲ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   The state government is expected to take a decision in the coming days on a proposal to hike fares of app-based taxis and fix a minimum price for travel to deter un-fair competitive practices. Transport Department officials said their proposal, which was given a few weeks ago to government, revises the slab rates of taxis services based on the cost of the car.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ