ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಥಳ ಪರಿಶೀಲನೆ, ಸಿಎಂ ಜೊತೆ ಸಭೆ ಬಳಿಕ ಮಹದಾಯಿ ಬಗ್ಗೆ ಮುಂದಿನ ನಡೆ: ಡಿಕೆಶಿ

By Manjunatha
|
Google Oneindia Kannada News

ಬೆಂಗಳೂರು, ಆಗಸ್ಟ್‌ 28: ಮಹದಾಯಿ ನದಿಪಾತ್ರದ ಸ್ಥಳ ಪರಿಶೀಲನೆ ನಡೆಸಿ ಆ ನಂತರ ಮುಂದಿನ ನಡೆಯ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಾವರಿ ತಜ್ಞರು, ಕಾನೂನು ತಜ್ಞರ ಜೊತೆ ಮಹದಾಯಿ ನದಿಪಾತ್ರದ ಸ್ಥಳ ಪರಿಶೀಲನೆ ನಡೆಸಿ ಆ ನಂತರ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಹದಾಯಿ ವಿಚಾರದಲ್ಲಿ ರಾಜಕೀಯ ಆಟ ಬೇಡ: ಡಿಕೆಶಿ ಮನವಿಮಹದಾಯಿ ವಿಚಾರದಲ್ಲಿ ರಾಜಕೀಯ ಆಟ ಬೇಡ: ಡಿಕೆಶಿ ಮನವಿ

ಮಹದಾಯಿ ವಿಚಾರದಲ್ಲಿ ಎಲ್ಲ ರಾಜಕೀಯ ನಾಯಕರುಗಳು ಒಗ್ಗಟ್ಟಾಗಬೇಕು ಎಂದು ಮನವಿ ಮಾಡಿದ ಅವರು, ಜಲ, ನೆಲ, ಭಾಷೆಯ ವಿಚಾರದಲ್ಲಿ ಸರ್ಕಾರವು ನಿಷ್ಠುರವಾಗಿದ್ದು, ಮಹದಾಯಿಗಾಗಿ ಕೋರ್ಟ್‌ ಮೆಟ್ಟಿಲೇರಲು ಸಿದ್ದವಿದೆ ಎಂದು ಹೇಳಿದರು.

ರಾಜಕೀಯ ಬೇಡ

ರಾಜಕೀಯ ಬೇಡ

ವಿರೋಧ ಪಕ್ಷಗಳು ಸಹ ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ. ಮಹದಾಯಿ ವಿಚಾರದಲ್ಲಿ ಯಾರೂ ಕೂಡ ರಾಜಕೀಯ ಮಾಡುವುದು ಬೇಡ. ಎಲ್ಲರು ಒಟ್ಟಾಗಿ ಹೋರಾಟವನ್ನು ಮುಂದುವರೆಸೋಣ ಎಂದು ವಿರೋಧ ಪಕ್ಷಗಳಿಗೆ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ರಾಜ್ಯಕ್ಕೆ ಅನ್ಯಾಯವಾಗಿದೆ: ಡಿಕೆಎಸ್‌

ರಾಜ್ಯಕ್ಕೆ ಅನ್ಯಾಯವಾಗಿದೆ: ಡಿಕೆಎಸ್‌

ಇತ್ತೀಚೆಗಷ್ಟೆ ಬಂದ ಮಹದಾಯಿ ನ್ಯಾಯಾಧಿಕರಣದ ಐತೀರ್ಪಿನ ಅನ್ವಯ, ಕರ್ನಾಟಕ್ಕೆ 13.42 ಟಿಎಂಸಿ ಅಡಿ ನೀರು ಲಭಿಸಿದೆ ಆದರೆ ರಾಜ್ಯ ಸರ್ಕಾರವು 34 ಟಿಎಂಸಿ ನೀರಿನ ಬೇಡಿಕೆ ಇಟ್ಟಿತ್ತು. ನ್ಯಾಯಾಧಿಕರಣ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಡಿಕೆ.ಶಿವಕುಮಾರ್ ಅಭಿಪ್ರಾಯಪಟ್ಟಿದ್ದರು.

ಮಹದಾಯಿ: ಕರ್ನಾಟಕ ಕೇಳಿದ್ದೆಷ್ಟು? ನ್ಯಾಯಾಧಿಕರಣ ಕೊಟ್ಟಿದ್ದೆಷ್ಟು?ಮಹದಾಯಿ: ಕರ್ನಾಟಕ ಕೇಳಿದ್ದೆಷ್ಟು? ನ್ಯಾಯಾಧಿಕರಣ ಕೊಟ್ಟಿದ್ದೆಷ್ಟು?

ಕೊಡಗಿನ ಪ್ರವಾಹದಿಂದ ಸಭೆ ಮುಂದಕ್ಕೆ

ಕೊಡಗಿನ ಪ್ರವಾಹದಿಂದ ಸಭೆ ಮುಂದಕ್ಕೆ

ತೀರ್ಪಿನ ಕುರಿತು ಈ ಮುಂಚೆಯೇ ಆಗಬೇಕಿದ್ದ ಮಹತ್ವದ ಸಭೆ ಕರಾವಳಿ ಜಿಲ್ಲೆಗಳಲ್ಲಿ ಉಂಟಾದ ಮಳೆ ಹಾಗೂ ಕೊಡಗಿನ ಪ್ರವಾಹದ ಕಾರಣದಿಂದಾಗಿ ಮುಂದಕ್ಕೆ ಹೋಗಿತ್ತು. ಇದೀಗ ಸ್ಥಳ ಪರಿಶೀಲನೆ ನಂತರ ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ನಡೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುಪ್ರೀಂ ಮೆಟ್ಟಿಲೇರಲಿದೆ ಗೋವಾ

ಸುಪ್ರೀಂ ಮೆಟ್ಟಿಲೇರಲಿದೆ ಗೋವಾ

ಗೋವಾ ಸಹ ಈಗಾಗಲೇ ನ್ಯಾಯಾಧಿಕರಣ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರುವುದಾಗಿ ಹೇಳಿತ್ತು. ಡಿ.ಕೆ.ಶಿವಕುಮಾರ್ ಸಹ ಈ ಮುಂಚೆ ಇದೇ ಮಾತನ್ನು ಹೇಳಿದ್ದರು. ಸಿಎಂ ಜೊತೆ ಸಭೆ ಬಳಿಕ ಇದೇ ನಿರ್ಧಾರವನ್ನು ಮಾಡಲಿದ್ದಾರೆ.

ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?

English summary
Water resource minister DK Shivakumar said that, state government ready to fight for at any level for Mahadayi. he said 'after having meeting with CM we will decide what to do about Mahadayi verdict'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X