ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆಸ್ತಿ ಮೌಲ್ಯಗಳಿಗೆ ಹೊಸ ಮಾರ್ಗಸೂಚಿ ದರ ಪ್ರಕಟಿಸಿದ ಸರ್ಕಾರ

By Nayana
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 5: ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣದಿಂದ ರಿಯಲ್ ಎಸ್ಟೇಟ್ ಉದ್ಯಮದ ಮೇಲೆ ಭಾರಿ ಹೊಡೆತ ಬಿದ್ದಿತ್ತು, ಇದೀಗ ರಾಜ್ಯ ಸರ್ಕಾರ ಸ್ಥಿರಾಸ್ತಿಗಳ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಶೇ.5ರಿಂದ ಶೇ.20ರಷ್ಟು ಮಾರ್ಗಸೂಚಿ ದರ ಹೆಚ್ಚಳ ಮಾಡಿದೆ, ಇದರಿಂದ ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಆಸ್ತಿ ಖರೀದಿ ಮತ್ತಷ್ಟು ದುಬಾರಿಯಾಗಲಿದೆ.

ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರ ನಿಖರ ಮಾಹಿತಿ ಕೇಳಿದ ಎಚ್ಡಿಕೆರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರ ನಿಖರ ಮಾಹಿತಿ ಕೇಳಿದ ಎಚ್ಡಿಕೆ

ಬೆಂಗಳೂರಿನ ಜನರಿಗೆ ಆಸ್ತಿ ಖರೀದಿ ಜತೆಗೆ ಪ್ರಯಾಣ ಕೂಡ ದುಬಾರಿಯಾಗಲಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ರಾಜ್ಯ ಸರ್ಕಾರ ಬಸ್ ಪ್ರಯಾಣದರವನ್ನು ಶೇ.18ರಷ್ಟು ಹೆಚ್ಚಳ ಮಾಡುವ ಕುರಿತು ಆಲೋಚನೆ ನಡೆಸಿದೆ. ಅಷ್ಟೇ ಅಲ್ಲದೆ ಹಾಲಿನದ ದರವೂ ಸೆಪ್ಟೆಂಬರ್ ಅಂತ್ಯದ ವೇಳೆ 2ರೂ. ಹೆಚ್ಚಳವಾಗುವ ಸಾಧ್ಯತೆ ಇದೆ.

State Govt plans to increase the guidance value of properties by up to 20percent

ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗಳ ಉಪನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ನೋಂದಣಿಗೆ ಹೊಸ ದರ ಅನ್ವಯವಾಗಲಿದೆ.

ಸಿಎಂ ಜನತಾದರ್ಶನಕ್ಕೆ ಜನಸಾಗರ: ನೊಂದ ಮನಸ್ಸುಗಳಿಗೆ ಆಸರೆಯಾದ ಎಚ್ಡಿಕೆಸಿಎಂ ಜನತಾದರ್ಶನಕ್ಕೆ ಜನಸಾಗರ: ನೊಂದ ಮನಸ್ಸುಗಳಿಗೆ ಆಸರೆಯಾದ ಎಚ್ಡಿಕೆ

2017-18ನೇ ಸಾಲಿನಲ್ಲಿ 9ಸಾವಿರ ಕೋಟಿ ರೂ. ನೋಂದಣಿ ಮತ್ತು ಮುದ್ರಾಂಕ ಶುಲ್ಕ ಗುರಿ ನಿಗದಿಯಾಗಿತ್ತು. ಈ ಗುರಿ ಮೀರಿ 9041 ರೂ. ಸಂಗ್ರಹ ಮಾಡಲಾಗಿತ್ತು. ಪ್ರಸಕ್ತ 2018-19ನೇ ಸಾಲಿನಲ್ಲಿ 10,400ಕೋಟಿ ರೂ. ನೋಂದಣಿ ಮತ್ತು ಮುದ್ರಾಂಕ ಶುಲ್ಕ ಸಂಗ್ರಹ ಗುರಿ ನಿಗದಿಯಾಗಿದೆ. ಸಾರ್ವಜನಿಕರಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸರ್ಕಾರ 15ದಿನಗಳ ಕಾಲಾವಕಾಶ ಕೇಳಿದೆ.

English summary
In a move that could send property prices already beyond the reach of the common people rocketing, the Karnataka government plans to increase the guidance value of properties by up to 20oercent. The decision could generate revenue of between Rs 1,000 and Rs 1,500 crore to fund its crop loan waiver scheme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X