ಸ್ಟೀಲ್ ಫ್ಲೈ ಓವರ್ ಕಿಕ್ ಬ್ಯಾಕ್; ಲೋಕಾಯುಕ್ತಕ್ಕೆ ದೂರು

Subscribe to Oneindia Kannada
ಬೆಂಗಳೂರು, ಫೆಬ್ರವರಿ 17: ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ ಪಡೆದಿದ್ದಾರೆ ಎನ್ನಲಾದ ಕಮಿಷನ್ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಈ ದೂರು ದಾಖಲಿಸಿದ್ದಾರೆ.

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಈ ಕುರಿತು ದೂರು ನೀಡಿರುವ ರಾಜೀವ್, ಬಸವೇಶ್ವರ ವೃತ್ತ ಮತ್ತು ಹೆಬ್ಬಾಳದ ನಡುವೆ ನಿರ್ಮಿಸಲು ಉದ್ದೇಶಿಸಿರುವ ಸ್ಟೀಲ್ ಫ್ಲೈ ಓವರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಅನ್ವಯ ತನಿಖೆ ನಡೆಸಬೇಕು. ಅಧಿಕಾರಿಗಳು, ಸಚಿವರು ಮತ್ತು ಇದರಲ್ಲಿ ತೊಡಗಿಸಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.[ಮಲ್ಲೇಶ್ವರಂ ಠಾಣೆ ಮೆಟ್ಟಿಲೇರಿದ ಯಡಿಯೂರಪ್ಪ -ಅನಂತ್ ಸಂಭಾಷಣೆ]

 Steel Fly Over Kickback: Rajeev Chandrasekar Submitted petition to Lokayukta

ಶುಕ್ರವಾರ ಲೋಕಾಯುಕ್ತ ಕಚೇರಿಗೆ ತೆರಳಿ ಅವರು ದೂರು ಸಲ್ಲಿಸಿದ್ದಾರೆ. ಸ್ಟೀಲ್ ಬ್ರಿಡ್ಜ್ ನಿರ್ಮಾಣ ಆರಂಭಿಸುತ್ತಿರುವ ಸರ್ಕಾರ ಯೋಜನೆಯಲ್ಲಿ ಕಿಕ್ ಬ್ಯಾಕ್ ಪಡೆದಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದರು.

ಮಾತ್ರವಲ್ಲದೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ವಶಪಡಿಸಿಕೊಂಡ ವಿಧಾನಪರಿಷತ್ ಸದಸ್ಯ ಗೋವಿಂದರಾಜು ಡೈರಿ ಬಗ್ಗೆಯೂ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡಿಗೆ ಹಣ ನೀಡಿದ್ದರ ವಿವರಗಳಿವೆ ಎಂದು ಇತ್ತೀಚೆಗೆ ಯಡಿಯೂರಪ್ಪ ಆರೋಪಿಸಿದ್ದರು.[ವಿಶೇಷ ವಿಮಾನದಲ್ಲಿ ಕಾಂಗ್ರೆಸ್‌ಗೆ ಕಪ್ಪ ರವಾನೆ - ಹೆಚ್‌ಡಿಕೆ]

Tweet:

ಕೆಲವು ದಿನಗಳ ಹಿಂದೆ ಸ್ಟೀಲ್ ಫ್ಲೈ ಓವರ್ ನಿರ್ಮಾಣದಲ್ಲಿ 150 ಕೋಟಿ ಕಿಕ್ ಬ್ಯಾಕ್ ಪಡೆಯಲಾಗಿದೆ. ಇದರಲ್ಲಿ 65 ಕೋಟಿ ಸಿದ್ದರಾಮಯ್ಯ ಕೈತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜೀವ್ ಚಂದ್ರಶೇಖರ್ ಲೋಕಾಯುಕ್ತ ಮೆಟ್ಟಿಲೇರಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Rajya Sabha member Rajeev Chandrasekar filled a complent against culpable and erect public servants at Lokayukta in relation to the allegation that, Congress got the kickbacks in proposed Steel fly over between Basaveshwara Circle and Hebbal.
Please Wait while comments are loading...