ತಮಿಳುನಾಡು ಸರ್ಕಾರಕ್ಕೆ ಸುಬ್ರಮಣ್ಯಯನ್ ಸ್ವಾಮಿ ಸಲಹೆ?

By: ನ್ಯೂಸ್ ಡೆಸ್ಕ್
Subscribe to Oneindia Kannada

ನವದೆಹಲಿ, ಸೆಪ್ಟೆಂಬರ್ 07 : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಮಣ್ಯಯನ್ ಸ್ವಾಮಿ ಅವರು ತಮಿಳುನಾಡು ಸರ್ಕಾರಕ್ಕೆ ಸಲಹೆಯನ್ನು ನೀಡಿದ್ದಾರೆ. ಕಾವೇರಿ ನದಿ ನೀರಿಗಾಗಿ ಬಡಿದಾಡುವುದನ್ನು ನಿಲ್ಲಿಸಿ ಸಮುದ್ರದ ನೀರನ್ನು ಶುದ್ಧೀಕರಿಸಿ ಕುಡಿಯುವುದಕ್ಕೆ ಹಾಗೂ ಕೃಷಿಗೆ ಬಳಸಿಕೊಳ್ಳಿ ಎಂದು ಸುಬ್ರಮಣಿಯನ್ ಸ್ವಾಮಿ ಸಲಹೆ ನೀಡಿದ್ದಾರೆ.

ಕಾವೇರಿ ನದಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಜಲಸಮರ ಮುಂದುವರಿಯುತ್ತಲೇ ಇದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ ಅವರು, ತಮಿಳುನಾಡು ವಿನಾಕಾರಣ ಕಾವೇರಿ ನೀರಿಗಾಗಿ ಕರ್ನಾಟಕದ ಜೊತೆ ಜಗಳ ಮಾಡುವುದನ್ನು ಬಿಟ್ಟು ಸಮುದ್ರ ನೀರನ್ನು ಶುದ್ಧೀಕರಿಸಿ ಉಪಯೋಗಿಸಿಕೊಳ್ಳಲಿ ಎಂದಿದ್ದಾರೆ. [ಕಾವೇರಿ ಕೇಸ್ : ನಾರಿಮನ್ ಆಯ್ಕೆ ಮಾಡಿದ್ದು ಯಾರು?]

Subramanian Swamy asks Tamil Nadu to 'stop whining' about Cauvery river

ಸುಬ್ರಮಣಿಯನ್ ಸ್ವಾಮಿ ಅವರು ಮಾಡಿರುವ ಟ್ವೀಟ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸಮುದ್ರದ ನೀರನ್ನು ಬಳಸಿಕೊಳ್ಳುವ ತಂತ್ರಜ್ಞಾನ ಇದ್ದರು, ಅದರ ಸಮರ್ಪಕ ಬಳಕೆಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಟ್ವೀಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.[ಫಾಲಿ ನಾರಿಮನ್ ತೆಗೆದು ಹಾಕಿ, ಬೇಡಿಕೆಗೆ ಸೊಪ್ಪು ಹಾಕದ ಸಿಎಂ]

10 ದಿನಗಳ ಕಾಲ 15,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಯಬಿಡಬೇಕೆಂದು ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಆದೇಶ ನೀಡಿದ್ದು, ಮಂಗಳವಾರ ಮಧ್ಯರಾತ್ರಿಯಿಂದಲೇ ಕೆಆರ್‍ಎಸ್ ನಿಂದ ತಮಿಳುನಾಡಿಗೆ ನೀರು ಹರಿಯಬಿಡಲಾಗಿದೆ.

(ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
BJP leader Subramanian Swamy has given Tamil Nadu government a piece of his mind and asked the state to stop 'whining' about the Cauvery river.
Please Wait while comments are loading...