ಸುಪಾರಿ ಕೇಸ್: ರವಿ ಬೆಳಗೆರೆಗೆ ಜಾಮೀನು ಮಂಜೂರು

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 21: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಪ್ರಕರಣದಲ್ಲಿ ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಅವರಿಗೆ ಜಾಮೀನು ದೊರೆತಿದೆ.

ಬೆಂಗಳೂರಿನ 65ನೇ ಸಿಟಿಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಮಧುಸೂಧನ್. ಬಿ ಅವರು ರವಿ ಬೆಳಗೆರೆ ಅವರಿಗೆ ಜಾಮೀನು ನೀಡಿ ಗುರುವಾರ ಆದೇಶ ಹೊರಡಿಸಿದರು.

Sunil Supari killing case: Ravi Belagere gets bail

ಇಬ್ಬರ ಶ್ಯೂರಿಟಿ, 1 ಲಕ್ಷ ರು ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂದು ಷರತ್ತುಗಳನ್ನು ನ್ಯಾಯಾಧೀಶ ಮದುಸೂಧನ್ ವಿಧಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಈಗಾಗಲೇ ರವಿ ಬೆಳಗೆರೆ ಅವರಿಗೆ ಎರಡು ಬಾರಿ ಮಧ್ಯಂತರ ಜಾಮೀನು ನೀಡಲಾಗಿತ್ತು.

ಸದ್ಯ ಅನಾರೋಗ್ಯದಿಂದ ಬಳಲುತ್ತಿರುವ ರವಿ ಬೆಳಗೆರೆ ಅವರು ಗುರುವಾರ ಬೆಳಗ್ಗೆ ಜಯದೇವ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bengaluru City Civil Court grant bail to Journalist Ravi Belagere in a supari case to journalist Sunil Heggaravalli. Judge Madhusudan B issued the bail order.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ