ಬಾಂಬ್ ಮಾದರಿ ವಸ್ತು ಪತ್ತೆ, ಲಾಲ್ ಬಾಗ್ ಬಳಿ ಕಿಡಿಗೇಡಿಗಳ ಕೃತ್ಯ

Posted By:
Subscribe to Oneindia Kannada

ಬೆಂಗಳೂರು, ಜನವರಿ 24: ಜಯನಗರ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾಲ್ ಬಾಗ್ ವೆಸ್ಟ್ ಗೇಟ್ ಬಳಿ ಬಾಂಬ್ ಮಾದರಿ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆ. ಇದರಿಂದಾಗಿ ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದು ಯಾರೋ ಕಿಡಿಗೇಡಿಗಳ ಕೃತ್ಯ ಎಂದು ದಕ್ಷಿಣ ವಲಯ ಡಿಸಿಪಿ ಶರಣಪ್ಪ ಅವರು ಹೇಳಿದ್ದಾರೆ.

ನಮ್ಮ ಮೆಟ್ರೋ ರೈಲು ನಿಲ್ದಾಣಕ್ಕೆ ಹೊಂದಿಕೊಂಡಂತೆ ರಸ್ತೆ ಬದಿಯಲ್ಲಿ ಪಟಾಕಿಯ ಸಿಡಿಮದ್ದನ್ನು ಪೇಪರ್ ನಲ್ಲಿ ಇಟ್ಟಿರುವುದು ಕಳೆದ ರಾತ್ರಿ ಪತ್ತೆಯಾಗಿದೆ. ಇದಕ್ಕೆ ಪೂರಕವಾಗಿ ಲಾಲ್ ಬಾಗ್ ಸಸ್ಯ ತೋಟಕ್ಕೆ ಬಾಂಬ್ ಬೆದರಿಕೆ ಇದೆ ಎಂದು ಅನಾಮಧೇಯ ವ್ಯಕ್ತಿ ಪೊಲೀಸರಿಗೆ ಕರೆ ಮಾಡಿ ಹೇಳಿದ್ದಾನೆ.

Suspicious object creates scare Lalbagh West gate in Bengaluru

100ಕ್ಕೆ ಬಂದ ಕರೆ ಪತ್ತೆ ಹಚ್ಚಿದಾಗ ಕಾಯಿನ್ ಬಾಕ್ಸಿನಿಂದ ಮಾಡಿರುವ ಕರೆ ಎಂದು ತಿಳಿದು ಬಂದಿದೆ. ಲಾಲ್ ಬಾಗ್ ನಲ್ಲಿ ಗಣರಾಜ್ಯೋತ್ಸವ ನಿಮಿತ್ತ ಪುಷ್ಪ ಪ್ರದರ್ಶನ ನಡೆಯುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಲು ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಡಿಸಿಪಿ ಶರಣಪ್ಪ ಹೇಳಿದರು.

ಈ ಘಟನೆ ಬಗ್ಗೆ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಯಾವುದೇ ಸಿಸಿಟಿವಿ ಕೆಮೆರಾ ಇಲ್ಲದಿರುವುದು ಕಂಡು ಬಂದಿದೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ನಮ್ಮ ಮೆಟ್ರೋ ಅಧಿಕಾರಿಗಳು, ಲಾಲ್ ಬಾಗ್ ತೋಟಗಾರಿಕಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Suspicious object creates scare near Lalbagh west gate, Jayanagar, Bengaluru. Bengaluru DCP south Sharanarappa confirmed the news and said bomb like object found near the park, a case has been registered at Siddapura police and are investigating the same.
Please Wait while comments are loading...