ಎಸ್‌ವಿ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾರತ್‌ ಹಳ್ಳಿಗೆ ಬಸ್ ಸೇವೆ

Posted By:
Subscribe to Oneindia Kannada

ಬೆಂಗಳೂರು, ಮೇ 10 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾರತ್‌ ಹಳ್ಳಿಗೆ ಫೀಡರ್ ಬಸ್ ಸೇವೆಯನ್ನು ಆರಂಭಿಸಲಿದೆ. ನಮ್ಮ ಮೆಟ್ರೋ ರೈಲಿನ ಪ್ರಯಾಣಿಕರು ಬಸ್ ಸೇವೆ ಆರಂಭಿಸಲು ಬೇಡಿಕೆ ಇಟ್ಟಿದ್ದಾರೆ.

ಬಿಎಂಟಿಸಿ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಮೀಕ್ಷೆ ನಡೆಸಿದೆ. ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮಾರ್ಗದಲ್ಲಿ ಸಂಚಾರ ನಡೆಸುವ ಮೆಟ್ರೋ ಪ್ರಯಾಣಿಕರು ಬಸ್ ಸೇವೆ ಆರಂಭಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. [ನಮ್ಮ ಮೆಟ್ರೋ ಪೂರ್ವ-ಪಶ್ಚಿಮ ಕಾರಿಡಾರ್ ದರ ಪಟ್ಟಿ]

bmtc

ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾರತ್‌ ಹಳ್ಳಿ, ರಾಮಮೂರ್ತಿ ನಗರ, ಕೆ.ಆರ್.ಪುರ ಮುಂತಾದ ಸ್ಥಳಗಳಿಗೆ ಬಸ್ ಸೇವೆ ಆರಂಭಿಸಬೇಕು ಎಂದು ಪ್ರಯಾಣಿಕರು ಬೇಡಿಕೆ ಇಟ್ಟಿದ್ದಾರೆ. ಆದ್ದರಿಂದ ಬಸ್ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. [ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮೆಟ್ರೋ ಸಂಚಾರ ಅವಧಿ ವಿಸ್ತರಣೆ?]

ಬಿಎಂಟಿಸಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ವೈಟ್‌ಫೀಲ್ಡ್‌ಗೆ ಈಗಾಗಲೇ ಫೀಡರ್ ಬಸ್ ಸೇವೆ ಒದಗಿಸುತ್ತಿದೆ. ಬೈಯಪ್ಪನಹಳ್ಳಿ ನಿಲ್ದಾಣದ ಬದಲು ಎಸ್‌ವಿ ರೋಡ್ ನಿಲ್ದಾಣದಿಂದ ಬಸ್ ಸೇವೆ ಪಡೆಯಬೇಕು ಎಂದು ಪ್ರಯಾಣಿಕರಿಗೆ ಮನವಿ ಮಾಡಿದೆ. [ಮೆಟ್ರೋ ಸುರಂಗ ಮಾರ್ಗ ಉದ್ಘಾಟನೆ ಚಿತ್ರಗಳು]

ಓದುಗರ ಬೇಡಿಕೆ : ಒನ್ ಇಂಡಿಯಾ ಕನ್ನಡದ ಓದುಗರಾದ ಕೀರ್ತಿ ಕುಮಾರ್ ಅವರು, ಬೈಯಪ್ಪನಹಳ್ಳಿ-ಮೈಸೂರು ರಸ್ತೆ ರೈಲನ್ನು ರಾತ್ರಿ 11 ಗಂಟೆಯ ತನಕ ವಿಸ್ತರಣೆ ಮಾಡಲಿ ಮತ್ತು ನಾಯಂಡಹಳ್ಳಿ ಮೆಟ್ರೋ ನಿಲ್ದಾಣದಿಂದ ರಾಜರಾಜೇಶ್ವರಿ ನಗರಕ್ಕೆ ಬಸ್ ಸೇವೆಯನ್ನು ಆರಂಭಿಸಬೇಕು ಎಂದು ಸಲಹೆ ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bangalore Metropolitan Transport Corporation (BMTC) will soon operate feeder bus services from SV Road (Swami Vivekananda road) metro station to Marathahalli. Commuters are demanding metro service should be extended till 11 in the night.
Please Wait while comments are loading...