ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರತಿಭಾವಂತ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪುರಸ್ಕಾರ

By Prasad
|
Google Oneindia Kannada News

ಬೆಂಗಳೂರು, ಜುಲೈ 16 : ಪ್ರತಿಭಾ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಹೊಸ ಹುರುಪನ್ನು ಹುಟ್ಟಿಸುವ ಮೂಲಕ ಮುಂದಿನ ಪರೀಕ್ಷೆಗಳಲ್ಲಿ ಇನ್ನೂ ಹೆಚ್ಚಿನ ಗುರಿಯನ್ನು ಮುಟ್ಟುವತ್ತ ಪ್ರೇರೇಪಿಸುತ್ತವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ನಗರದ ಯಶವಂತಪುರದಲ್ಲಿ ಭಾನುವಾರ ನಡೆದ ವಿಪ್ರ ಪ್ರಕಾಶ ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 60ಕ್ಕೂ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದರು.

ಬ್ರಾಹ್ಮಣ ಹುಡುಗರಿಗೆ ಮದುವೆಗೆ ಹೆಣ್ಣು ಹುಡುಕಿಕೊಡಿ...ಬ್ರಾಹ್ಮಣ ಹುಡುಗರಿಗೆ ಮದುವೆಗೆ ಹೆಣ್ಣು ಹುಡುಕಿಕೊಡಿ...

Talented brahmin student felicitated in Bengaluru

ಪ್ರತಿಭಾ ಪುರಸ್ಕಾರಗಳು ಮುಂದಿನ ದಿನಗಳಲ್ಲಿ ಹಾಗೂ ಪರೀಕ್ಷೆಗಳಲ್ಲಿ ಇನ್ನೂ ಉತ್ತಮ ರೀತಿಯಲ್ಲಿ ಫಲಿತಾಂಶ ಪಡೆಯುವತ್ತ ಗಮನ ಹರಿಸಲು ಪ್ರೇರೇಪಿಸುತ್ತವೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ಇನ್ನೂ ಹಲವಾರು ಇಂತಹ ಕಾರ್ಯಕ್ರಮಗಳು ನಡೆಯುವ ಅವಶ್ಯಕತೆ ಇದೆ ಎಂದು ಅವರು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಲ್ಲೇಶ್ವರಂ ಬ್ರಾಹ್ಮಣ ಸಭಾದ ಅಧ್ಯಕ್ಷರಾದ ಪ್ರಕಾಶ್ ಎಸ್ ಅಯ್ಯಂಗಾರ್ ಅವರು, ಬ್ರಾಹ್ಮಣ ಸಮಾಜದ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗೆ ಮಲ್ಲೇಶ್ವರಂ ಬ್ರಾಹ್ಮಣ ಸಭಾ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.

Talented brahmin student felicitated in Bengaluru

ಬ್ರಾಹ್ಮಣ ಸಮಾಜದ ಜನರು ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಒಗ್ಗಟ್ಟಾಗುವ ಅವಶ್ಯಕತೆ ಇದೆ. ಇದನ್ನು ಮನಗೊಂಡಿರುವ ಮಲ್ಲೇಶ್ವರಂ ಬ್ರಾಹ್ಮಣ ಸಭಾ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಎಲ್ಲಾ ವಾರ್ಡ್‍ಗಳಲ್ಲೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಮೂಲಕ ಬ್ರಾಹ್ಮಣ ಸಮುದಾಯದ ಜನರನ್ನು ಒಗ್ಗೂಡಿಸುವ ಪ್ರಯತ್ನ ಇದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ 60ಕ್ಕೂ ಹೆಚ್ಚು ಅಂಕಗಳಿಸಿದ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕ್ರಮವಾಗಿ ಒಂದು ಸಾವಿರ ಹಾಗೂ ಎರಡೂ ಸಾವಿರ ರೂಪಾಯಿಗಳನ್ನು ನೀಡಿ ಪುರಸ್ಕರಿಸಲಾಯಿತು.

Talented brahmin student felicitated in Bengaluru

ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷರಾದ ಲಕ್ಷ್ಮಿಕಾಂತ್, ಡಿ.ವಿ ಕೃಷ್ಣಮೂರ್ತಿ ಉಪಾಧ್ಯಕ್ಷರು, ನಾರ್ಥ್ ಬೆಂಗಳೂರು ಎಜುಕೇಷನ್ ಸೊಸೈಟಿ, ಸಮಾಜ ಸೇವಕರಾದ ಬಿ ಎನ್ ಕೃಷ್ಣಮೂರ್ತಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಅರುಣ್ ಕುಮಾರ್ ಎಚ್ ವಿ (ಮೊ: 99453 50505)

English summary
Talented brahmin students felicitated in Yeshwanthpur in Bengaluru by Malleshwaram Brahmin Sabha. BJP leader Aravind Limbavali said, such felicitations inspire the students to achieve more. Talented sslc and puc students were given cash prize also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X