ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯುವತಿ ಮೇಲೆ ಹಲ್ಲೆ : ಸಿದ್ದರಾಮಯ್ಯಗೆ ಸುಷ್ಮಾ ಸ್ವರಾಜ್ ಕರೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 04 : ಬೆಂಗಳೂರಿನಲ್ಲಿ ತಾಂಜೇನಿಯಾ ಮೂಲದ ಯುವತಿ ಮೇಲೆ ನಡೆದ ಹಲ್ಲೆಯನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ವಿದೇಶಿ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ತಾಂಜೇನಿಯಾ ಮೂಲದ ಯುವತಿಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ಸುಷ್ಮಾ ಸ್ವರಾಜ್ ಟ್ವಿಟ್ ಮಾಡಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಹ ಹಲ್ಲೆಯನ್ನು ಖಂಡಿಸಿದ್ದು, ಘಟನೆ ಕುರಿತು ವರದಿ ನೀಡುವಂತೆ ಕರ್ನಾಟಕ ಕಾಂಗ್ರೆಸ್‌ಗೆ ಸೂಚನೆ ನೀಡಿದ್ದಾರೆ. [ತಾಂಜೇನಿಯಾ ಯುವತಿ ಮೇಲೆ ಹಲ್ಲೆ]

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದಾಗ ಹಲ್ಲೆ ಪ್ರಕರಣಕ್ಕೆ ಸಂಬಂಧಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ ಎಂದು ಸುಷ್ಮಾ ಸ್ವರಾಜ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. [ಯುವತಿ ಮೇಲೆ ಹಲ್ಲೆ, ವರದಿ ಕೇಳಿದ ರಾಹುಲ್ ಗಾಂಧಿ]

ರಾಜ್ಯಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಎಸ್.ಮೇಘರಿಕ್ ಅವರು ಯುವತಿ ಮೇಲೆ ಹಲ್ಲೆ ನಡೆದ ಸ್ಥಳಕ್ಕೆ ತೆರಳಿದ್ದು, ತನಿಖೆ ನಡೆಸುತ್ತಿರುವ ಸೋಲದೇವನಹಳ್ಳಿ ಪೊಲೀಸರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ....

ಘಟನೆ ಖಂಡಿಸಿದ ಸುಷ್ಮಾ ಸ್ವರಾಜ್

ತಾಂಜೇನಿಯಾ ಮೂಲದ ಯುವತಿಯ ಮೇಲೆ ನಡೆದ ಹಲ್ಲೆಯನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಖಂಡಿಸಿದ್ದಾರೆ.

ಸಿದ್ದರಾಮಯ್ಯಗೆ ಕರೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರೆ ಮಾಡಿದ ಸುಷ್ಮಾ ಸ್ವರಾಜ್ ಅವರು ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಸುರಕ್ಷತೆಗೆ ಗಮನ ಕೊಡಿ

ಬೆಂಗಳೂರಿನಲ್ಲಿನ ವಿದೇಶಿ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಗಮನ ಕೊಡುವಂತೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ.

4 ಆರೋಪಿಗಳ ಬಂಧನ

4 ಆರೋಪಿಗಳ ಬಂಧನ

ಯುವತಿ ಮೇಲೆ ಹಲ್ಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಆರೋಪಿಗಳನ್ನು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಷ್ಮಾ ಸ್ವರಾಜ್ ಅವರಿಗೆ ವಿವರಣೆ ನೀಡಿದ್ದಾರೆ.

ವರದಿ ಕೇಳಿದ ರಾಹುಲ್ ಗಾಂಧಿ

ಯುವತಿ ಮೇಲಿನ ಹಲ್ಲೆ ಪ್ರಕರಣವನ್ನು ಖಂಡಿಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಈ ಬಗ್ಗೆ ವರದಿ ಕೇಳಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಟ್ವಿಟ್ ಮಾಡಿದ್ದಾರೆ.

ವರದಿ ಕಳಿಸಲಾಗಿದೆ.

ವರದಿ ಕಳಿಸಲಾಗಿದೆ.

ತಾಂಜೇನಿಯಾ ಮೂಲದ ಯುವತಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಪ್ರಕರಣಕ್ಕೆ ಸಂಬಂಧಿಸಿದಂತೆ 5 ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ವಿದೇಶಾಂಗ ಸಚಿವಾಲಯಕ್ಕೆ ಈ ಕುರಿತು ವರದಿ ಕಳುಹಿಸಲಾಗಿದೆ' ಎಂದು ಹೇಳಿದ್ದಾರೆ.

English summary
External Affairs Minister Sushma Swaraj reacted for Tanzanian student attack in Bengaluru saying she was 'deeply pained over the shameful incident' In a series of tweets, minister said that she has also asked the Karnataka Chief Minister Siddaramaiah to ensure the safety of foreign students in Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X