ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಆಗಾಗ ಜಿನುಗುವ ಮಳೆ: ಕೊರೆವ ಚಳಿ

By Nayana
|
Google Oneindia Kannada News

ಬೆಂಗಳೂರು, ಜು.13: ದಕ್ಷಿಣ ಒಳನಾಡಿನಲ್ಲಿ ನೈಋತ್ಯ ಮುಂಗಾರು ಪ್ರಬಲವಾಗಿದ್ದರೂ ನಗರದಲ್ಲಿ ಸಾಧಾರಣ ಮಳೆಯಾಗುತ್ತಿದೆ, ಇದರಿಂದ ಕೊರೆವ ಚಳಿಯೂ ಆರಂಭವಾಗಿದೆ.

ಪ್ರತಿ ದಿನ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ. ಗುರುವಾರ ನಗರದ ಕೇಂದ್ರಭಾಗದಲ್ಲಿ ಸ್ವಲ್ಪ ಮಟ್ಟಿಗೆ ಮಳೆಯಾಗಿದೆ. ನಗರದ ಹೊರ ವಲಯದಲ್ಲಿ ಹೆಚ್ಚು ಮಳೆಯಾಗಿದೆ ದಕ್ಷಿಣ ಒಳನಾಡಿನ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಮಳೆ ಕಡಿಮೆಯೇ ಆಗಿದೆ.

ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮುಂದುವರಿಯಲಿದೆ ಮಳೆಯ ಆರ್ಭಟ ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮುಂದುವರಿಯಲಿದೆ ಮಳೆಯ ಆರ್ಭಟ

ಜೂನ್‌ನಲ್ಲಿ ಕೆಲ ದಿನಗಳ ಕಾಲ ಉತ್ತಮ ಮಳೆಯಾಗಿತ್ತು. ಜುಲೈನಲ್ಲಿ ಮುಂಗಾರು ಚುರುಕುಗೊಂಡಿದ್ದರೂ ಮಳೆ ಕಡಿಮೆಯಾಗಿದೆ. ಇನ್ನೆರೆಡು ದಿನ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹಗಲಿನಲ್ಲಿ ಬಿಸಿಲು ಕಡಿಮೆಯಾಗಿರುವುದರಿಂದ ಚಳಿ ಹೆಚ್ಚಿದೆ.

Temperature drops in Bengaluru as rains continue

ನಗರದಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ 20.1 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿದೆ, ಎಚ್‌ಎಎಲ್‌ನಲ್ಲಿ ಗರಿಷ್ಠ 28.2 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಕೆಐಎಎಲ್‌ನಲ್ಲಿ ಗರಿಷ್ಠ 28.9 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19.6 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವಿದೆ.

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಸಹ ಭಾರೀ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ. ಕೊಡಗು ಮತ್ತು ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಇಂದು ಸಹ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನಗಳಲ್ಲಿ, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಇಂದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

English summary
As shower continued in Bengaluru since few days, temperature has come down and Bengaloreans experiencing chilled weather entire day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X