ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಬಿಜೆಪಿಗೆ ಹೈಕಮಾಂಡ್ ಕಟ್ಟೆಚ್ಚರ!

Posted By:
Subscribe to Oneindia Kannada

ಬೆಂಗಳೂರು, ಜನವರಿ, 23: ಕರ್ನಾಟಕದಲ್ಲಿ ಇತ್ತೀಚೆಗೆ ಬಿಜೆಪಿ ನಾಯಕರು ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದು ಇದು ಬಿಜೆಪಿ ಹೈಕಮಾಂಡಿಗೆ ಬಾರಿ ತಲೆನೋವಾಗಿ ಪರಿಣಮಿಸಿದೆ. ಉತ್ತರ ಭಾರತದ ಪಂಚರಾಜ್ಯಗಳ ಚುನಾವಣೆ ಮುಗಿಯುವ ವರೆಗೂ ಯಾವುದೇ ರೀತಿಯ ಬಹಿರಂಗ ಹೇಳಿಕೆ ನೀಡಬಾರದು ಎಂದು ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಕಟ್ಟಪ್ಪಣೆ ಮಾಡಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಹಾಗು ಪ್ರಧಾನ ಕಾರ್ಯದರ್ಶಿ ಟಿ. ಮುರಳೀಧರ್ ರಾವ್ ಕರ್ನಾಟಕದ ಬೆಳವಣಿಗೆ ಕುರಿತಂತೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಲ್ಲವೆ ಮುಖಂಡ ಕೆ.ಎಸ್.ಈಶ್ವರಪ್ಪ ಬಣದ ಯಾರೇ ಆಗಲಿ ಆರೋಪ- ಪ್ರತ್ಯಾರೋಪ ಮಾಡುವುದಾಗಲಿ, ವಾಗ್ವಾದಕ್ಕಿಳಿಯುವುದಾಗಲಿ ಮಾಡುವಂತಿಲ್ಲ. ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ವರಿಷ್ಠರು ತಾಕೀತು ಮಾಡಿದ್ದಾರೆ.[ರೆಡ್ಡಿ ಪುತ್ರಿ ಮದುವೆಗೆ ಹೋಗಬೇಡಿ: ಹೈಕಮಾಂಡ್ ಸೂಚನೆ]

The statement does not reveal the karnataka BJP leaders: amith shah

ರಾವ್ ಅವರು ದೂರಿನಲ್ಲಿ ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ವೈಮನಸ್ಯ ತಾರಕಕ್ಕೇರಿದೆ. ಇಬ್ಬರು ನಾಯಕರ ಅಸಮಾಧಾನದಿಂದ ಪಕ್ಷದಲ್ಲಿ ಬಾರಿ ಕೋಲಾಹಲವೇ ಎದ್ದಿದೆ. ಪರಸ್ಪರ ಒಬ್ಬರನ್ನೊಬ್ಬರು ನೋಡದ ಸ್ಥಿತಿಯನ್ನು ತಲುಪಿದ್ದಾರೆ. ಇವೆಲ್ಲಕ್ಕೂ ಮೂಲ ಕಾರಣ ಸಂಗೋಳ್ಳಿ ರಾಯಣ್ಣ ಬ್ರಿಗೇಡ್ ಇದು ಪಕ್ಷದ ಚೌಕಟ್ಟಿನಲ್ಲಿಯೆ ನಡೆಯಬೇಕು ಎಂಬುದು ರಾಜ್ಯಾದ್ಯಕ್ಷರ ಸೂಚನೆ, ಆದರೆ ಪಕ್ಷಕ್ಕೂ-ಬ್ರಿಗೇಡ್ ಗೂ ಸಂಬಂಧವಿಲ್ಲ ಎಂಬುದು ಈಶ್ವರಪ್ಪ ವಾದ, ಪದಾಧಿಕಾರಿಗಳ ನೇಮಕಾತಿಯಲ್ಲಿ ಕಾರ್ಯಕರ್ತರ ಕಡೆಗಣನೆ ಪಕ್ಷಕ್ಕೆ ನಷ್ಟ ತಂದೊಡ್ಡಿದೆ. ಹೀಗಾಗಿ ಸಂಧಾನ ನಡೆಸಿ ಸಮಸ್ಯೆ ಪರಿಹರಿಸುವಂತೆ ಹೈಕಮಾಂಡಿಗೆ ಮನವಿ ಮಾಡಿದ್ದಾರೆ.

ಇನ್ನು ರಾಜ್ಯದಲ್ಲಿ ಜಿಲ್ಲಾಮಟ್ಟದಲ್ಲಿಯೂ ಯಡಿಯೂರಪ್ಪ ಮತ್ತು ಈಶ್ವರಪ್ಪ ಬಣಗಳು ಬಲಗೊಳ್ಳುತ್ತಿದೆ. 2018ರ ಚುನಾವಣೆಯಲ್ಲಿ ಅಧಿಕಾರಿಕ್ಕೆ ಬರುವ ಕನಸು ಭಗ್ನಗೊಳ್ಳುವ ಆತಂಕ ವ್ಯಕ್ತವಾಗಿದೆ ಎಂದು ಮುರಳೀಧರರಾವ್ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಈ ಬಗ್ಗೆ ಶಾ ಅವರು ಪಂಚರಾಜ್ಯ ವಿಧಾನ ಸಭಾ ಚುನಾವಣೆ ಸಂಬಂಧ ತೊಡಗಿಕೊಂಡಿರುವ ಕಾರಣ, ಕರ್ನಾಟಕ ಬೆಳವಣಿಗೆ ಬಗ್ಗೆ ಗಮನಹರಿಸಲು ಆಗುತ್ತಿಲ್ಲ. ಹೀಗಾಗಿ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವವರೆಗೂ ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬಾರದೆಂದು ಹೇಳಲು ಸೂಚಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The statement does not reveal the state BJP leaders BJP High Command warning.The BJP general secretary T. Muralidhar rao write a compalint to national president Amit Shah and tell the state development.
Please Wait while comments are loading...