ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಿಲ್ಲ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಡಿಸೆಂಬರ್ 6: ಮೇಕೆದಾಟು ಯೋಜನೆ ಹಿಂದಿನ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಈ ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆ ಇಲ್ಲ. ಆದರೂ ಆ ರಾಜ್ಯ ರಾಜಕೀಯ ಉದ್ದೇಶ ಇಟ್ಟುಕೊಂಡು ತಕರಾರು ತೆಗೆದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?

ನಮ್ಮ ವ್ಯಾಪ್ತಿಯಲ್ಲಿ ಯೋಜನೆ ಕೈಗೆತ್ತಿಕೊಳ್ಳಲು ಯಾವುದೇ ಅಡ್ಡಿ ಇಲ್ಲ. ಸುಪ್ರೀಂಕೋರ್ಟ್ ಹಾಗೂ ನ್ಯಾಯ ಮಂಡಳಿ ಆದೇಶಗಳೂ ನಮಗೆ ಪೂರಕವಾಗಿವೆ. ಯೋಜನೆ ಬೇಡ ಎಂದು ಯಾವ ಅದೇಶವೂ ಹೇಳಿಲ್ಲ. ಯೋಜನೆಗೆ ನಾವು ತಮಿಳುನಾಡಿನ ಒಪ್ಪಿಗೆ ಪಡೆಯುವ ಅವಶ್ಯಕತೆ ಕೂಡ ಇಲ್ಲ.‌

ಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದ ವಾದವೇನು? ಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದ ವಾದವೇನು?

ತಮಿಳುನಾಡಿನ ತಕರಾರಿಗೆ ಯಾವುದೇ ಆಧಾರ, ಸಾಕ್ಷಿ ಇಲ್ಲ. ನ್ಯಾಯ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಆದೇಶಗಳೂ ಸ್ಪಷ್ಟವಾಗಿವೆ.ನಮ್ಮ ಯೋಜನೆ ನ್ಯಾಯಯುತ, ಹೀಗಾಗಿ ನಮ್ಮ ವಕೀಲರು ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ಮನವೊಲಿಸುವ ಕೆಲಸ ಮಾಡಬೇಕು. ಒಂದು ವೇಳೆ ಕೋರ್ಟ್ ಮಧ್ಯಂತರ ತಡೆ ಆದೇಶ ಕೊಟ್ಟರೆ ಕಷ್ಟವಾಗುತ್ತದೆ. ಆ ರೀತಿ ಆಗದಂತೆ ನೋಡಿಕೊಳ್ಳಬೇಕು. ವಕೀಲರ ತಂಡ ಮುಂಜಾಗ್ರತೆ ವಹಿಸಬೇಕು.

There is no harm for Tamil Nadu In Mekedatu project

ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ತಮಿಳುನಾಡು ಈಗ ಧ್ವನಿ ಎತ್ತಿದೆ. ಇದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು.

English summary
Former chief minister Siddaramaiah opines that There will be no harm for Tamil Nadu from Mekedatu irrigation and power project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X