ಮೇ 2ರಿಂದಲೇ ಪಿಯುಸಿ ತರಗತಿಗಳು ಆರಂಭ!

Posted By: Nayana
Subscribe to Oneindia Kannada
   ಬೆಂಗಳೂರಿನಲ್ಲಿ 1st PUC ಹಾಗು 2nd PUC ತರಗತಿಗಳು ಮೇ 2ರಿಂದ ಆರಂಭ | Oneindia Kannada

   ಬೆಂಗಳೂರು, ಏಪ್ರಿಲ್ 12: ಪದವಿ ಪೂರ್ವ ಶಿಕ್ಷಣ ಇಲಾಖೆಯು 2018-19 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಈ ವರ್ಷ ಮೇ 2 ರಿಂದಲೇ ದ್ವಿತೀಯ ಪಿಯುಸಿ ಹಾಗೂ ಮೇ 14 ರಿಂದ ಪ್ರಥಮ ಪಿಯುಸಿ ತರಗತಿಗಳು ಆರಂಭವಾಗಲಿವೆ.

   ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ತರಗತಿಗಳನ್ನು ಬೇಗನೆ ಆರಂಭಿಸಲು ನಿರ್ಧರಿಸಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆಗಳು ಫೆಬ್ರವರಿ 21 ರಂದೇ ಮುಗಿದಿದ್ದು, ವಿದ್ಯಾರ್ಥಿಗಳಿಗೆ 69 ದಿನ ಬೇಸಿಗೆ ರಜೆ ದೊರೆತಂತಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ. ಶಿಖಾ ತಿಳಿಸಿದ್ದಾರೆ.

   ಮೇ 7ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶಿಕ್ಷಣ ಸಚಿವ ತನ್ವೀರ್ ಸೇಠ್

   ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆಯ ದಿನಾಂಕದ ಮೂರನೇ ದಿನದಿಂದಲೇ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ. ಈ ವರ್ಷ ಸರ್ಕಾರಿ ಪಿಯು ಕಾಲೇಜುಗಳು ಬೇಗ ಆರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳ ದಾಖಲಾತಿ ನೋಂದಣಿಯಲ್ಲಿಯೂ ಹೆಚ್ಚಳವಾಗಬಹುದೆಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

   This time PU colleges will resume from May 2

   ಇನ್ನು ಈ ವರ್ಷ ಎಲ್ಲಾ ವಿಷಯಗಳಿಗೆ ಅನ್ವಯವಾಗುವಂತೆ ಇಲಾಖೆ ಸಾಮಾನ್ಯ ಕಾರ್ಯಕ್ರಮ ರೂಪಿಸುತ್ತಿದ್ದು, ಸರ್ಕಾರಿ ಕಾಲೇಜುಗಳಲ್ಲಿ ನಿಗದಿತ ತರಗತಿಗಳ ಜತೆಯಲ್ಲೇ ಸಾಮಾನ್ಯ ಕಾರ್ಯಕ್ರಮದ ಅಭ್ಯಾಸ ವರ್ಗಕ್ಕಾಗಿ ಅವಧಿಯನ್ನು ನಿಗದಿಪಡಿಸಲಾಗುತ್ತಿದೆ. ಇಂತಹ ಅಭ್ಯಾಸ ವರ್ಗಕ್ಕಾಗಿ ಪ್ರಶ್ನಾವಳಿ ಕೋಶ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

   ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ

   ಈ ವರ್ಷ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜುಲೈ ಮೊದಲ ವಾರ ಸೇತುಬಂಧ ಕಾರ್ಯಕ್ರಮವಿರುತ್ತದೆ. ಡಿ.6ರಿಂದ 8 ರವರೆಗೆ ಎರಡನೇ ಕಿರು ಪರೀಕ್ಷೆ ನಡೆಯಲಿದೆ. ಡಿಸೆಂಬರ್ ಕೊನೆಯ ವಾರದಲ್ಲಿ ಪ್ರಥಮ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ. ಡಿ.24ರಿಂದ 31ರವರೆಗೆ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ.

   ಜ.7ರಿಂದ 17ರವರೆಗೆ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ತಾತ್ವಿಕ ಪರೀಕ್ಷೆಗಳು, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸನಯ ನಿರ್ವಹಣೆ, ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   In a surprise move, department of pre university education has decided to reopen academic year from May 2. While second PU classes will be started on May 2, then first PU will be resumes from May 14.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ