ಫ್ರೇಜರ್ ಟೌನ್ ರೇಪ್ ಕೇಸ್ : ಮೂವರ ಬಂಧನ
ಬೆಂಗಳೂರು, ಜು. 19 : ಇತ್ತೀಚೆಗೆ ಫ್ರೇಜರ್ ಟೌನ್ ಬಳಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಚಲಿಸುವ ಕಾರಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಶನಿವಾರ ಬಂಧಿಸಲಾಗಿದೆ. ಬಂಧಿತನಾಗಿರುವ ಪ್ರಮುಖ ಆರೋಪಿ ನೀಡಿದ ಸುಳಿವಿನ ಮೇರೆಗೆ ಇವರನ್ನು ಕೆ.ಜಿ.ಹಳ್ಳಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ಕಾರ್ಯಚರಣೆ ನಡೆಸಿದ ಕೆ.ಜಿ.ಹಳ್ಳಿ ಪೊಲೀಸರು, ಹಫೀಜ್, ಶೋಯಬ್ ಹಾಗೂ ದಾವೂದ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದು, ಅವರ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಬೆರಳಚ್ಚು ಮಾದರಿಯನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಸಂಬಂಧ ಬಂಧಿತನಾಗಿರುವ ಪ್ರಮುಖ ಆರೋಪಿ ನಾಸಿರ್ ಹೈದರ್ ನೀಡಿರುವ ಮಾಹಿತಿ ಅನ್ವಯ ಈ ಮೂವರನ್ನು ಬಂಧಿಸಲಾಗಿದೆ. ಅತ್ಯಾಚಾರ ನಡೆದ ಕಾರಿನಲ್ಲಿರುವ ಬೆರಳಚ್ಚು ಮಾದರಿಗೆ ಆರೋಪಿಗಳ ಬೆರಳಚ್ಚು ಮಾದರಿ ಹೊಂದಾಣಿಕೆಯಾಗುತ್ತದೆಯೇ? ಎಂದು ಪರಿಶೀಲನೆ ನಡೆಸುತ್ತಿದ್ದಾರೆ. [ಇನ್ಸ್ ಪೆಕ್ಟರ್ ರಫೀಕ್ ಬೆಳಗ್ಗೆ ಅರೆಸ್ಟ್, ಸಂಜೆಗೆ ರಿಲೀಸ್]
ಎರಡು ದಿನಗಳ ಹಿಂದೆ ಸಹ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ, ಯುವತಿ ಆ ಇಬ್ಬರು ಆರೋಪಿಗಳನ್ನು ಗುರುತಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಪ್ರಕರಣ ತನಿಖೆ ನಡೆಸುತ್ತಿರುವ ಪೊಲೀಸರು ಶುಕ್ರವಾರ ಪುಲಿಕೇಶಿನಗರ ಇನ್ಸ್ ಪೆಕ್ಟರ್ ಮಹಮ್ಮದ್ ರಫೀಕ್ ಅವರನ್ನು ಶುಕ್ರವಾರ ವಿಚಾರಣೆ ನಡೆಸಿದ್ದಾರೆ. [ಫ್ರೇಜರ್ ಟೌನ್ ಪ್ರಕರಣ: ಇನ್ಸ್ ಪೆಕ್ಟರ್ ಮೇಲೆ ಎಫ್ಐಆರ್]
ಸ್ನೇಹಿತನ ಜೊತೆಯಲ್ಲಿದ್ದ 22 ವರ್ಷದ ಯುವತಿಯನ್ನು ಆರು ಮಂದಿ ದುಷ್ಕರ್ಮಿಗಳು ಅಪಹರಿಸಿ ಕಾರಿನಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಜು.15ರಂದು ಬೆಳಕಿಗೆ ಬಂದಿತ್ತು. ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದು, ತಲೆಮರಿಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.[ಪೋಷಕರ ಕೂಗಿಗೆ, ಹಾರ್ಲೆ ಗುಡುಗಿಗೆ ಏಳುವುದೇ ಸರ್ಕಾರ?]












Click it and Unblock the Notifications