ಬೆಂಗಳೂರಿನ ವೈಟ್ ಫೀಲ್ಡ್ ಬಳಿ 3 ಅಂತಸ್ತಿನ ಕಟ್ಟಡ ಕುಸಿತ

Written By: Ramesh
Subscribe to Oneindia Kannada

ಬೆಂಗಳೂರು, ಜನವರಿ. 08 : ಬೆಂಗಳೂರಿನ ವೈಟ್ ಫೀಲ್ಡ್ ನ ಅಕ್ಸೆಂಚರ್ ಬಳಿಯ ನಿರ್ಮಾಣ ಹಂತದ ಕಟ್ಟಡವೊಂದು ಭಾನುವಾರ ಬೆಳಗ್ಗೆ ಕುಸಿದು ಬಿದ್ದಿದೆ.

ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯ ಮುಂದುವರೆಸಿದ್ದಾರೆ.

ಕೆಲ ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು. ಇನ್ನು ಕೆಲ ಕೂಲಿ ಕಾರ್ಮಿಕರು ಕಟ್ಟಡ ಒಳಗೆ ಸಿಲುಕಿದ್ದಾರೆಂದು ಶಂಕಿಸಲಾಗಿದೆ.

Three storey under construction building collapses in Bengaluru

ದಿವ್ಯಶ್ರೀ ಬಿಲ್ಡರ್ಸ್ ಕಂಪನಿ ನಿರ್ಮಿಸುತ್ತಿದ್ದ ಈ ಕಟ್ಟದ ಮೂರನೇ ಅಂತಸ್ತಿಗೆ ಮೋಲ್ಡ್ ಹಾಕಲಾಗುತ್ತಿತ್ತು. ಭಾನುವಾರ ಬೆಳಗ್ಗೆ ಈ ಕಟ್ಟಡ ಕುಸಿದಿದ್ದು. ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ.

ಈ ಬಗ್ಗೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Three storey under construction building collapses in whitefield Bengaluru On Sunday morning.
Please Wait while comments are loading...