ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟಿಪ್ಪು ಜಯಂತಿ ವಿವಾದ: ಹೆಗಡೆ ವಿರುದ್ಧ ಕಾನೂನು ಕ್ರಮಕ್ಕೆ ಟಿಪ್ಪು ಕುಟುಂಬ ಒತ್ತಾಯ

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ಅಕ್ಟೋಬರ್ 23: ಟಿಪ್ಪು ಸುಲ್ತಾನ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಟಿಪ್ಪು ಕುಟುಂಬಸ್ಥರು, ಅವರ ವಿರುದ್ಧ ಕಾನೂನು ಸಮರ ನಡೆಸಲಾಗುವುದು ಎಂದಿದ್ದಾರೆ.

ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಬಳಸಬೇಡಿ: ಅನಂತಕುಮಾರ ಹೆಗಡೆಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಬಳಸಬೇಡಿ: ಅನಂತಕುಮಾರ ಹೆಗಡೆ

16 ನೇ ಶತಮಾನದಲ್ಲಿ ಮೈಸೂರನ್ನು ಆಳಿದ ಟಿಪು ಸುಲ್ತಾನ್ ಒಬ್ಬ ಅತ್ಯಾಚಾರಿ ಮತ್ತು ಕೊಲೆಗಡುಕ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ನ.10 ರಂದು ನಡೆಯಲಿರುವ ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಿಸದಿರುವಂತೆಯೂ ಹೇಳಿದ್ದರು. ಈ ಕುರಿತು ಟಿಪ್ಪು ಸುಲ್ತಾನನ ಆರನೇ ಪೀಳಿಗೆಯ ಭಕ್ತಿಯಾರ್ ಅಲಿ, ತಮ್ಮ ಇತರೆ ಕುಟುಂಬಸ್ಥರೊಂದಿಗೆ ಚರ್ಚಿಸಿ, ಹೆಗಡೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಮನವಿ ಮಾಡುವುದಾಗಿ ಹೇಳಿದ್ದಾರೆ.

ಟಿಪ್ಪು ಜಯಂತಿ ಆಚರಿಸೋಕೆ ಬಿಡೋಲ್ಲ: ಪ್ರಮೋದ್ ಮುತಾಲಿಕ್ಟಿಪ್ಪು ಜಯಂತಿ ಆಚರಿಸೋಕೆ ಬಿಡೋಲ್ಲ: ಪ್ರಮೋದ್ ಮುತಾಲಿಕ್

Tipu Sultan's descendants to sue BJP leader for ‘mass rapist’ comment

'ಟಿಪ್ಪು ಸುಲ್ತಾನ್ ಒಬ್ಬ ಅಪ್ರತಿಮ ವೀರ, ಹೋರಾಟಗಾರ. ಅಂಥವರ ವಿರುದ್ಧ ಇಂಥ ಅವಹೇಳನಾಕಾರಿ ಹೇಳಿಕೆ ನೀಡುವುದು ತರವಲ್ಲ. ಇದು ಟಿಪ್ಪು ಸುಲ್ತಾನನ ವ್ಯಕ್ತಿತ್ವವನ್ನು ಜನರ ಕಣ್ಣಲ್ಲಿ ಕೀಳಾಗುವಂತೆ ಮಾಡುತ್ತದೆ' ಎಂದು ಅಲಿ ಹೇಳಿದ್ದಾರೆ.

English summary
The family of Tipu Sultan has decided to take legal action against BJP MP, Ananthkumar Hegde. The decision comes in the wake of Hegde calling the 19th century ruler of Mysore a mass rapist and brutal killer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X