ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್ ಟಿಇ ಕಾಯ್ದೆಯ ಆನ್ ಲೈನ್ ಅರ್ಜಿ ಅವಧಿ ವಿಸ್ತರಣೆ

By Vanitha
|
Google Oneindia Kannada News

ಬೆಂಗಳೂರು,ಮಾರ್ಚ್,15: ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆಯಲು ಅನುಕೂಲವಾಗಿರುವ ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ (Right to Education)ಗೆ ಸಲ್ಲಿಸಬೇಕಾದ ಅರ್ಜಿ ಅವಧಿಯನ್ನು ಮಾರ್ಚ್ 22ರವರೆಗೆ ವಿಸ್ತರಿಸಲಾಗಿದೆ.

ಎಲ್ ಕೆಜಿ ಅಥವಾ ಒಂದನೇ ತರಗತಿಗೆ ಪ್ರವೇಶ ಕೋರಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆ. 23ರಿಂದ ಮಾರ್ಚ್ 15ರವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಈ ಅವಧಿಯನ್ನು ಪೋಷಕರ ಒತ್ತಾಯದ ಮೇರೆಗೆ ಮುಂದೂಡಲಾಗಿದೆ.[ಬಡಮಕ್ಕಳಿಗೆ ಶಾಲೆಯಲ್ಲಿ ಸೀಟು ಬಿಟ್ಟುಕೊಡಿ]

To extend the period of application of Right to Education Act

ಆರ್ ಟಿಇ ಕಾಯ್ದೆಯಡಿ ಮಾರ್ಚ್ 14ರವರೆಗೆ ರಾಜ್ಯಾದ್ಯಂತ 1.95 ಲಕ್ಷ ಅರ್ಜಿಗಳು ಬಂದಿದ್ದವು. ಆದರೆ ಪೋಷಕರ ಒತ್ತಾಯದ ಮೇರೆಗೆ ಅರ್ಜಿ ಸಲ್ಲಿಸಲು ಇನ್ನಷ್ಟು ಅವಕಾಶ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಕೆ. ಆನಂದ್ ತಿಳಿಸಿದ್ದಾರೆ.

ಆರ್ ಟಿಇ ಗೆ ಅರ್ಜಿ ಸಲ್ಲಿಸಲು ಸಹಾಯವಾಣಿ:

ಸ್ವತಃ ಆನ್‌ಲೈನ್ ಅರ್ಜಿ ಭರ್ತಿ ಮಾಡಲಾಗದವರು ಬಿಇಒ ಕಚೇರಿಗಳಲ್ಲಿ ಅರ್ಜಿ ಭರ್ತಿ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಕಚೇರಿಯಲ್ಲಿ ಹಾಗೂ ಡಯೆಟ್ (Distric Institution of Education and Training) ನಲ್ಲಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ.[ಆರ್ ಟಿಇಯಡಿ ಎಲ್ ಕೆಜಿ, ಯುಕೆಜಿ ಪ್ರವೇಶಕ್ಕೆ ತಡೆ ನೀಡಿದ ಹೈಕೋರ್ಟ್]

ತಾಲೂಕು ಮಟ್ಟದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಸಹಾಯವಾಣಿ ಕೇಂದ್ರದ ನಿರ್ವಹಣೆಗೆ ಪ್ರತ್ಯೇಕವಾಗಿ ಸಿಬ್ಬಂದಿ ನಿಯೋಜಿಸಲಾಗಿದೆ.

English summary
To extend the period of application of Right to Education Act from March 15 to March 22nd. Parents were insited to the Education department so they extendend online application period.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X