ಇಂದಿರಾ ಕ್ಯಾಂಟೀನ್ ಆಯ್ತು, ಇದೀಗ ಇಂದಿರಾ ಕ್ಲಿನಿಕ್ ಉದ್ಘಾಟನೆ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 02: ಬೆಂಗಳೂರು ನಗರದಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆ ಯಶಸ್ಸಿನ ಬೆನ್ನಲ್ಲೆ ಇದೀಗ ರಾಜ್ಯ ಸರ್ಕಾರವು ಸಾರಿಗೆ ಇಲಾಖೆಯ ಅಡಿಯಲ್ಲಿ ಇಂದಿರಾ ಹೆಸರಿನಲ್ಲಿ ಇನ್ನೊಂದು ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತುಕೊಂಡಿದೆ.

ಬಿಎಂಟಿಸಿಯಲ್ಲಿ ಮಹಿಳೆಯರಿಗಾಗಿ "ಗುಲಾಬಿ ಆಸನ'

ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ಇಂದಿರಾ ಕ್ಲಿನಿಕ್ ಯೋಜನೆಯನ್ನು ಜಾರಿಗೆ ತಂದಿದೆ. ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣ, ಯಶವಂತಪುರ ಟಿಟಿಎಂಸಿಯಲ್ಲಿ ಇಂದು (ಶನಿವಾರ) ಆರಂಭಿಕವಾಗಿ ಎರಡು ಇಂದಿರಾ ಕ್ಲಿನಿಕ್ ಗಳನ್ನು ಸಾರಿಗೆ ಸಚಿವ ಎಚ್ ಎಂ ರೇವಣ್ಣ ಉದ್ಘಾಟಿಸಿದರು.

Transport minister H.M Revanna inaugurates Indira transit clinic in Bengaluru

ಬಳಿಕ ಮಾತನಾಡಿದ ಸಚಿವ ರೇವಣ್ಣ, "ಬಿಎಂಟಿಸಿ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಈ ಇಂದಿರಾ ಟ್ರಾನ್ಸಿಟ್ ಕ್ಲಿನಿಕ್ ನಿರ್ಮಿಸಲಾಗಿದೆ. ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಪಿಂಕ್ ಆಸನ ಅಳವಡಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಮತ್ತು ಮಹಿಳೆಯರ ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಗರದ ಆಯ್ದ ಪ್ರದೇಶಗಳಿಗೆ ರಿಯಾಯಿತಿ ಟಿಕೆಟ್ ದರದಲ್ಲಿ ಹೊಸತಾಗಿ 'ಇಂದಿರಾ ಸಾರಿಗೆ ಬಸ್‌' ಸೇವೆಯನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ರೇವಣ್ಣ ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Transport Minister H.M. Revanna inaugurates BMTC's ambitious Indira transit clinic at Kempegowda Bus station and Yeshwanthpura bus station in Bengaluru on December 2.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ