ಸಾರಿಗೆ ಮುಷ್ಕರ : 5 ನಿಮಿಷಕ್ಕೊಂದು ಮೆಟ್ರೋ ರೈಲು

Posted By:
Subscribe to Oneindia Kannada

ಬೆಂಗಳೂರು, ಜುಲೈ 25 : ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದ ಪ್ರಯಾಣಿಕರು ನಮ್ಮ ಮೆಟ್ರೋ ಮೊರೆ ಹೋಗಿದ್ದಾರೆ.

ಭಾನುವಾರ ರಾತ್ರಿಯಿಂದಲೇ ಬಿಎಂಟಿಸಿ ಬಸ್ಸುಗಳಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದಾರೆ. ಸೋಮವಾರ ಮುಂಜಾನೆ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಮೆಟ್ರೋ ಬಳಸುತ್ತಿದ್ದಾರೆ. ಆದ್ದರಿಂದ, ಮೆಟ್ರೋ ನಿಲ್ದಾಣಗಳು ತುಂಬಿ ತುಳುಕುತ್ತಿವೆ. ಟಿಕೆಟ್ ಪಡೆಯಲು ಜನರು ಸಾಲುಗಟ್ಟಿ ನಿಂತಿದ್ದಾರೆ.[ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮಾರ್ಗದಲ್ಲಿ 6 ನಿಮಿಷಕ್ಕೊಂದು ರೈಲು]

ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲನ್ನು ಬಿಎಂಆರ್‌ಸಿಎಲ್ ಓಡಿಸುತ್ತಿದೆ. ಪ್ರಸ್ತುತ ನಮ್ಮ ಮೆಟ್ರೋ ಬೈಯಪ್ಪನಹಳ್ಳಿ-ಮೈಸೂರು ರಸ್ತೆ (ನಾಯಂಡಹಳ್ಳಿ) ನೇರಳೆ ಮಾರ್ಗದಲ್ಲಿ 6 ನಿಮಿಷಕ್ಕೊಂದು ರೈಲು ಸಂಚಾರ ನಡೆಸುತ್ತಿತ್ತು.[ಮುಷ್ಕರ ಕೈ ಬಿಡಲು ನೌಕರರಿಗೆ ಸಿದ್ದರಾಮಯ್ಯ ಮನವಿ]

ಬೈಯಪ್ಪನಹಳ್ಳಿ-ಮೈಸೂರು ರಸ್ತೆ (ನಾಯಂಡಹಳ್ಳಿ) ನೇರಳೆ ಮಾರ್ಗ ಮತ್ತು ಸಂಪಿಗೆ ರಸ್ತೆ-ನಾಗಸಂದ್ರದ ನಡುವಿನ ಹಸಿರು ಮಾರ್ಗದಲ್ಲಿ ಸದ್ಯ ನಮ್ಮ ಮೆಟ್ರೋ ರೈಲುಗಳು ಸಂಚಾರ ನಡೆಸುತ್ತಿವೆ. ಮೆಟ್ರೋ ಸಂಚಾರವಿಲ್ಲದ ಪ್ರದೇಶಗಳಲ್ಲಿ ಜನರು ಸಂಚಾರ ನಡೆಸಲು ಪರದಾಡುತ್ತಿದ್ದಾರೆ....[ಸಾರಿಗೆ ಮುಷ್ಕರ : ಕ್ಷಣ-ಕ್ಷಣದ ಮಾಹಿತಿ]

ಮೆಟ್ರೋ ಸಂಚಾರ ಹೆಚ್ಚಿಸಿದ ಬಿಎಂಆರ್‌ಸಿಎಲ್

ಮೆಟ್ರೋ ಸಂಚಾರ ಹೆಚ್ಚಿಸಿದ ಬಿಎಂಆರ್‌ಸಿಎಲ್

ಜುಲೈ 20ರಿಂದಲೇ ಅನ್ವಯವಾಗುವಂತೆ ಬೈಯಪ್ಪನಹಳ್ಳಿ-ಮೈಸೂರು ರಸ್ತೆ (ನಾಯಂಡಹಳ್ಳಿ) ನೇರಳೆ ಮಾರ್ಗದಲ್ಲಿ 6 ನಿಮಿಷಕ್ಕೊಂದು ನಮ್ಮ ಮೆಟ್ರೋ ರೈಲು ಸಂಚಾರ ನಡೆಸುತ್ತಿದೆ. ಬೆಂಗಳೂರು ಮೆಟ್ರೋ ರೈಲು ನಿಗಮವು ಇಂದು ಅದನ್ನು 5 ನಿಮಿಷಗಳಿಗೆ ಕಡಿತಗೊಳಿಸಿದೆ.

ಸಮಯ ವಿಸ್ತರಣೆ ಮಾಡುವ ನಿರೀಕ್ಷೆ

ಸಮಯ ವಿಸ್ತರಣೆ ಮಾಡುವ ನಿರೀಕ್ಷೆ

ನಮ್ಮ ಮೆಟ್ರೋ ಸದ್ಯ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ (ಸಂಪಿಗೆ ರಸ್ತೆ-ನಾಗಸಂದ್ರ ನಡುವೆ ಬೆಳಗ್ಗೆ 5 ರಿಂದ ರಾತ್ರಿ 11ರ ತನಕ) ಸಂಚಾರ ನಡೆಸುತ್ತಿವೆ. ಸಾರಿಗೆ ಮುಷ್ಕರದ ಹಿನ್ನಲೆಯಲ್ಲಿ ಸಮಯವನ್ನು ವಿಸ್ತರಣೆ ಮಾಡುವಂತೆ ಬೇಡಿಕೆ ಇದೆ. ಆದರೆ, ಈ ಕುರಿತು ಬಿಎಂಆರ್‌ಸಿಎಲ್ ಇನ್ನೂ ಅದೇಶ ಪ್ರಕಟಿಸಿಲ್ಲ.

ಎಲ್ಲಿದೆ ಮೆಟ್ರೋ ರೈಲು?

ಎಲ್ಲಿದೆ ಮೆಟ್ರೋ ರೈಲು?

ಸದ್ಯ, ಬೈಯಪ್ಪನಹಳ್ಳಿ-ಮೈಸೂರು ರಸ್ತೆ (ನಾಯಂಡಹಳ್ಳಿ) ನೇರಳೆ ಮಾರ್ಗ, ಸಂಪಿಗೆ ರಸ್ತೆ-ನಾಗಸಂದ್ರ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲುಗಳು ಸಂಚಾರ ನಡೆಸುತ್ತಿವೆ.

'ವೇತನ ಹೆಚ್ಚಳ ಸಾಧ್ಯವೇ ಇಲ್ಲ'

'ವೇತನ ಹೆಚ್ಚಳ ಸಾಧ್ಯವೇ ಇಲ್ಲ'

ಮುಷ್ಕರದ ಕುರಿತು ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, 'ಸಾರಿಗೆ ನೌಕರರ ಯೂನಿಯನ್‌ಗಳು ಹಠಮಾರಿ ಧೋರಣೆ ಅನುಸರಿಸುತ್ತಿವೆ. ಶೇ 30 ರಿಂದ 35ರಷ್ಟು ವೇತನ ಪರಿಷ್ಕರಣೆ ಸಾಧ್ಯವೇ ಇಲ್ಲ' ಎಂದು ಸೋಮವಾರ ಬೆಳಗ್ಗೆ ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka State Road Transport Corporation employees strike July 25, 2016. Metro train will run every 5 minutes in Bengaluru city.
Please Wait while comments are loading...