ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ragging ಪ್ರಕರಣ, ವಿದ್ಯಾರ್ಥಿ ಬಂಧನ

|
Google Oneindia Kannada News

arrest
ಬೆಂಗಳೂರು, ಅ.8 : ಬೆಂಗಳೂರಿನ ಪ್ರತಿಷ್ಠಿತ ಎಂ.ಎಸ್.ರಾಮಯ್ಯ ಕಾಲೇಜಿನ ragging ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ವರ್ಷದ ಬಿಬಿಎಂ ವ್ಯಾಸಂಗ ಮಾಡುತ್ತಿರುವ ಒಬ್ಬ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರಿಸಿಕೊಂಡಿರುವ ಮತ್ತೊಬ್ಬ ಆರೋಪಿಗಾರಿ ಸದಾಶಿವನಗರ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

raggingಗೆ ಒಳಗಾರ ಜೆಮ್‌ಷೆಡ್‌ಪುರ ಮೂಲದ ಸುಧೀಶ್‌ ಕುಮಾರ್ ಮೊಂಡಲ್‌ ಹಾಗೂ ಭೂಪಾಲ್‌ನ ಸೀಮಂತ್‌ ದುಬೇ ನೀಡಿದ ದೂರಿನ ಅನ್ವಯ, ಮತ್ತು ಹರೀಶ್‌ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆ ಮರಿಸಿಕೊಂಡಿರುವ ವರುಣ್ ಗಾಗಿ ಹುಡುಕಾಟ ಪ್ರಾರಂಭವಾಗಿದೆ.

ಭಾನುವಾರ ವರುಣ್‌ ಹಾಗೂ ಹರೀಶ್‌, ಸೀಮಂತ್ ಮತ್ತು ಸುಧೀಶ್ ಕುಮಾರ್ ಅವರನ್ನು ಮತ್ತಿಕೆರೆಯಲ್ಲಿರುವ ಪೇಯಿಂಗ್‌ ಗೆಸ್ಟ್‌ಗೆ ಕರೆದೊಯ್ದ. ವಿವಸ್ತ್ರಗೊಳಿಸಿ ನರ್ತಿಸುವಂತೆ ಹೇಳಿದರು. ನಿರಾಕರಿಸಿದ್ದರಿಂದ ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಹಿರಿಯ ವಿದ್ಯಾರ್ಥಿಗಳ ಹಲ್ಲೆಯಿಂದ ಗಾಯಗೊಂಡಿರುವ ಸೀಮಂತ್‌ ಎಂ.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸುಧೀಶ್‌ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಘಟನೆ ಬಗ್ಗೆ ವಿವರಣೆ ನೀಡುವಂತೆ ಕಾಲೇಜಿನ ಆಡಳಿತ ಮಂಡಳಿಗೆ ಪೊಲೀಸರು ಸೂಚನೆ ನೀಡಿದ್ದಾರೆ.

ವಿದ್ಯಾರ್ಥಿಗಳ ವಿರುದ್ಧ ಕಾನೂನು ಬಾಹಿರವಾಗಿ ಬಂಧಿಸಿಡುವುದು (ಐಪಿಸಿ 341 ಮತ್ತು 342), ಹಲ್ಲೆ (ಐಪಿಸಿ 323), ಉದ್ದೇಶ ಪೂರ್ವಕವಾಗಿ ಶಾಂತಿ ಕದಡಿದ ಆರೋಪದ (ಐಪಿಸಿ 504) ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸದಾಶಿವನಗರ ಪೊಲೀಸರು ಹೇಳಿದ್ದಾರೆ.

ಬೆಂಗಳೂರು ವಿವಿ ಕುಲಪತಿ ಡಾ.ಬಿ.ತಿಮ್ಮೇಗೌಡ ಸೋಮವಾರ ಸಂಜೆ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಸೀಮಂತ್‌ ಯೋಗಕ್ಷೇಮ ವಿಚಾರಿಸಿದರು. ಘಟನೆಯ ಕುರಿತು ಕಾಲೇಜು ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳವುದಾಗಿ ಅವರು ಹೇಳಿದ್ದಾರೆ.

ಘಟನೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಶ್ರೀಕಾಂತ್ ಎಂಬ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ್ದ ಆದೇಶವನ್ನು ಹಿಂಪಡೆಯುವಂತೆ ಕಾಲೇಜಿನ ಆಡಳಿತ ಮಂಡಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು. (ಎಂಎಸ್ ರಾಮಯ್ಯ ಕಾಲೇಜಿನಲ್ಲಿ ragging)

ಎಂ.ಎಸ್.ರಾಮಯ್ಯ ಕಾಲೇಜಿನ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹೆಚ್ಚುವರಿ ಪೊಲೀಸ್ ಕಮೀಷನರ್ ಕಮಲ್ ಪಂಥ್, ವಿದ್ಯಾರ್ಥಿಗಳು ಹಲ್ಲೆ ನಡೆದಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಾರೆ. ragging ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

English summary
BBM student arrested by Sadashivanagar police in the case of M.S.Ramaiah collage ragging. On Monday, October 7, Harish arrested and cases have been registered. police searching for another student Varun. beaten student recovering in M.S.Ramaiah hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X