ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಅದ್ಧೂರಿ ಸ್ವಾಗತ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 09: ಸಂಸದ ಅನಂತ್ ಕುಮಾರ್ ಹೆಗಡೆ ಅವರು ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮ ಖಾತೆ ಸಚಿವರಾದ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕಚೇರಿಗೆ ಶನಿವಾರ ಭೇಟಿ ನೀಡಿದರು.

ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಪರಿಚಯ

ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರಿಗೆ ಕಾರ್ಯಕರ್ತರು ಹೂಗುಚ್ಛ ನೀಡಿ ಸ್ವಾಗತ ಕೋರಿದರು.

Union minister Ananth Kumar Hegde visits to state bjp office in Bengaluru

ಈ ವೇಳೆ ಮತನಾಡಿದ ಅವರು, "ನಾನು ಹಿಂದುತ್ವ ವಾದಿಯಲ್ಲ, ರಾಷ್ಟ್ರೀಯ ವಾದಿ. ನನ್ನನ್ನು ಕೇಂದ್ರ ಸಚಿವ ಸಂಪುಟಕ್ಕೆ ಆಯ್ಕೆ ಮಾಡಿದ್ದರ ಹಿಂದಿನ‌ ರಹಸ್ಯ ಪ್ರಧಾನಿ‌ ಮೋದಿ ಹಾಗೂ ಬಿಜೆಪಿ ವರಿಷ್ಠರಿಗೆ ಮಾತ್ರ ಗೊತ್ತು. ನಾನು ಎಂದೂ ರಾಜ್ಯ ರಾಜಕೀಯಕ್ಕೆ ಬರುವ ಕನಸು ಕಂಡವನಲ್ಲ, ಕನಸುಗಾರನೂ ಅಲ್ಲ ಎಂದರು.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡುವುದು ಸೂಕ್ತವಲ್ಲ. ನಕ್ಸಲ್ ಕುರಿತಾದ ಯಾವುದೇ ಪ್ರಶ್ನೆಗೆ ಉತ್ತರಿಸುವುದಿಲ್ಲ ಎಂದು ಗೌರಿ ಹತ್ಯೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Union skill development minister Ananht Kumar Hegde visits to state bjp office Malleshwaram, Bengaluru on September 9.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ