ಜ.7ರಂದು ಬೆಂಗಳೂರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್

Posted By:
Subscribe to Oneindia Kannada
   ಬೆಂಗಳೂರಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ | Oneindia Kannada

   ಬೆಂಗಳೂರು, ಜನವರಿ 05: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 2018ರ ಕರ್ನಾಟಕ ವಿಧಾನಸಭೆ ಚುನಾವಣೆಯ ಬಿಜೆಪಿಯ ಸ್ಟಾರ್ ಪ್ರಚಾರಕರಾಗಿದ್ದು, ರಾಜ್ಯದಲ್ಲಿ ಹಲವು ಕಡೆಗಳಲ್ಲಿ ಸಮಾವೇಶ ಉದ್ದೇಶಿಸಿ ಅವರು ಪ್ರಚಾರ ಭಾಷಣ ಮಾಡಲಿದ್ದಾರೆ.

   ಅದರಂತೆ ರಾಜ್ಯ ಬಿಜೆಪಿ ರಾಜ್ಯಾದ್ಯಂತ ಕೈಗೊಂಡಿರುವ ಪರಿವರ್ತನಾ ಯಾತ್ರೆಗೆ ಮತ್ತಷ್ಟು ಶಕ್ತಿ ತುಂಬಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇದೇ ಜನವರಿ 7 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

   ಕರ್ನಾಟಕ ಚುನಾವಣೆ : ಯೋಗಿ ಆದಿತ್ಯನಾತ್ ಸ್ಟಾರ್ ಪ್ರಚಾರಕ

   ಅಂದು ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಅವರು ಭಾಗವಹಿಸಿ ಭಾಷಣ ಮಾಡಲಿದ್ದಾರೆ.

   UP CM Yogi Adityanath to visit Bengaluru on Jan 7 for participating in Parivarthana yatra

   ಯೋಗಿ ಆದಿತ್ಯನಾಥ್ ಅವರು ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ನಡೆಸಿದ್ದರಿಂದ ಬಿಜೆಪಿ ವರದಾನವಾಗಿತ್ತು. ಅದರಂತೆ ರಾಜ್ಯದಲ್ಲೂ ಅವರಿಂದ ಪ್ರಚಾರ ನಡೆಸಲು ಕೇಂದ್ರ ನಾಯಕರು ಚಿಂತನೆ ನಡೆಸಿದ ಹಿನ್ನೆಲೆಯಲ್ಲಿ 2ನೇ ಬಾರಿ ಕರ್ನಾಟಕಕ್ಕೆ ಯೋಗಿ ಆಗಮಿಸಲಿದ್ದಾರೆ.

   ಕಳೆದ ಡಿಸೆಂಬರ್ 21 ರಂದು ಹುಬ್ಬಳ್ಳಿಯಲ್ಲಿ ನಡೆದಿದ್ದ ಪರಿವರ್ತನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಯೋಗಿ ಆದಿತ್ಯನಾಥ್, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

   ಇದೀಗ ಮತ್ತೆ ಎರಡನೇ ಬಾರಿಗೆ ರಾಜ್ಯಕ್ಕೆ ಪರಿವರ್ತನಾ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಇವರ ಆಗಮನ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಲಿದೆ.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Uttar Pradesh Chief Minister Yogi Adityanath to visit Bengaluru on Jan 7. Yogi will be taking part in Karnataka BJP's Parivarthana yatra in Govindraj Nagar, Bengaluru on January 7th.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ