2ನೇ ಹಂತದ ಮೆಟ್ರೋ: ನಗರಾಭಿವೃದ್ಧಿ ಇಲಾಖೆ ಎಚ್ಚರಿಕೆ ಏನು?
ಬೆಂಗಳೂರು, ಜನವರಿ 11: ಎರಡನೇ ಹಂತದ ನಮ್ಮ ಮೆಟ್ರೋ ಮಾರ್ಗದ ಕಾಮಗಾರಿ ಮೇಲೆ ಕಣ್ಣಿಡಿ ಎಂದು ನಗರಾಭಿವೃದ್ಧಿ ಇಲಾಖೆ ಬಿಎಂಆರ್‌ಸಿಎಲ್‌ಗೆ ಸೂಚನೆ ನೀಡಿದೆ.
ಒಂದನೇ ಹಂತದ ಯೋಜನೆಯ ಮೆಟ್ರೋ ಮಾರ್ಗದಲ್ಲಿ ಕಂಡು ಬಂದ ಲೋಪದಿಂದ ಪಾಠ ಕಲಿತಿರುವ ಬಿಎಂಆರ್‌ಸಿಎಲ್ , ನಿರ್ಮಾಣ ಹಂತದಲ್ಲಿರುವ ಎರಡನೇ ಹಂತದ ಯೋಜನೆಯ ಮಾರ್ಗದ ಮೇಲೆ ಹೆಚ್ಚು ನಿಗಾ ಇರಿಸಿದೆ.
ನಾಯಂಡಹಳ್ಳಿ-ಕೆಂಗೇರಿ ಮತ್ತು ಯಲಚೇನಹಳ್ಳಿ-ಅಂಜನಾಪುರ ಟೌನ್‌ಶಿಪ್ ಮಾರ್ಗಗಳ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಈ ಮಾರ್ಗಗಳನ್ನು 2021 ಕ್ಕೆ ಸಂಚಾರ ಮುಕ್ತಗೊಳಿಸುವ ಗುರಿ ಹೊಂದಿದೆ. ನಿರ್ಮಾಣ ಹಂತದಲ್ಲೇ ತಪಾಸಣೆ ನಡೆಸಿ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು, ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕವೇನಾದರೂ ಲೋಪ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಟ್ರಿನಿಟಿ ಮೆಟ್ರೋ ನಿಲ್ದಾಣದ ವಯಾಡಕ್ಟ್‌ನ ಬೀಮ್‌ನಲ್ಲಿ ಕಾಂಕ್ರೀಟ್ ಶಿಥಿಲಗೊಂಡಿರುವುದು ಕೆಲ ವರ್ಷಗಳ ಹಿಂದೆಯೇ ಪತ್ತೆಯಾಗಿತ್ತು. ಆಗ ಸಣ್ಣ ದುರಸ್ತಿ ಕಾರ್ಯ ನಡೆಸಲಾಗಿತ್ತು. ಹಲವು ವರ್ಷಗಳ ಬಳಿಕ ಮತ್ತೆ ಸಮಸ್ಯೆ ಕಾಣಿಸಿಕೊಂಡಿದೆ.
ವಿಶೇಷ ಆಡಿಟ್: ಬೈಯಪ್ಪನಹಳ್ಳಿ-ಮೈಸೂರು ರಸ್ತೆ, ಯಲಚೇಹಳ್ಳಿ-ನಾಗಸಂದ್ರ ಮಾರ್ಗದ ಗುಣಮಟ್ಟ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಹೊರಗಿನ ಏಜೆನ್ಸಿಯೊಂದರಿಂದ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಸೂಕ್ತ ಏಜೆನ್ಸಿಗಳ ಹುಡುಕಾಟ ನಡೆಯುತ್ತಿದೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications