ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸೆ.10ರ ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಬೆಂಬಲ

By Gururaj
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08 : 'ಈಗ ಕರೆ ನೀಡಿರುವ ಬಂದ್ ಸಮಯೋಚಿತವಾಗಿದ್ದು, ಈ ಬಂದ್‌ಗೆ ಎಲ್ಲರೂ ಬೆಂಬಲ ಕೊಡಬೇಕು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, 'ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ತೀವ್ರ ಹೊರೆ ತಂದಿದೆ. ಈ ಬೆಲೆ ಏರಿಕೆ ವೈಜ್ಞಾನಿಕವಾಗಿಲ್ಲ. ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಬೇಕು' ಎಂದು ಒತ್ತಾಯಿಸಿದರು.

ಸೆ.10 ರಂದು ಭಾರತ ಬಂದ್, ಏನಿರುತ್ತೆ? ಏನಿರೋಲ್ಲ?ಸೆ.10 ರಂದು ಭಾರತ ಬಂದ್, ಏನಿರುತ್ತೆ? ಏನಿರೋಲ್ಲ?

'9 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಹೀಗೆ ಬೆಲೆ ಏರಿಕೆಯಾಗುತ್ತಲೇ ಇದ್ದರೆ ಜನ ಸಾಮಾನ್ಯರಪಾಡೇನು?. ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲವಿದೆ' ಎಂದು ಹೇಳಿದರು.

Vatal Nagaraj

'ಅಂಗಡಿ, ಹೋಟೆಲ್, ಚಿತ್ರಮಂದಿರ, ಆಟೋ, ಟ್ಯಾಕ್ಸಿ, ಬಸ್, ಲಾರಿ, ರೈಲು ಸೇರಿದಂತೆ ಎಲ್ಲಾ ಸೇವೆಗಳು ಸ್ಥಗಿತಗೊಳ್ಳಲಿವೆ. ಆಸ್ಪತ್ರೆ, ಔಷಧಿ, ಹಾಲು, ತರಕಾರಿ ಆಂಬ್ಯುಲೆನ್ಸ್‌ಗಳಿಗೆ ಮಾತ್ರ ಬಂದ್‌ನಿಂದ ವಿನಾಯಿತಿ ನೀಡಲಾಗಿದೆ' ಎಂದು ವಾಟಾಳ್ ನಾಗರಾಜ್ ಹೇಳಿದರು.

ತೈಲ ಬೆಲೆ ಏರಿಕೆಗೆ ವಿರೋಧ: ಸೆಪ್ಟೆಂಬರ್ 10ರಂದು ಭಾರತ್ ಬಂದ್‌ತೈಲ ಬೆಲೆ ಏರಿಕೆಗೆ ವಿರೋಧ: ಸೆಪ್ಟೆಂಬರ್ 10ರಂದು ಭಾರತ್ ಬಂದ್‌

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೆ.10ರಂದು ಭಾರತ್‌ ಬಂದ್‌ಗೆ ಕರೆ ನೀಡಿದೆ. ಹಲವು ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಬಂದ್‌ಗೆ ಬೆಂಬಲ ನೀಡಿವೆ.

English summary
Kannada Chaluvali Vatal Paksha president Vatal Nagaraj extended support for the Bharat Bandh called by the Congress on 10 September, 2018 over a fuel price hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X