ಕಾವೇರಿ ನಿರ್ವಹಣಾ ಮಂಡಳಿ: ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ

Posted By: Nayana
Subscribe to Oneindia Kannada

ಬೆಂಗಳೂರು,ಏಪ್ರಿಲ್ 12: ಯಾವುದೇ ಕಾರಣಕ್ಕೂ ಕಾವೇರಿ ನಿರ್ವಹಣಾ ಮಂಡಳಿ ರಚಿಸಬಾರದೆಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್. ಸಾ.ರಾ.ಗೋವಿಂದು ನೇತೃತ್ವದಲ್ಲಿ ಕಾರ್ಯಕರ್ತರು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

ತಮಿಳುನಾಡಿನಲ್ಲಿ ಎಲ್ಲ ಪಕ್ಷಗಳು ಪ್ರತ್ಯೇಕ ಪ್ರತಿಭಟನೆ ನಡಿಸಿ ಬ್ಲಾಕ್ ಮೇಲ್ ರಾಜಕಾರಣ ಮಾಡುತ್ತಿದ್ದಾರೆ. ಇದು ನಿಲ್ಲಬೇಕು. ನಟರಾದ ರಜನೀಕಾಂತ್ ಮತ್ತು ಕಮಲ್ ಹಾಸನ್ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನೀಚ ರಾಜಕಾರಣ ಮಾಡುತ್ತಿದ್ದಾರೆ. ಇವರು ಕನ್ನಡ ದ್ರೋಹಿಗಳು ಎಂದು ವಾಟಾಳ್ ಹೇಳಿದರು.

ರಾಜ್ಯ ಬಂದ್: ವಾಟಾಳ್ ನಾಗರಾಜರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ

ಇದಕ್ಕೂ ಮುನ್ನ ರಾಜಭವನ ಮುತ್ತಿಗೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ವಾಗಿ ಪೋಲಿಸರು ಜಿಪಿಒ ಕಚೇರಿ ಮುಂಭಾಗ ಬಾರಿಕೇಡ್ ಹಾಕಿ ಹೋರಾಟಗಾರರನ್ನು ವಶಪಡಿಸಿಕೊಂಡ ಬಿಡುಗಡೆ ಮಾಡಲಾಯಿತು. ಏಪ್ರಿಲ್ 12ರಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು.

Vatal opposes Cauvery management board formation

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ಏಪ್ರಿಲ್ ಐದರಂದು ತಮಿಳುನಾಡಿನಲ್ಲಿ ರಾಜ್ಯ ಬಂದ್ ನಡೆದಿತ್ತು. ಇದಕ್ಕೆ ಪ್ರತಿಯಾಗಿ ಏಪ್ರಿಲ್ ಹನ್ನೆರಡನೇ ತಾರೀಕು ಕರ್ನಾಟಕ ರಾಜ್ಯ ಬಂದ್ ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Pro Kannada activist and former MLA Vatal Nagaraj has opposed proposal of constitute Cauvery river management board and tried along with many activist to gherro Raj Bhavan in Bengalur on Thursday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ