ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಾಮ ಪಂಚಾಯ್ತಿಗಳಲ್ಲೂ ಶೀಘ್ರ ಘನತ್ಯಾಜ್ಯ ನಿರ್ವಹಣಾ ಘಟಕ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 30: ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಯಲ್ಲಿ ಶೀಘ್ರ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ ಮಾಡಲು ಆಲೋಚಿಸಲಾಗಿದ್ದು, ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಪಕ್ಷ 5 ರಿಂದ 6 ಗ್ರಾಮ ಪಂಚಾಯತ್ ಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಈ ಸಂಬಂಧ ಯೋಜನಾ ರೂಪುರೇಷೆಗಳನ್ನು ಸಿದ್ಧಪಡಿಸಿ ನವಂಬರ್ ಅಂತ್ಯದೊಳಗೆ ಸಲ್ಲಿಸಬೇಕು ಎಂದರು.

ಹಸಿ ಕಸ ನಿರ್ವಹಣೆ ಉತ್ತೇಜನಕ್ಕೆ ತೆರಿಗೆ ವಿನಾಯ್ತಿಗಾಗಿ ಅಭಿಯಾನ ಹಸಿ ಕಸ ನಿರ್ವಹಣೆ ಉತ್ತೇಜನಕ್ಕೆ ತೆರಿಗೆ ವಿನಾಯ್ತಿಗಾಗಿ ಅಭಿಯಾನ

ಕೇವಲ ನಗರ ಪ್ರದೇಶಗಳಲ್ಲಿ ಮಾತ್ರ ತ್ಯಾಜ್ಯ ನಿರ್ವಹಣೆ ಮಾಡಿದರೆ ಸಾಲದು ಇದು ಗ್ರಾಮೀಣ ಪ್ರದೇಶದಲ್ಲಿ ಕೂಡ ಆಗಬೇಕು ಆ ದಿಸೆಯಲ್ಲಿ ಹಂತ ಹಂತವಾಗಿ ಆಯ್ದ ಗ್ರಾಮ ಪಂಚಾಯತ್ ಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಗೆ ಅಗತ್ಯ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸಬೇಕೆಂದು ಅವರು ಸೂಚಿಸಿದರು.

Village panchayats will have SWM unit soon

ಈ ಯೋಜನೆಗೆ ಅಗತ್ಯವೆನಿಸಿದಲ್ಲಿ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ, ಸಮುದಾಯ ಮುಖ್ಯಸ್ಥರು ಹಾಗೂ ಆಸಕ್ತ ಲಾಭ ರಹಿತ ಸಂಘ ಸಂಸ್ಥೆಗಳ ಸಹಯೋಗ ಪಡೆದುಕೊಳ್ಳಬಹುದು.ಈ ಕುರಿತು ತಿಂಗಳ ಅಂತ್ಯದೊಳಗೆ ಅಗತ್ಯ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಸೂಚಿಸಿದರು.

 ಎಲ್ಲೆಂದರಲ್ಲಿ ಕಸ ಹಾಕೋರಿಗೆ ಪಾಠ ಕಲಿಸಲು ಈತ ಮಾಡಿದ ಉಪಾಯಕ್ಕೆ ಸಿಕ್ಕಿತು ಫಲ ಎಲ್ಲೆಂದರಲ್ಲಿ ಕಸ ಹಾಕೋರಿಗೆ ಪಾಠ ಕಲಿಸಲು ಈತ ಮಾಡಿದ ಉಪಾಯಕ್ಕೆ ಸಿಕ್ಕಿತು ಫಲ

ಶೌಚಾಲಯ ನಿರ್ಮಾಣ:ನವಂಬರ್ 1 ರಂದು ಕರ್ನಾಟಕವನ್ನು ಬಹಿರ್ದೆಸೆ ಬಯಲು ಮುಕ್ತ ಶೌಚಾಲಯ ರಾಜ್ಯ ಎಂದು ಘೋಸಿಸುವ ದಿಸೆಯಲ್ಲಿ ಶೌಚಾಲಯಗಳ ನಿರ್ಮಾಣ ಪ್ರಗತಿ ಬಗ್ಗೆ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ವಿಶೇಷವಾಗಿ ಚರ್ಚಿಸಿದ ಸಚಿವರು ನಿಗದಿತ ಗುರಿ ಮುಟ್ಟಿದ ಸಿ.ಇ.ಓ ಗಳಿಗೆ ಅಭಿನಂದಿಸಿದರು.

 ತ್ಯಾಜ್ಯ ಸುಡುವುದರಿಂದ ಈ 22 ಕಾಯಿಲೆಗಳು ಬರಬಹುದು ಹುಷಾರ್! ತ್ಯಾಜ್ಯ ಸುಡುವುದರಿಂದ ಈ 22 ಕಾಯಿಲೆಗಳು ಬರಬಹುದು ಹುಷಾರ್!

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣಕ್ಕೆ ಬೇಡಿಕೆ ಬಂದಲ್ಲಿ ಅದನ್ನು ಪರಿಗಣಿಸಬಹುದು, ಕೇಂದ್ರ ಸರ್ಕಾರ ಸಹ ಹೆಚ್ಚುವರಿ ಶೌಚಾಲಯಗಳ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದ ಹಾಗಾಗಿ ಬೇಡಿಕೆ ಇರುವ ಜಿಲ್ಲೆಗಳಲ್ಲಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ ಕೈಗೊಳ್ಳಬಹುದು ಎಂದು ಸಚಿವರು ತಿಳಿಸಿದರು.

English summary
Rural Development and Panchayat Raj department has planning to install solid waste management units in all the village panchayats in various faced manner in collaboration with local non profit organizations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X