ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೆಲಮಂಗಲ ಬಳಿ ಶೀಘ್ರ ಕಸದಿಂದ ವಿದ್ಯುತ್ ತಯಾರಿಕಾ ಘಟಕ: ಪರಮೇಶ್ವರ

|
Google Oneindia Kannada News

ಬೆಂಗಳೂರು, ನವೆಂಬರ್ 13: ತ್ಯಾಜ್ಯದಿಂದ ವಿದ್ಯುತ್ ತಯಾರಿಸುವ ಸಂಬಂಧ ಸತಾರಾಂ ಕಂಪನಿಗೆ ಈಗಿರುವ ಕನ್ನಳ್ಳಿ- ಸೀಗೆಹಳ್ಳಿಯಲ್ಲಿ ಪ್ರಾಯೋಗಿಕವಾಗಿ ನಡೆಸಲು ಹಾಗೂ ನೆಲಮಂಗಲದಲ್ಲಿ ಹೊಸದಾಗಿ ವಿದ್ಯುತ್ ತಯಾರಕಾ ಘಟಕ ನಿರ್ಮಿಸಲು ಅವಕಾಶ ನೀಡುವ ಸಂಬಂಧ ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ ಚರ್ಚಿಸಿದರು.

ಹಸಿ ಕಸ ನಿರ್ವಹಣೆ ಉತ್ತೇಜನಕ್ಕೆ ತೆರಿಗೆ ವಿನಾಯ್ತಿಗಾಗಿ ಅಭಿಯಾನ ಹಸಿ ಕಸ ನಿರ್ವಹಣೆ ಉತ್ತೇಜನಕ್ಕೆ ತೆರಿಗೆ ವಿನಾಯ್ತಿಗಾಗಿ ಅಭಿಯಾನ

ಬಿಬಿಎಂಪಿ ಹಿರಿಯ ಅಧಿಕಾರಿಗಳು ಹಾಗೂ ಸತಾರಾಂ ಕಂಪನಿ ಮುಖ್ಯಸ್ಥರೊಂದಿಗೆ ಅವರು ಮಂಗಳವಾರ ಸಭೆ ನಡೆಸಿದರು. ಸತಾರಾಂ ಈಗಾಗಲೇ ಚೆನ್ನೈ,ಯೂರೋಪ್, ಬ್ರೆಸಿಲ್‌ ಸೇರಿದಂತೆ 14 ನಲ್ಲಿ ವೇಸ್ಟ್‌ ಟು ಎನರ್ಜಿ ಪ್ಲಾಂಟ್‌ ನಡೆಸುತ್ತಿದೆ. ಇದೇ ಮಾದರಿಯಲ್ಲಿ ನೆಲಮಂಗಲದಲ್ಲಿ ಪ್ಲಾಂಟ್ ತೆರೆಯುವ ಸಂಬಂಧ ಪ್ರಾತ್ಯಕ್ಷಿಕೆ ವೀಕ್ಷಿಸಿದ ಪರಮೇಶ್ವರ್ ಅವರು, ಸಂಪೂರ್ಣ ಮಾಹಿತಿ ಪಡೆದರು.

ಎಲ್ಲೆಂದರಲ್ಲಿ ಕಸ ಹಾಕೋರಿಗೆ ಪಾಠ ಕಲಿಸಲು ಈತ ಮಾಡಿದ ಉಪಾಯಕ್ಕೆ ಸಿಕ್ಕಿತು ಫಲ ಎಲ್ಲೆಂದರಲ್ಲಿ ಕಸ ಹಾಕೋರಿಗೆ ಪಾಠ ಕಲಿಸಲು ಈತ ಮಾಡಿದ ಉಪಾಯಕ್ಕೆ ಸಿಕ್ಕಿತು ಫಲ

ಹೊಸದಾಗಿ ಪ್ಲಾಂಟ್‌ ನಿರ್ಮಾಣ ಹೆಚ್ಚು‌ ಸಮಯ ಹಿಡಿಯುವುದಲ್ಲದೇ, ಇದರ ನಿರ್ವಹಣದ ಗುಣಮಟ್ಟ ತಿಳಿಯಲು ಸಮಯ ಬೇಕಾಗಲಿದೆ. ಹೀಗಾಗಿ ಈಗಿರುವ ಸೀಗೆಹಳ್ಳಿ ಹಾಗೂ ಕಲ್ಲಳ್ಳಿ ಪ್ಲಾಂಟ್‌ನಲ್ಲಿಯೇ ಪ್ರಾಯೋಗಿಕವಾಗಿ ಕೆಲಸ ಪ್ರಾರಂಭಿಸುವುದು ಸೂಕ್ತ ಎಂಬ ಅಭಿಪ್ರಾಯ ಹೊರಹಾಕಿದರು.

ತ್ಯಾಜ್ಯ ಸುಡುವುದರಿಂದ ಈ 22 ಕಾಯಿಲೆಗಳು ಬರಬಹುದು ಹುಷಾರ್! ತ್ಯಾಜ್ಯ ಸುಡುವುದರಿಂದ ಈ 22 ಕಾಯಿಲೆಗಳು ಬರಬಹುದು ಹುಷಾರ್!

Waste to energy plant soon in Nelamangala

ಒಟ್ಟಾರೆ ಇನ್ನು ಕೆಲವೇ ದಿನಗಳಲ್ಲಿ ವೇಸ್ಟ್‌ ಟು ಎನರ್ಜಿ ಪ್ಲಾಂಟ್‌ ನಿರ್ಮಾಣ ಮಾಡುವ ಸಂಬಂಧ ಕ್ಯಾಬಿನೆಟ್‌ನಲ್ಲಿಯು ಶೀಘ್ರವೇ ಒಪ್ಪಿಗೆ ಪಡೆದು ಕನಿಷ್ಠ ಒಂದು ಪ್ಲಾನ್‌ ನಿರ್ಮಿಸಿ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದರು. ಅಪರ ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್, ಬಿಎಂಆರ್‌ಡಿಎ ಆಯುಕ್ತ ಮೋಹನ್ ರಾಜ್, ಬಿಡಿಎ ಆಯುಕ್ತ ರಾಜೇಶ್ ಇತರೆ ಅಧಿಕಾರಿಗಳು ಇದ್ದರು.

English summary
Deputy chief minister Dr.G. Parameshwar has said that another waste to energy plant will be installed in Nelamangala soon as tender was allotted Sataram company.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X