ವಿಡಿಯೋ: ಬಸವನಗುಡಿಯ ಹಿಂದೂ ಸಮಾಜೋತ್ಸವ
ಬೆಂಗಳೂರು, ಫೆ.8: ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜನೆಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವ ವೆಬ್ ನಲ್ಲಿ ನೇರವಾಗಿ ಪ್ರಸಾರ ಮಾಡಲಾಯಿತು.
ಹಿಂದೂ ಮುಖಂಡ ಪ್ರವೀಣ್ ತೊಗಾಡಿಯಾ ಅನುಪಸ್ಥಿತಿಯ ನಡುವೆ 50ಕ್ಕೂ ಅಧಿಕ ಸ್ವಾಮೀಜಿಗಳು, ಆರೆಸ್ಸೆಸ್ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಸಮಾಜದ ಜನತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಪೊಲೀಸ್ ಬಿಗಿ ಬಂದೋ ಬಸ್ತ್ ಸಮಾಜೋತ್ಸವಕ್ಕೆ ಒದಗಿಸಲಾಗಿದೆ.
ಗೋಪೂಜೆ, ವೇದಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಕಳೆ ಕಟ್ಟಿದೆ. ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಸಂವಾದ.ಆರ್ಗ್ ಸಂಸ್ಥೆ ಗಳು ಲೈವ್ ಆಗಿ ಪ್ರಸಾರ ಮಾಡುತ್ತಿವೆ. ಕಾರ್ಯಕ್ರಮದ ವಿಸ್ತೃತ ವರದಿ ಮುಂದೆ ನಿರೀಕ್ಷಿಸಿ

ವಿಶ್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು ನಗರ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ವಿಎಚ್ಪಿಯು ಅವರ ವಿಡಿಯೋ ಭಾಷಣವನ್ನು ಸಮಾಜೋತ್ಸವ ಸಂದರ್ಭದಲ್ಲಿ ಬಿತ್ತರಿಸಲು ಸಿದ್ಧತೆ ನಡೆಸಿತ್ತು.ಅದರೆ, ಇದಕ್ಕೂ ನಿರ್ಬಂಧ ಹೇರಲಾಗಿದೆ.
ಪ್ರವೀಣ್ ಅವರ ಭಾಷಣದ ದೃಶ್ಯ ಅಥವಾ ಧ್ವನಿ ಮುದ್ರಿತ ನೇರ ಪ್ರಸಾರಕ್ಕೆ ಅನುಮತಿ ನೀಡಿಲ್ಲ. ಪ್ರವೀಣ್ ಅವರಿಗೆ ವಿಧಿಸಿರುವ ನಿರ್ಬಂಧದಲ್ಲಿ ಇದೂ ಸೇರಿದೆ ಎಂದು ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಸ್ಪಷ್ಟಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. [ತೊಗಾಡಿಯಾ ವಿಡಿಯೋ ಭಾಷಣಕ್ಕೂ ನಿರ್ಬಂಧ]
VHP Goldem Jubilee Commitee chief Dr Veerendra Heggade, Dr M Mohan Alva, 50+ Swamijis on stage. Event is LIVE on http://t.co/N39f4U5kc0
— Rajesh Padmar (@rajeshpadmar) February 8, 2015 ಉಪಸ್ಥಿತಿ: ಪೇಜಾವರಶ್ರೀಗಳು ಸೇರಿದಂತೆ 50ಕ್ಕೂ ಅಧಿಕ ಸ್ವಾಮೀಜಿಗಳು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸೇರಿದಂತೆ ಅನೇಕ ಧರ್ಮದರ್ಶಿಗಳು, ಆರ್ ಅಶೋಕ್, ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಉಪಸ್ಥಿತರಿದ್ದಾರೆ.

ಹಿಂದೂ ಸಮಾಜೋತ್ಸವದ ಲೈವ್ ವಿಡಿಯೋ ನೋಡಿ
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications