ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ರಮ ಬಾಂಗ್ಲಾ ವಲಸಿಗರನ್ನು ವಾಪಸ್ ಕಳಿಸುತ್ತೇವೆ : ಪರಮೇಶ್ವರ

By Gururaj
|
Google Oneindia Kannada News

ಬೆಂಗಳೂರು, ಆಗಸ್ಟ್ 07 : 'ಬೆಂಗಳೂರು ನಗರದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರನ್ನು ಗುರುತಿಸಲಾಗಿದೆ. ಅವರನ್ನು ವಾಪಸ್ ಕಳಿಸುತ್ತೇವೆ' ಎಂದು ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, 'ಬೆಂಗಳೂರಲ್ಲಿರುವ ಅಕ್ರಮ ವಲಸಿಗರನ್ನು ನಾವು ಗುರುತಿಸಿದ್ದೇವೆ. ವೀಸಾ ಅವಧಿ ಮುಗಿದ 100 ಕ್ಕೂ ಅಧಿಕ ಆಫ್ರಿಕನ್ ಪ್ರಜೆಗಳು ನಗರದಲ್ಲಿದ್ದಾರೆ' ಎಂದು ಹೇಳಿದರು.

ರಾಷ್ಟ್ರೀಯ ಪೌರತ್ವ ನೋಂದಣಿ ಎಂದರೇನು?, ವಿವಾದ, ವಿವರರಾಷ್ಟ್ರೀಯ ಪೌರತ್ವ ನೋಂದಣಿ ಎಂದರೇನು?, ವಿವಾದ, ವಿವರ

We are sending Bangladeshis back says G Parameshwara

'ಯಾವುದೇ ಸೂಕ್ತ ದಾಖಲೆಗಳಿಲ್ಲದ ವ್ಯಕ್ತಿಗಳನ್ನು ಬೆಂಗಳೂರು ನಗರದಲ್ಲಿ ಇರಲು ಬಿಡುವುದಿಲ್ಲ. ಅಕ್ರಮ ವಲಸಿಗರನ್ನು ವಾಪಸ್ ಕಳಿಸುತ್ತೇವೆ' ಎಂದು ಗೃಹ ಸಚಿವರು ಭರವಸೆ ನೀಡಿದರು.

ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಿದ್ದಾರೆ 123 ಆಫ್ರಿಕನ್‌ ಪ್ರಜೆಗಳುಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಿದ್ದಾರೆ 123 ಆಫ್ರಿಕನ್‌ ಪ್ರಜೆಗಳು

ಕಳೆದ ವಾರ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಬಗ್ಗೆ ದೇಶದಲ್ಲಿ ಭಾರೀ ಚರ್ಚೆ ನಡೆಯಿತು. ಬೆಂಗಳೂರಿನಲ್ಲಿಯೂ ಬಾಂಗ್ಲಾದ ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂಬ ಚರ್ಚೆ ಆರಂಭವಾಯಿತು. ಆಗ ಪರಮೇಶ್ವರ ಅವರು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.

ಕುಮಾರಸ್ವಾಮಿ ಏನು ಹೇಳಿದ್ದರು? : 2015ರಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಕರ್ನಾಟಕದಲ್ಲಿ 40 ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಹೇಳಿದ್ದರು. ಅಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಪತ್ರ ಬರೆದಿದ್ದ ಕುಮಾರಸ್ವಾಮಿ ರಾಜ್ಯದಲ್ಲಿರುವ ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು.

English summary
Karnataka Deputy Chief Minister, Home minister G. Parameshwara on Tuesday said that, We have identified, there are Bangladeshis in Bengaluru and we are sending them back.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X