'ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸದಿದ್ದರೆ ಹೋರಾಟ'

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 17 : ರಾಜಮಹಲ್ ವಿಲಾಸ್ ಬಡಾವಣೆ ಅಕ್ರಮ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಸಿಬಿ ಎಫ್ಐಆರ್ ದಾಖಲಿಸದಿದ್ದರೆ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ಮುಖಂಡ ಬಿ.ಜೆ ಪುಟ್ಟಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಭೂಹಗರಣ, ಸಿದ್ದರಾಮಯ್ಯ ವಿರುದ್ಧ ಎಸಿಬಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಈಗಾಗಲೇ ಭೂಪಸಂದ್ರದ ಬಳಿ ರಾಜಮಹಲ್ ವಿಲಾಸ್ ಬಡಾವಣೆ ಅಕ್ರಮ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದು, ಒಂದು ವಾರದೊಳಗೆ ಎಫ್ ಐಆರ್ ದಾಖಲಿಸದಿದ್ದರೇ ಎಸಿಬಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

We move High Court if ACB fails to register FIR against Siddaramaiah-BJ Puttaswamy

ಪ್ರತಿಭಟನೆ ಮಾಡುವುದು ಅಷ್ಟೇ ಅಲ್ಲದೆ ಈ ಸಂಬಂಧ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ನಲ್ಲೂ ಕೇಸ್ ದಾಖಲಿಸುವುದಾಗಿ ತಿಳಿಸಿದರು.

ಸಿದ್ದರಾಮಯ್ಯ ಅವರು ಭೂಪಸಂದ್ರದ ಬಳಿ 300 ಕೋಟಿ ರು. ಬೆಲೆ ಬಾಳುವ ಜಾಗವನ್ನು ಅಕ್ರಮವಾಗಿ ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಸೋಮವಾರ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಗೆ ದೂರು ನೀಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
We move High Court if ACB fails to register FIR against CM Siddaramaiah in land denotification case, said BJP MLC BJ Puttaswamy, On OCt 17th.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ