ಜಾಗತಿಕ ತಾಪಮಾನ ತಗ್ಗಿಸಲು ಪಣತೊಡೋಣ: ಅನಂತ ಕುಮಾರ್
ಜಗತ್ತಿನ ತಾಪಮಾನವನ್ನು 2 ಡಿಗ್ರಿಯಷ್ಟು ಕಡಿಮೆ ಮಾಡಲು ಎಲ್ಲ ರಾಷ್ಟ್ರಗಳೂ ಒಟ್ಟಿಗೆ ಸೇರಿ ಶ್ರಮ ಪಡಬೇಕು ಎಂದು ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ಅಭಿಪ್ರಾಯಪಟ್ಟರು. 'ವಿಶ್ವ ಪರಿಸರ ದಿನಾಚರಣೆ'ಯ ಅಂಗವಾಗಿ ಬೆಂಗಳೂರು ವಿಶ್ವ ವಿದ್ಯಾಲಯದ ಸಹಯೋಗದಲ್ಲಿ ಅದಮ್ಯ ಚೇತನ ಸಂಸ್ಥೆ ಬೆಂಗಳೂರು ವಿಶ್ವ ವಿದ್ಯಾಲಯ ಆವರಣದಲ್ಲಿ ಜೂನ್ 5 ರಂದು ಹಮ್ಮಿಕೊಂಡಿದ್ದ ಸಹಸ್ರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.
ವಿಶ್ವ ಪರಿಸರ ದಿನಾಚರಣೆ ಆಚರಿಸುತ್ತಿರುವ ಸಂದರ್ಭದಲ್ಲಿ ಬಹಳ ನೋವಿನ ಘಟನೆ ನಡೆದಿರುವುದೆಂದರೆ ಅಮೇರಿಕಾ ದೇಶ ಪ್ಯಾರಿಸ್ ನಲ್ಲಿ ನಡೆದಂತಹ ವಿಶ್ವ ಪರಿಸರ ಶೃಂಗ ಸಭೆಯ ವಿಶ್ವ ನಿರ್ಣಯದಿಂದ ಹಿಂದೆ ಸರಿದಿದೆ. ಇದು ನೆಮ್ಮೆಲ್ಲರಿಗೆ ಕಳವಳನ್ನುಂಟು ಮಾಡುವ ಸಂಗತಿ. ಹವಾಮಾನ ವೈಪರೀತ್ಯಗಳನ್ನು ಎದುರಿಸುತ್ತಿರುವ ಇಂದಿನ ದಿನಗಳಲ್ಲಿ ಎಲ್ಲ ದೇಶಗಳೂ ಒಂದಾಗಿ ಯೋಜನೆಗಳನ್ನು ರೂಪಿಸಬೇಕಾಗಿದೆ. ಅಮೆರಿಕಾ ದೇಶವು ಪ್ಯಾರಿಸ್ ಒಪ್ಪಂದದಿಂದ ಹೊರಬಂದಿರುವುದು ಸರಿಯಾದ ಕ್ರಮವಲ್ಲ ಎಂದು ಅನಂತ ಕುಮಾರ್ ಬೇಸರ ವ್ಯಕ್ತಪಡಿಸಿದರು.

ಕೆಂಪೇಗೌಡರ ದೂರದೃಷ್ಟಿಯ ಫಲವಾಗಿ ಬೆಂಗಳೂರಿನ ಸುತ್ತಮುತ್ತ ಹಲವು ಕೆರೆಗಳಿದ್ದವು, ಅವುಗಳಲ್ಲಿ ಹಲವು ಕೆರೆಗಳು ಇಂದು ವಿನಾಶವಾಗಿವೆ. ಅಳಿದುಳಿದ ಕೆರೆಗಳು ಬತ್ತಿಹೋಗಿವೆ. ಇದಕ್ಕೆ ಕಾರಣ ಪರಿಸರವನ್ನು ಕಾಪಾಡಿಕೊಳ್ಳದೆ ಇರುವುದು. ಕೆರೆಗಳನ್ನು ಪುನಶ್ಚೇತನಗೊಳಿಸಲು ಕೂಡಲೇ ಕ್ರಮ ಕೈಗೊಳ್ಳಬೇಕಿದೆ. ಕೆರೆಗಳನ್ನು ಭೂಗಳ್ಳರಿಂದ ವಶಪಡಿಸಿಕೊಂಡು ಅಭಿವೃದ್ಧಿ ಪಡಿಸಬೇಕಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.[ಹಸಿರು ಬೆಂಗಳೂರಿಗಾಗಿ ಅದಮ್ಯ ಚೇತನದಿಂದ 'ಸಸ್ಯಾಗ್ರಹ']
ಬೆಂಗಳೂರು ವಿವಿ ಆವರಣದಲ್ಲಿ ವೃಷಭಾವತಿ ನದಿ ಹರಿಯುತ್ತಿದ್ದು ನೀರು ಸಂಪೂರ್ಣ ಕಲುಷಿತಗೊಂಡಿದೆ. ಇದನ್ನು ಸ್ವಚ್ಛಗೊಳಿಸಿ ಅದೇ ನೀರನ್ನು ಬಳಸಿಕೊಳ್ಳುವ ಯೋಜನೆಯನ್ನು ಕೈಗೆತ್ತಿಕೊಳ್ಳಲು ಸಂಪೂರ್ಣ ಯೋಜನಾ ವರದಿಗೆ (ಡಿಟೇಲ್ ಪ್ರಾಜೆಕ್ಟ್ ರಿಪೋರ್ಟ್) ಸಿದ್ಧಪಡಿಸಲು ಅದಮ್ಯ ಚೇತನ ಸಂಸ್ಥೆಯಿಂದ ಹಣಕಾಸಿನ ನೆರವನ್ನು ನೀಡುವ ಭರವಸೆ ನೀಡಿದರು.

ಇಂದು ಮಾನವನ ನಿರ್ಲಕ್ಷ್ಯದಿಂದಾಗಿ ಪರಿಸರ ಹಾಳಾಗಿದ್ದು ಪರಿಸರದ ಸಮತೋಲನ ಕಾಪಾಡುವ ದೃಷ್ಟಿಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಐದು ಸಹಸ್ರ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಅದಮ್ಯ ಚೇತನ ಸಂಸ್ಥೆಯು ಹಮ್ಮಿಕೊಂಡಿದೆ.
ಕಾರ್ಯಕ್ರಮದಲ್ಲಿ ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥರಾದ ಡಾ.ತೇಜಸ್ವಿನಿ ಅನಂತ ಕುಮಾರ್, ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಮುನಿರಾಜು, ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ.ಬಿ ಕೆ ರವಿ, ವಿಧಾನ ಪರಿಷತ್ ಸದಸ್ಯರಾದ ವಿ ಸೋಮಣ್ಣ, ಶಾಸಕರಾದ ರವಿ ಸುಬ್ರಹ್ಮಣ್ಯ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ಪಾಲಿಕೆ ಸದಸ್ಯರುಗಳಾದ ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ಪ್ರತಿಭಾ ಧನರಾಜ್, ವಾಣಿ ವಿ.ರಾವ್, ಅದಮ್ಯ ಚೇತನ ಸಂಸ್ಥೆಯ ವಿದ್ಯಾಶಂಕರ್ ಹಾಗೂ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications